ಒಂದು ವಾರದ ಗಡುವು : ಜೆಡಿಎಸ್ ಜಿಲ್ಲಾಧ್ಯಕ್ಷ ಸೂರಜ್ ನೇಮಕಾತಿಯನ್ನು ಖಂಡಿಸಿ ಸಾಮೂಹಿಕ ರಾಜೀನಾಮೆಯ ಎಚ್ಚರಿಕೆ
One week deadline: JDS district president warns of mass resignations condemning Suraj's appointment
ಕಾರವಾರ 12 : ಉತ್ತರ ಕನ್ನಡ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷಾಗಿ ಸೂರಜ್ ಸೋನಿ ನೇಮಕಾತಿಯು ವಾಮಮಾರ್ಗದ ಮೂಲಕ ಆಗಿದ್ದು, ಇದನ್ನು ತೀವ್ರವಾಗಿ ಖಂಡಿಸುತ್ತೇವೆ .ವರಿಷ್ಠರು ಈ ರೀತಿ ಹೇರಿಕೆ ಮಾಡಬಾರದಿತ್ತು ಎಂದು ಜೆಡಿಎಸ್ ಮೂಲ ಪದಾಧಿಕಾರಿಗಳು ಸಾಮೂಹಿಕ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಳೆದ 15 ವರ್ಷಗಳಿಂದ ಪಕ್ಷದ ಉಪಾಧ್ಯಕ್ಷರಾಗಿ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಾ ಬಂದಿರುವ ಜಿ.ಕೆ. ಪಟಗಾರ ಅವರನ್ನು ಕಡೆಗಣಿಸಿ, ಸೂರಜ್ ನಾಯ್ಕ ಸೋನಿ ಅವರನ್ನು ಏಕಾಏಕಿ ಜಿಲ್ಲಾಧ್ಯಕ್ಷರನ್ನಾಗಿ ಘೋಷಿಸಿರುವುದು ಪಕ್ಷದ ಕಾರ್ಯಕರ್ತರು ಮತ್ತು ಪದಾಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗಿದೆ ಎಂದು ಜೆಡಿಎಸ್ ನಿಷ್ಠಾವಂತ ಪದಾಧಿಕಾರಿಗಳು ಹೇಳಿದರು.
ಕಾರವಾರದ ಪತ್ರಿಕಾಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಚುನಾವಣೆ ಮೂಲಕ ಆಯ್ಕೆಯಾದ ಜಿಲ್ಲಾಧ್ಯಕ್ಷ ಜಿ.ಕೆ. ಪಟಗಾರ ಮಾತನಾಡಿ, ಕಳೆದ ಸಾಕಷ್ಟು ವರ್ಷದಿಂದ ಜಿಲ್ಲಾ ಉಪಾಧ್ಯಕ್ಷ ನಾಗಿ ಕಾರ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಸಂಘಟನೆಗೆ ದುಡಿದಿದ್ದೇನೆ. ಜಿಲ್ಲಾಧ್ಯಕ್ಷರಾಗಿದ್ದ ಗಣಪಯ್ಯ ಗೌಡ ಅವರಿಗೆ ಅಪಘಾತವಾಗಿದ್ದ ಸಂದರ್ಭದಲ್ಲಿ ಹೆಚ್ಚಿನ ಜವಾಬ್ದಾರಿ ಹೊತ್ತು, ಪಕ್ಷದಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸಿದ್ದೇನೆ. ಜಿಲ್ಲೆಯಲ್ಲಿ ಪಕ್ಷ ಸಂಘಟನೆಗಾಗಿ ಸದಸ್ಯತ್ವ ಮಾಡಿದ್ದೇನೆ. ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ಪಕ್ಷದ ವರಿಷ್ಠರ ಆದೇಶದಂತೆ ಚುನಾವಣೆ ಮಾಡಿ ನನ್ನ ಜಿಲ್ಲಾಧ್ಯಕ್ಷನಾಗಿ ಆಯ್ಕೆ ಮಾಡಲಾಗಿತ್ತು. ಉತ್ತರ ಕರ್ನಾಟಕದ ಸಮಾವೇಶದ ಸಂದರ್ಭದಲ್ಲಿ ವರಿಷ್ಠರು ಏಕಾಏಕಿ ಸೂರಜ್ ಸೋನಿ ಜಿಲ್ಲಾಧ್ಯಕ್ಷ ಎಂದು ಘೋಷಣೆ ಮಾಡಿದ್ದಾರೆ.
ಇದು ಪ್ರಾಮಾಣಿಕವಾಗಿ ಕಳೆದ ಅನೇಕ ವರ್ಷದಿಂದ ಜೆಡಿಎಸ್ ಪಕ್ಷದಲ್ಲಿ ದುಡಿದವರಿಗೆ ಅನ್ಯಾಯವಾಗಿದೆ. ಇದು ಸರಿಪಡಿಸಬೇಕು. ಒಂದುವಾರ ಗಡುವು ನೀಡುತ್ತಿದ್ದೇನೆ. ಯಾವುದೇ ಕ್ರಮ ಆಗದೆ ಇದ್ದರೆ ಸಾಮೂಹಿಕ ರಾಜೀನಾಮೆ ನೀಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.ಚುನಾವಣಾಧಿಕಾರಿ ರಾಘವೇಂದ್ರ ಮಡಿವಾಳ ಅವರ ಸಮ್ಮುಖದಲ್ಲಿ ಯಲ್ಲಾಪುರದಲ್ಲಿ ನಡೆದ ಸಾಂಸ್ಥಿಕ ಚುನಾವಣೆಯಲ್ಲಿ 65 ಸದಸ್ಯರ ಬೆಂಬಲದೊಂದಿಗೆ ಜಿ.ಕೆ. ಪಟಗಾರ ಅವರು ಅಧಿಕೃತವಾಗಿ ಆಯ್ಕೆಯಾಗಿದ್ದರು. ಅವರಿಗೆ ಗುರುತಿನ ಚೀಟಿಯನ್ನು ಸಹ ನೀಡಲಾಗಿತ್ತು. ಮಾಜಿ ಜಿಲ್ಲಾಧ್ಯಕ್ಷ ಗಣಪಯ್ಯ ಗೌಡರ ಅವಧಿಯಲ್ಲಿಯೂ ಸಕ್ರಿಯರಾಗಿದ್ದ ಪಟಗಾರ ಅವರು, ಜಿಲ್ಲಾಧ್ಯಕ್ಷರ ಅನುಪಸ್ಥಿತಿಯಲ್ಲಿ ಪಕ್ಷ ಸಂಘಟನೆಯ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದರು. ಹೀಗಿದ್ದರೂ, ಹೈಕಮಾಂಡ್ ಚುನಾವಣಾ ಪ್ರಕ್ರಿಯೆಯನ್ನು ಬದಿಗೊತ್ತಿ ಹೊಸಬರನ್ನು ನೇಮಿಸಿರುವುದು ಅಚ್ಚರಿ ಮೂಡಿಸಿದೆ ಎಂದರು.
ಹಿರಿಯ ಧುರೀಣ ರಮೇಶ ನಾಯ್ಕ ಮಾತನಾಡಿ ವರಿಷ್ಠರು ಪಕ್ಷಕ್ಕಾಗಿ ದುಡಿಯುವವರನ್ನು ಬಿಟ್ಟು ’ಬಕೆಟ್’ ಹಿಡಿಯುವವರಿಗೆ ಮಣೆ ಹಾಕುತ್ತಿದ್ದಾರೆ ಎಂದು ನೇರ ಪ್ರಹಾರ ನಡೆಸಿದರು. ಸೂರಜ್ ಸೋನಿ ಅವರು ಈವರೆಗೂ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನೂ ಪಡೆದಿಲ್ಲ ಮತ್ತು ಯಾವುದೇ ಪಕ್ಷದ ಚಟುವಟಿಕೆಗಳಲ್ಲಿ ಭಾಗಿಯಾಗಿಲ್ಲ. ಇಂತಹ ವ್ಯಕ್ತಿಯನ್ನು ಏಕಾಏಕಿ ಅಧ್ಯಕ್ಷರನ್ನಾಗಿ ಮಾಡಿರುವುದು ಕೇವಲ ಪಟಗಾರ ಅವರಿಗೆ ಮಾಡಿದ ಅನ್ಯಾಯವಲ್ಲ, ಬದಲಾಗಿ ಇಡೀ ಒಕ್ಕಲಿಗ ಸಮುದಾಯಕ್ಕೆ ಮಾಡಿದ ಅವಮಾನ ಎಂದು ಅವರು ಕಿಡಿಕಾರಿದ್ದಾರೆ. ವಾರ ಗಡುವು :ಪಕ್ಷದ ವರಿಷ್ಠರು ತಮ್ಮ ನಿರ್ಧಾರವನ್ನು ಮರುಪರೀಶೀಲಿಸಿ, ಪ್ರಜಾಪ್ರಭುತ್ವ ಮಾದರಿಯಲ್ಲಿ ಆಯ್ಕೆಯಾದ ಜಿ.ಕೆ. ಪಟಗಾರ ಅವರಿಗೆ ನ್ಯಾಯ ಒದಗಿಸಬೇಕು ಎಂದು ಬಂಡಾಯ ನಾಯಕರು ಒತ್ತಾಯಿಸಿದ್ದಾರೆ. ಈ ನಿಟ್ಟಿನಲ್ಲಿ ಪಕ್ಷಕ್ಕೆ ಒಂದು ವಾರದ ಕಾಲಾವಕಾಶ ನೀಡಲಾಗಿದ್ದು, ಅಷ್ಟರೊಳಗೆ ಸರಿಪಡಿಸದಿದ್ದಲ್ಲಿ ಜಿಲ್ಲೆಯ ಪ್ರಮುಖ ಪದಾಧಿಕಾರಿಗಳು ಮತ್ತು ಬೆಂಬಲಿಗರು ಸಾಮೂಹಿಕವಾಗಿ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಶೇಖರ್ ಪೂಜಾರಿ, ಗೋವಿಂದೇ ಗೌಡ, ಈಶ್ವರ ನಾಯ್ಕ.ರಮೇಶ್ ನಾಯ್ಕ ಸೇರಿದಂತೆ ಎಲ್ಲಾ ತಾಲೂಕು ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.....
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 