ಶ್ರದ್ಧೆ, ಭಕ್ತಿಯಿಂದ ಕಂಪಿಸಿದ ಓಣಿಕೇರಿ: ವಿಜೃಂಭಣೆಯಿಂದ ನಡೆದ ಶ್ರೀ ದುರ್ಗಾದೇವಿ ಜಾತ್ರೆ
Onikeri vibrates with devotion and devotion: Sri Durgadevi fair held with grandeur
ಮುಂಡಗೋಡ 22: ತಾಲ್ಲೂಕಿನ ಓಣಿಕೇರಿ ಗ್ರಾಮದಲ್ಲಿ ಆರಾಧ್ಯ ದೈವ ಶ್ರೀ ದುರ್ಗಾದೇವಿ ಜಾತ್ರಾ ಮಹೋತ್ಸವ ಶ್ರದ್ಧೆ, ಭಕ್ತಿಯಿಂದ ವಿಜೃಂಭಣೆಯಿಂದ ನಡೆಯಿತು. ದೇವಾಲಯವು ಹೂವಿನ ಅಲಂಕಾರ ಮತ್ತು ವಿದ್ಯುತ್ ದೀಪಗಳಿಂದ ಸಿಂಗರಿಸಲಾಗಿದ್ದು, ಗ್ರಾಮವೀಡೀ ಹಬ್ಬದ ವಾತಾವರಣಕ್ಕೆ ಮೆರಕು ನೀಡಿತ್ತು. ಜಾತ್ರೆಯ ಅಂಗವಾಗಿ ಪೂರ್ವಸಂಧ್ಯೆಯಲ್ಲಿ ವಿಶೇಷ ಪೂಜೆ, ಅಭಿಷೇಕ ಮತ್ತು ಉಡಿ ತುಂಬುವ ಕಾರ್ಯಕ್ರಮಗಳು ನೆರವೇರಿತು.
ಜಾತ್ರೆ ದಿನ ದೇವಿಗೆ ವಿಶೇಷ ಅಲಂಕಾರ ಮಾಡಿ ಮಹಾಪೂಜೆ ಸಲ್ಲಿಸಲಾಯಿತು. ಬೆಳಗ್ಗೆಯಿಂದಲೇ ಭಕ್ತರು ಸಾಲುಗಟ್ಟಿ ದೇವಿಯ ದರ್ಶನ ಪಡೆದರು ಮತ್ತು ತಮ್ಮ ಹರಕೆಗಳನ್ನು ಸಲ್ಲಿಸಿದರು. ಅನ್ನಸಂತರೆ್ಣ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಪ್ರಸಾದ ಸ್ವೀಕರಿಸಿದರು. ಮಹಿಳೆಯರು, ಮಕ್ಕಳು, ಯುವಕರು ಸೇರಿದಂತೆ ಎಲ್ಲಾ ವರ್ಗದ ಜನರು ಜಾತ್ರೆಯಲ್ಲಿ ಪಾಲ್ಗೊಂಡು ಹಬ್ಬದ ಉತ್ಸವವನ್ನು ರೂಪಿಸಿದರು. ಮುಂಡಗೋಡ, ಓಣಿಕೇರಿ, ಓರಲಗಿ, ಹವಗಿ, ಕಳಗಿನಕೊಪ್ಪ ಬೆಳವಟಗಿ ಗ್ರಾಮಸ್ಥರು ಮತ್ತು ಸದ್ಭಕ್ತ ಮಂಡಳಿ, ದೇವಾಲಯ ಸಮಿತಿ ಮತ್ತು ಯುವಕರ ಸಹಕಾರದಿಂದ ಜಾತ್ರೆ ಶಾಂತಿ ಮತ್ತು ಸೌಹಾರ್ದತೆಯೊಂದಿಗೆ ಯಶಸ್ವಿಯಾಗಿ ಮುಗಿಯಿತು. ಸುತ್ತಮುತ್ತಲಿನ ಗ್ರಾಮಗಳಿಂದಲೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 