ಶಿಕ್ಷಣ ಮಾತ್ರ ವಿದ್ಯಾರ್ಥಿಯ ಜೀವನವನ್ನು ಬೆಳಸುವಂತದ್ದು : ಡಾ.ಬಿ.ಎಂ.ತುರಡಗಿ.

ಶಿಕ್ಷಣ ಮಾತ್ರ ವಿದ್ಯಾರ್ಥಿಯ ಜೀವನವನ್ನು ಬೆಳಸುವಂತದ್ದು : ಡಾ.ಬಿ.ಎಂ.ತುರಡಗಿ. Only education can enrich a student's life: Dr. B.M. Turadagi

ಲೋಕದರ್ಶನ ವರದಿ 

 ಗೋಕಾಕ 08 : ನಗರದ ಪ್ರತಿಷ್ಠಿತ ಗೋಕಾಕ ಶಿಕ್ಷಣ ಸಂಸ್ಥೆಯ ಜೆ.ಎಸ್‌.ಎಸ್ ಪದವಿ ಮಹಾವಿದ್ಯಾಲಯದಲ್ಲಿ 2026-27ನೇ ಸಾಲಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಸ್ವಾಗತ ಹಾಗೂ ಪುನಶ್ಚೇತನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ.ಬಿ.ಎಂ.ತುರಡಗಿರವರು ಮಾತನಾಡಿ ವಿದ್ಯಾರ್ಥಿಗಳು ಉನ್ನತ ಗುರಿಗಳನ್ನು ಹೊಂದಿ ಶಿಸ್ತು, ಸಮಯಪಾಲನೆ ಮತ್ತು ನಿರಂತರ ಅಧ್ಯಯನದ ಮೂಲಕ ಯಶಸ್ಸು ಸಾಧಿಸಬೇಕು. ಶಿಕ್ಷಣ ಮಾತ್ರ ವಿದ್ಯಾರ್ಥಿಯ ಜೀವನವನ್ನು ಬೆಳೆಸುವಂತದ್ದು ಎಂದು ಮಾರ್ಗದರ್ಶನ ನೀಡಿದರು.

ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಸಂತೋಷ ಚವ್ಹಾಣರವರು ಮಹಾವಿದ್ಯಾಲಯದಲ್ಲಿರುವ ಎಲ್ಲ ಸೌಲಭ್ಯಗಳ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡಿದರು. ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳು ಗ್ರಂಥಾಲಯ, ಪ್ರಯೋಗಾಲಯ, ಕ್ರೀಡೆ, ಎನ್‌.ಎಸ್‌.ಎಸ್, ಎನ್‌.ಸಿ.ಸಿ, ರೋವರ‌್ಸ ್ಘ ರೇಂಜರ‌್ಸ, ಯುವ ರೆಡ್ ಕ್ರಾಸ್, ಸಾಂಸ್ಕ್ರತಿಕ ಚಟುವಟಿಕೆಗಳು, ಮಹಿಳಾ ಸಬಲೀಕರಣ ವಿಶೇಷವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಸೇರಿದಂತೆ ಹಲವಾರು ಸಂಘಗಳ ಚಟುವಟಿಕೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಹೊಸ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿ, ಅವರ ಶೈಕ್ಷಣಿಕ ಜೀವನಕ್ಕೆ ಶುಭ ಹಾರೈಸಲಾಯಿತು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಉಪಪ್ರಾಂಶುಪಾಲರಾದ ಡಾ.ಆರ್‌.ಎಸ್‌.ಬಳಿಗಾರ ಎಲ್ಲ ಬೋಧಕ-ಬೋಧಕೇತರ ಸಿಬ್ಬಂದಿ,  ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.