ಎಲ್ಲರೂ ಒಗ್ಗೂಡಿದಾಗ ಮಾತ್ರ ಕೊರೋನಾ ಮಹಾಮಾರಿ ನಿಯಂತ್ರಣ: ಗೋವಿಂದ ಕಾರಜೋಳ

ಬೆಂಗಳೂರು, ಏ 5, ಕೊರೋನಾ ವೈರಸ್‌ನಿಂದ ರಾಜ್ಯದಲ್ಲಿ ಸಾವು-ನೋವು ಸಂಭವಿಸಿದ್ದು, ಈ ಸೋಂಕು ನಿಯಂತ್ರಣಕ್ಕೆ ಮನೆಯಲ್ಲಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೇ ಸೂಕ್ತ ಪರಿಹಾರ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.ಕೊರೋನಾ ನಿಯಂತ್ರಣಕ್ಕಾಗಿ ಕಾರ್ಯನಿರ್ವಹಿಸುತ್ತಿರುವ ಎಲ್ಲರನ್ನು ನಾವು ಅಭಿನಂದಿಸಬೇಕು. ಸೋಂಕಿನ ಲಕ್ಷಣಗಳು ಕಂಡುಬಂದರೆ ಕೂಡಲೇ ಸ್ವಯಂ ಪ್ರೇರಣೆಯಿಂದ ತಪಾಸಣೆಗೆ ಒಳಗಾಗಬೇಕು. ಎಲ್ಲರೂ ಸೇರಿ ಒಗ್ಗೂಡಿದಾಗ ಮಾತ್ರ ಕೊರೋನಾ ಮಹಾಮಾರಿಯನ್ನು ನಿರ್ಮೂಲನೆ ಮಾಡಲು ಸಾಧ್ಯ ಎಂದು ಅವರು ಬಲವಾಗಿ ಪ್ರತಿಪಾದಿಸಿದ್ದಾರೆ.ಈ ಕುರಿತು ವಿಡಿಯೋ ಸಂದೇಶ ಹಂಚಿಕೊಂಡಿರುವ ಗೋವಿಂದ ಕಾರಜೋಳ, ಕೋವಿಡ್ 19 ವಿರುದ್ಧ ಹೋರಾಟ ಮಾಡುತ್ತಿರುವ ವೈದ್ಯರು, ದಾದಿಯರು, ಪೊಲೀಸರು ಮತ್ತಿತರ ಅಗತ್ಯ ಸೇವೆಯಲ್ಲಿ ತೊಡಗಿಕೊಂಡಿರುವವರನ್ನು ಅಭಿನಂದಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಇಂತಹ ಸಮರ ಸೇನಾನಿಗಳನ್ನು ಬೆಂಬಲಕ್ಕೆ ನಿಲ್ಲಬೇಕಿದೆ ಎಂದಿದ್ದಾರೆ.