ಬೆಂಗಳೂರು, ಮೇ 19, ಸರ್ಕಾರ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಮುಂದಾಗಬೇಕು ಇದರ ಜೊತೆ ಜೊತೆಗೆ ಹಣ ಸುಲಿಗೆ ಮಾಡುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಮುಲಾಜು ನೋಡದೆ ಕೈಗೊಳ್ಳಬೇಕು ಆಮ್ ಆದ್ಮಿ ಪಕ್ಷ(ಆಪ್) ಒತ್ತಾಯಿಸಿದೆ.ಲಾಕ್ ಡೌನ್ ಸಂದರ್ಭದಲ್ಲಿ ರಾಜ್ಯದ ಶಿಕ್ಷಕರಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಹೇಗೆ ನೀಡಬೇಕೆಂಬ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಿ ಸರ್ಕಾರಿ ಶಿಕ್ಷಣವನ್ನು ಮತ್ತಷ್ಟು ಬಲವರ್ಧನೆ ಗೊಳಿಸಬೇಕು. ಸರ್ಕಾರಿ ಶಾಲೆ ಶಿಕ್ಷಕರಿಗೆ ಶೈಕ್ಷಣಿಕವಾಗಿ ಉತ್ತಮ ತರಬೇತಿ ನೀಡುವ ಬದಲು ಆರೋಗ್ಯ ಸಮೀಕ್ಷೆಯ ಹೆಸರಿನಲ್ಲಿ ಅಲೆದಾಡಿ ಸುತ್ತಿರುವುದು ಯಾವ ನ್ಯಾಯ ಎಂದು ಆಪ್ ಮುಖಂಡರು ಪ್ರಶ್ನಿಸಿದ್ದಾರೆ.ಬೆಂಗಳೂರು ನಗರ ಘಟಕ ಅಧ್ಯಕ್ಷ ಮೋಹನ್ ದಾಸರಿ ಮಾತನಾಡಿ, ಕೊರೊನಾ ಲಾಕ್ಡೌನ್ನಿಂದ ಸಮಾಜದ ಎಲ್ಲಾ ವರ್ಗಗಳು ಒಂದಲ್ಲ ಒಂದು ರೀತಿಯಲ್ಲಿ ಸಂಕಷ್ಟಕ್ಕೆ ಒಳಗಾಗಿವೆ. ಅದರಲ್ಲೂ ವಿದ್ಯಾರ್ಥಿಗಳ ಶೈಕ್ಷಣಿಕ ತರಗತಿಗಳು, ಪರೀಕ್ಷೆಗಳು ಅನಿವಾರ್ಯವಾಗಿ ಹಿಂದುಳಿರುವುದು ಅನೇಕ ಫೋಷಕರ ಆತಂಕಕ್ಕೆ ಕಾರಣವಾಗಿದೆ. ಇಂತಹ ಸಂಕಷ್ಟ ಕಾಲದಲ್ಲಿ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಸುಲಿಗೆಗೆ ಕಡಿವಾಣ ಹಾಕಬೇಕಾಗಿದ್ದ ಶಿಕ್ಷಣ ಸಚಿವರು, ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಸು ಹೊದ್ದು ಮಲಗಿರುವುದು ವಿಪರ್ಯಾಸವೇ ಸರಿ ಎಂದು ಅಸಮಾದಾನ ಹೊರಹಾಕಿದರು . ಇದುವರೆವಿಗೂ ಯಾವೊಂದು ಶಾಲೆಗಳ ಮೇಲೂ ದಾಳಿ ನಡೆಸಿ ಪ್ರಕರಣವನ್ನು ದಾಖಲಿಸಿಲ್ಲ.ಎಂದು ಆರೋಪಿಸಿದರು.ಕೊರೊನಾ ಸಂಕಷ್ಟ ಕಾಲದಲ್ಲಿ ಮಕ್ಕಳ ಶೈಕ್ಷಣಿಕ ಸಂಗತಿಯೂ ಪೋಷಕರಿಗೆ ಹೊರೆ ಆಗದಂತೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಸರ್ಕಾರಿ ಶಾಲೆಗಳನ್ನು ದೆಹಲಿಯ ಮಾದರಿ ಅಭಿವೃದ್ಧಿಪಡಿಸಲು ಸರ್ಕಾರಕ್ಕೆ ಅಗತ್ತಯ ರೀತಿಯಲ್ಲಿ ನೆರವಾಗಲು ಆಮ್ ಆದ್ಮಿ ಪಕ್ಷ ಸಿದ್ಧವಿದೆ ಎಂದು ಸ್ಪಷ್ಟಪಡಿಸಿದರು.