ಗ್ರಾಮೀಣ ಪ್ರತಿಭೆಗೆ ವೈದ್ಯಕೀಯ ಶಿಕ್ಷಣದ ಅವಕಾಶ

ಗ್ರಾಮೀಣ ಪ್ರತಿಭೆಗೆ ವೈದ್ಯಕೀಯ ಶಿಕ್ಷಣದ ಅವಕಾಶ Opportunities for medical education for rural talent


ಬೀಳಗಿ 01 : ತಾಲೂಕಿನ ಕುಂದರಗಿ ಗ್ರಾಮದ ಯಲ್ಲಾಲಿಂಗೇಶ್ವರ ನಗರದ ಕುಮಾರಿ ಸಹನಾ ಬಸವರಾಜ ಬಾರಾಗಣಿ ವಿದ್ಯಾರ್ಥಿನಿಯು 2026ರ ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿ, ಸರ್ಕಾರಿ ಕೋಟಾದಡಿ ಬಾಗಲಕೋಟೆಯ ಎಸ್‌. ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಎಂಬಿಬಿಎಸ್ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದ ಹಿನ್ನೆಲೆಯಲ್ಲಿ ಗ್ರಾಮದ ಹಿರಿಯರು ಹಾಗೂ ವಿವಿಧ ಸಮಾಜಗಳ ಮುಖಂಡರು ಸನ್ಮಾನಿಸಿ ಗೌರವಿಸಿದರು. ಚರಂತಿಮಠದ ವೀರಸಂಗಮೇಶ್ವರ ಶಿವಾಚಾರ್ಯರು ಮಾತನಾಡಿ, ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ತಂದೆ-ತಾಯಿಗಳು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು.

ವಿದ್ಯಾರ್ಥಿಗಳು ಗುರಿ ಇಟ್ಟುಕೊಂಡು ನಿರಂತರ ಪರಿಶ್ರಮಪಟ್ಟರೆ ಜೀವನದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದರು.ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಬಸವರಾಜ ಬಾರಾಗಣಿ ಮಾತನಾಡಿ, ಆರ್ಥಿಕವಾಗಿ ಹಿಂದುಳಿದ ಕುಟುಂಬದ ವಿದ್ಯಾರ್ಥಿಗಳೂ ಪ್ರತಿಭೆ ಮತ್ತು ಪರಿಶ್ರಮದ ಮೂಲಕ ವೈದ್ಯಕೀಯ ಶಿಕ್ಷಣ ಪಡೆಯಬಹುದು ಎಂಬುದನ್ನು ಸಹನಾ ಅವರ ಸಾಧನೆ ತೋರಿಸಿಕೊಟ್ಟಿದೆ. ಅವರ ಯಶಸ್ಸು ಗ್ರಾಮದ ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಲಿ ಎಂದರು.ಸನ್ಮಾನ ಸ್ವೀಕರಿಸಿದ ಸಹನಾ ಬಾರಾಗಣಿ ಮಾತನಾಡಿ, ತಮ್ಮ ಸಾಧನೆಗೆ ತಂದೆ-ತಾಯಿ, ಸಹೋದರ ಹಾಗೂ ಶಿಕ್ಷಕರು ನೀಡಿದ ಪ್ರೋತ್ಸಾಹ ಮತ್ತು ಮಾರ್ಗದರ್ಶನವೇ ಕಾರಣ.

ವೈದ್ಯಕೀಯ ಸೀಟು ಪಡೆಯಬೇಕೆಂಬುದು ಕುಟುಂಬದ ಬಹುದಿನಗಳ ಕನಸಾಗಿತ್ತು. ಇದೀಗ ಆ ಕನಸು ನನಸಾಗಿರುವುದು ಸಂತಸ ತಂದಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ವಿವಿಧ ಸಮಾಜಗಳ ಮುಖಂಡರು ಹಾಗೂ ಗೆಳೆಯರ ಬಳಗದವರು ಸಹನಾ ಅವರನ್ನು ಅಭಿನಂದಿಸಿ ಸನ್ಮಾನಿಸಿದರು. ಗುರಯ್ಯ ಬಾರಾಗಣಿ, ರಾಚಯ್ಯ ಬಾರಾಗಣಿ, ಶ್ರೀಶೈಲ ಬಾರಾಗಣಿ, ಜಗದೀಶ ಖೋತ, ಮಲ್ಲಯ್ಯ ಬಾರಾಗಣಿ, ಸದಯ್ಯ ಜಡೀಮಠ, ಪ್ರವೀಣ ಕಂಬಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.