ನವದೆಹಲಿ, ನ 2: ದೇಶಾದ್ಯಂತ ರಾಷ್ಟ್ರೀಯ ಪೌರತ್ವ ನೋಂದಣಿ ( ಎನ್ ಆರ್ ಸಿ)ಯನ್ನು ಜಾರಿಗೊಳಿಸಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಪ್ರತಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಗೃಹ ಸಚಿವರ ಹೇಳಿಕೆಯನ್ನು ಕಾಂಗ್ರೆಸ್, ಟಿಎಂಸಿ ಮತ್ತು ಜೆಡಿಯು ಖಂಡಿಸಿವೆ. ಎನ್ ಆರ್ ಸಿ ಜಾರಿಗೊಳಿಸಿದರೆ ದೇಶದಲ್ಲಿ ಗಂಭೀರ ಪರಿಣಾಮಗಳು ಉಂಟಾಗಲಿವೆ ಎಂದು ಅವರು ಎಚ್ಚರಿಸಿವೆ.
ತಮ್ಮ ರಾಜ್ಯದಲ್ಲಿ ಎನ್ ಆರ್ ಸಿ ಜಾರಿಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನಜರ್ಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ.
ಎನ್ ಆರ್ ಸಿ ಜಾರಿಯ ಹೆಸರಿನಲ್ಲಿ ತಮ್ಮ ರಾಜ್ಯದಲ್ಲಿ ಕೆಲವರು ಹಿಂಸಾಚಾರ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ನಾನು ಅಧಿಕಾರದಲ್ಲಿರುವವರೆಗೂ ಅದಕ್ಕೆ ಆಸ್ಪದ ನೀಡುವುದಿಲ್ಲ ಎಂದು ಮಮತಾ ಬ್ಯಾನಜರ್ಿ ಸ್ಪಷ್ಟಪಡಿಸಿದ್ದಾರೆ.
ಅಸ್ಸಾಂನಲ್ಲಿ ಜಾರಿಗೊಳಿಸಿದ ಎನ್ ಆರ್ ಸಿ ಮಾಜಿ ಪ್ರಧಾನಿ ಧಿ. ರಾಜೀವ್ ಗಾಂಧಿ ಅಧಿಕಾರವಧಿಯಲ್ಲಿ ಮಾಡಿಕೊಂಡ ಅಸ್ಸಾಂ ಒಪ್ಪಂದದ ಭಾಗವಾಗಿದೆ ಎಂದು ಅವರು ಹೇಳಿದ್ದಾರೆ. ಈಗ ಅದನ್ನು ದೇಶಾದ್ಯಂತ ಜಾರಿಗೆ ತರಲು ಸಾಧ್ಯವಿಲ್ಲ ಎಂದು ಮಮತಾ ಬ್ಯಾನಜರ್ಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮತ್ತೊಂದೆಡೆ, ಕಾಂಗ್ರೆಸ್ ಪಕ್ಷ ಎನ್ ಆರ್ ಸಿ ಘೋಷಣೆಗೆ ಇದೇ ರೀತಿಯಲ್ಲಿ ಪ್ರತಿಕ್ರಿಯಿಸಿದ್ದು, ಧರ್ಮದ ಆಧಾರದ ಮೇಲೆ ಸಮಾಜವನ್ನು ವಿಭಜಿಸಲು ಕೇಂದ್ರ ಸಕರ್ಾರ ಹಾಗೂ ಆಡಳಿತಾರೂಢ ಬಿಜೆಪಿ ಪಕ್ಷ ಸಂಕಲ್ಪ ತೊಟ್ಟಿರುವಂತೆ ಕಂಡುಬರುತ್ತಿದೆ. ಎನ್ಆರ್ಸಿಗೆ ಸಂಬಂಧಿಸಿದ ಎಲ್ಲ ವಿಷಯಗಳನ್ನು ಕೂಲಂಕುಷವಾಗಿ ಬಗ್ಗೆ ಚಚರ್ಿಸಬೇಕು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಆಧೀರ್ ರಂಜನ್ ಚೌಧರಿ ಆಗ್ರಹಿಸಿದ್ದಾರೆ. ಅಸ್ಸಾಂ ಹಣಕಾಸು ಸಚಿವ ಹಿಮಂತ ಬಿಸ್ವಾ ಶಮರ್ಾ ಕೂಡ ಎನ್ಎನ್ಆರ್ಸಿ ಅನುಷ್ಠಾನವನ್ನು ತೀವ್ರವಾಗಿ ವಿರೋಧಿಸಿದ್ದಾರೆ ಪ್ರಸ್ತುತ ಅಸ್ಸಾಂನಲ್ಲಿ ಜಾರಿಗೊಳಿಸಿರುವ ಎನ್ಎನ್ಆರ್ಸಿಯನ್ನು ರದ್ದುಗೊಳಿಸುವಂತೆ ಅವರು ಕೇಂದ್ರವನ್ನು ಒತ್ತಾಯಿಸಿದ್ದಾರೆ.