ಪ್ರೀತಿಗೆ ವಿರೋಧ: ತಂದೆ ಸಹೋದರನಿಂದಲ್ಲೇ ಯುವಕನ ಕೊಲೆ
Opposition to love: Murder of a young man by his father and brother
ಬೆಳಗಾವಿ 10: ಮಂಜುನಾಥ ಎಂಬ ಯುವಕ ಹುಡುಗಿಯೋರ್ವಳನ್ನು ಪ್ರೀತಿಸುತ್ತಿದ್ದ. ಇದಕ್ಕೆ ಮನೆಯವರ ಒಪ್ಪಿಗೆ ಇರಲಿಲ್ಲ. ಹಾಗಾಗಿ ಪೋಷಕರೊಂದಿಗೆ ವಾಗ್ವಾದ ನಡೆದಿದೆ. ಈ ಸಂದರ್ಭದಲ್ಲಿ ಹಿರಿಯ ಸಹೋದರ ಗುರುಬಸಪ್ಪ ಕಲ್ಲಿನಿಂದ ತಮ್ಮ ಮಂಜುನಾಥನ ತಲೆಗೆ ಹೊಡೆದಿದ್ದಾನೆ, ತಂದೆಯೂ ಧಾವಿಸಿ ಹೊಡೆದಿದ್ದಾನೆ. ತಲೆಗೆ ತೀವ್ರ ಪೆಟ್ಟು ತಗುಲಿ ಮಂಜುನಾಥ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕನಂದಿಹಳ್ಳಿ ಗ್ರಾಮದಲ್ಲಿ ನಡೆದಿದೆ .
ಮಂಜುನಾಥ ನಾಗಪ್ಪ ಉಳ್ಳಾಗಡ್ಡಿ(25) ಕೊಲೆಯಾದವರು. ಅವರ ತಂದೆ ನಾಗಪ್ಪ ಉಳ್ಳಾಗಡ್ಡಿ(68) ಹಾಗೂ ಹಿರಿಯ ಸಹೋದರ ಗುರುಬಸಪ್ಪ ಉಳ್ಳಾಗಡ್ಡಿ(28) ಇವರನ್ನು ಪೊಲೀಸರು ಬಂಧಿಸಿದ್ದಾರೆ.
ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಜುನಾಥ್ ಪ್ರೀತಿಸಿದ ಹುಡುಗಿಯನ್ನು ಮದುವೆಯಾಗಲು ಒತ್ತಾಯಿಸುತ್ತಿದ್ದ ಎಂದು ಮೂಲಗಳು ತಿಳಿಸಿವೆ. ಆರಂಭದಲ್ಲಿ ಆತನ ಪೋಷಕರು ಮದುವೆಗೆ ವಿರೋಧಿಸಿದದ್ದರು. ವಿರೋದದ ನಡುವೆಯೇ ಅವನ ನಿಶ್ಚಿತಾರ್ಥವನ್ನು ನಡೆಸಲಾಯಿತು. ಮದುವೆಯ ಸಿದ್ಧತೆಗಳು ನಡೆಯುತ್ತಿದ್ದಾಗ, ಮಂಜುನಾಥ್ ಆಗಾಗ್ಗೆ ಮದ್ಯ ಸೇವಿಸಿ ಮನೆಯಲ್ಲಿ ಗಲಾಟೆ ಮಾಡುತ್ತಿದ್ದ. ಮಂಜುನಾಥ್ ಮದುವೆ ವೆಚ್ಚಕ್ಕಾಗಿ 50,000 ಹಣ ಕೇಳುತ್ತಿದ್ದನು ಮತ್ತು ನಿಯಮಿತವಾಗಿ ಕುಡಿದು ಜಗಳವಾಡುತ್ತಿದ್ದನು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 