ಬೃಹತ್ ಕಾರ್ಖಾನೆ ಸ್ಥಾಪನೆಗೆ ವಿರೋಧ: ಪರವಾನಗಿ ರದ್ದುಪಡಿಸಲು ಒತ್ತಾಯ
Opposition to setting up a massive factory: Demand to cancel the license
ಕೊಪ್ಪಳ 23: ನಗರದ ಸಾರ್ವಜನಿಕರ ಆರೋಗ್ಯ ಮತ್ತು ಪರಿಸರಕ್ಕೆ ಅಪಾಯಕಾರಿಯಾಗುವ ಬೃಹತ್ ಕಾರ್ಖಾನೆ ಸ್ಥಾಪನೆ ಕಾರ್ಯವನ್ನು ತಕ್ಷಣವೇ ಸ್ಥಗಿತಗೊಳಿಸಬೇಕು. ಇದಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ನೀಡಿರುವ ಅನುಮತಿಯನ್ನು ರದ್ದುಪಡಿಸುವವರೆಗೆ ಹೋರಾಟವನ್ನು ನಿರಂತರವಾಗಿ ಮುಂದುವರಿಸಲಾಗುವುದು ಎಂದು ರಾಯಚೂರು ಜಿಲ್ಲಾ ಏಮ್ಸ್ ಹೋರಾಟ ಸಮಿತಿಯ ಸಂಚಾಲಕ ಡಾ. ಬಸವರಾಜ ಕಳಸ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗದಗ ಜಿಲ್ಲೆಯ ಕಪ್ಪತ್ತಗುಡ್ಡ ಉಳಿಸಿ ಹೋರಾಟದಲ್ಲಿ ತೋಂಟದಾರ್ಯ ಮಠದ ಶ್ರೀಗಳ ನೇತೃತ್ವದಲ್ಲಿ ನಡೆದ ಹೋರಾಟ ಯಶಸ್ವಿಯಾದ ಮಾದರಿಯಲ್ಲೇ, ಕೊಪ್ಪಳದ ಗವಿಮಠದ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಈ ಹೋರಾಟಕ್ಕೂ ನೇತೃತ್ವ ವಹಿಸಿ ಕಾರ್ಖಾನೆಯ ಪರವಾನಗಿ ರದ್ದಾಗುವವರೆಗೆ ಜನರೊಂದಿಗೆ ನಿಲ್ಲಬೇಕು ಎಂದು ಮನವಿ ಮಾಡಿದರು.
ಸುಮಾರು ?54 ಸಾವಿರ ಕೋಟಿ ಹೂಡಿಕೆಯಲ್ಲಿ ನಿರ್ಮಾಣವಾಗಲಿರುವ ಈ ಬೃಹತ್ ಕಾರ್ಖಾನೆಯಿಂದ ಕೊಪ್ಪಳ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪರಿಸರ ಮಾಲಿನ್ಯ ಉಂಟಾಗುವ ಸಾಧ್ಯತೆ ಇದೆ. ಕಲುಷಿತ ನೀರು, ವಾಯು ಮತ್ತು ಪರಿಸರದಿಂದ ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಆತಂಕವಿದ್ದು, ಸಾಂಕ್ರಾಮಿಕ ಹಾಗೂ ದೀರ್ಘಕಾಲೀನ ರೋಗಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.
ಈಗಾಗಲೇ ತುಂಗಭದ್ರಾ ಜಲಾಶಯದಲ್ಲಿ ಮಾಲಿನ್ಯದ ಸಮಸ್ಯೆ ಎದುರಾಗಿರುವ ಹಿನ್ನೆಲೆಯಲ್ಲಿ, ಹೊಸ ಕಾರ್ಖಾನೆಯಿಂದ ಪರಿಸ್ಥಿತಿ ಮತ್ತಷ್ಟು ಹದಗೆಡುವ ಭೀತಿ ಇದೆ. ಆದ್ದರಿಂದ ಕಾರ್ಖಾನೆ ಸ್ಥಾಪನೆ ಕಾರ್ಯವನ್ನು ತಕ್ಷಣ ಸ್ಥಗಿತಗೊಳಿಸಿ, ಸರ್ಕಾರ ನೀಡಿರುವ ಅನುಮತಿಯನ್ನು ರದ್ದುಪಡಿಸಬೇಕು ಎಂದು ಅವರು ಒತ್ತಾಯಿಸಿದರು.
ಕಳೆದ ಒಂದು ವರ್ಷದಿಂದ ಶಾಂತಿಯುತವಾಗಿ ಹೋರಾಟ ನಡೆಸುತ್ತಿರುವ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ನಡೆಯುತ್ತಿದ್ದು, ಜಿಲ್ಲಾಡಳಿತ ನಿರ್ಲಕ್ಷ್ಯ ಧೋರಣೆ ತಾಳಿದೆ ಎಂದು ಆರೋಪಿಸಿದ ಅವರು, ಇದನ್ನು ತೀವ್ರವಾಗಿ ಖಂಡಿಸಿದರು. ಕೊಪ್ಪಳದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ರಾಯಚೂರು ಜಿಲ್ಲಾ ಏಮ್ಸ್ ಹೋರಾಟ ಸಮಿತಿಯ ಸಂಪೂರ್ಣ ಬೆಂಬಲವಿದ್ದು, ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೋರಾಟದಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಕೊಪ್ಪಳದ ಹೋರಾಟಗಾರ ಅಲ್ಲಮಪ್ರಭು ಬೆಟ್ಟದೂರು, ರಾಯಚೂರಿನ ಹೋರಾಟಗಾರರಾದ ಎಂ.ಆರ್. ಬೇರಿ, ವಿನಯ್ ಕುಮಾರ್ ಚಿತ್ರಗಾರ ಹಾಗೂ ಶ್ರೀನಿವಾಸ್ ಜೋಶಿ ಉಪಸ್ಥಿತರಿದ್ದರು.
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು 