ಘಟಪ್ರಭಾ ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ : ಈರಣ್ಣ ಕಡಾಡಿ
Order issued for Ghataprabha Express train halts: Iranna Kadadi
ಲೋಕದರ್ಶನ ವರದಿ
ಬೆಳಗಾವಿ 08: ಘಟಪ್ರಭಾ ಮತ್ತು ಸುತ್ತಮುತ್ತಲಿನ ಭಾಗದ ರೈಲು ಪ್ರಯಾಣಿಕರ ಬಹುದಿನಗಳ ಬೇಡಿಕೆಗೆ ಕೊನೆಗೂ ಯಶಸ್ಸು ಸಿಕ್ಕಿದೆ. ನಮ್ಮ ಸತತ ಪ್ರಯತ್ನ ಹಾಗೂ ಮನವಿಗೆ ಸ್ಪಂದಿಸಿದ ರೈಲ್ವೆ ಇಲಾಖೆಯು, ಘಟಪ್ರಭಾ ನಿಲ್ದಾಣದಲ್ಲಿ ಪ್ರಮುಖ 4 ಜೋಡಿ ಎಕ್ಸ್ಪ್ರೆಸ್ ರೈಲುಗಳ ಪ್ರಾಯೋಗಿಕ ನಿಲುಗಡೆಗೆ ಅಧಿಕೃತ ಆದೇಶ ಹೊರಡಿಸಿದೆ ಎಂದು ಮಾಜಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.
ನಿಲುಗಡೆ ಆಗಲಿರುವ ರೈಲುಗಳು: ಅಜ್ಮೀರ್ - ಮೈಸೂರು ಎಕ್ಸ್ಪ್ರೆಸ್ (16209/16210), ಅಜ್ಮೀರ್ - ಕೆ.ಎಸ್.ಆರ್ ಬೆಂಗಳೂರು ಗರೀಬ್ ನವಾಜ್ ಎಕ್ಸ್ಪ್ರೆಸ್ (16531/16532), ಗಾಂಧಿಧಾಮ್ - ಕೆ.ಎಸ್.ಆರ್ ಬೆಂಗಳೂರು ಎಕ್ಸ್ಪ್ರೆಸ್ (20685/20686), ಜೋಧ್ಪುರ - ಕೆ.ಎಸ್.ಆರ್ ಬೆಂಗಳೂರು ಎಕ್ಸ್ಪ್ರೆಸ್ (16533/16534)
ನಮ್ಮ ಭಾಗದ ಪ್ರಯಾಣಿಕರ ಹಿತದೃಷ್ಟಿಯಿಂದ ನಿಲುಗಡೆ ವ್ಯವಸ್ಥೆ ಮಾಡಿದ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷವ, ರಾಜ್ಯ ರೈಲ್ವೆ ಸಚಿವರಾದ ವಿ ಸೋಮಣ್ಣ ಹಾಗೂ ನೈರುತ್ಯ ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಹೃತ್ಪೂರ್ವಕ ಧನ್ಯವಾದಗಳು. ಸಾರ್ವಜನಿಕರು ಹಾಗೂ ಪ್ರಯಾಣಿಕರು ಈ ರೈಲು ಸೇವೆಗಳ ಸದುಪಯೋಗ ಪಡಿಸಿಕೊಳ್ಳಬೇಕೆಂದು ಮಾಜಿ ಸಂಸದ ಈರಣ್ಣ ಕಡಾಡಿ ಕೋರಿರುತ್ತಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 