ಮಹಿಳಾ ನೌಕರರಿಗೆ 18 ವರ್ಷದಿಂದ 52 ವರ್ಷ ವಯಸ್ಸಿನ ಮಿತಿಗೆ ಒಳಪಟ್ಟು ಋತುಚಕ್ರದ ಸಮಯದಲ್ಲಿ ಒಂದು ದಿನ ರಜೆ ಮಂಜೂರು ಆದೇಶ
Order to grant one day leave during menstruation to female employees, subject to the age limit of 18
ಹೊಸಪೆಟೆ 03: ಘನ ಕರ್ನಾಟಕ ಸರ್ಕಾರವು ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ 18 ವರ್ಷದಿಂದ 52 ವರ್ಷ ವಯಸ್ಸಿನ ಮಿತಿಗೆ ಒಳಪಟ್ಟು ಋತುಚಕ್ರದ ಸಮಯದಲ್ಲಿ ಪ್ರತಿ ತಿಂಗಳು ಒಂದು ದಿನದಂತೆ ಪ್ರತಿ ವರ್ಷಕ್ಕೆ 12 ವೇತನ ಸಹಿತ ರಜೆ ಮಂಜೂರು ಮಾಡಿ ಆದೇಶಿಸಲಾಗಿರುತ್ತದೆ. ಸದರಿ ಆದೇಶವು ಸರ್ಕಾರದ ಖಾಯಂ, ಗುತಿಗೆ, ಹೊರಗುತ್ತಿಗೆ ಮಹಿಳಾ ನೌಕರರಿಗೂ ಅನ್ವಯಾಗಲಿದೆ. ಮಹಿಳಾ ನೌಕರರ ಮನೋಸ್ಥೈರ್ಯ ಹೆಚ್ಚಿಸುವಂತಹ ಮಹತ್ವಪೂರ್ಣ ಆದೇಶವಾಗಲು ಕಾರಣೀಭೂತರಾದ ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ರವರಿಗೆ ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರಿಗೆ ಸಚಿವ ಸಂಪುಟದ ಸದಸ್ಯರಿಗೆ, ಉನ್ನತ ಅಧಿಕಾರಿಗಳಿಗೂ ಅಧೀಕೃತ ಆದೇಶಕ್ಕೆ ನಿರಂತರ ಶ್ರಮವಹಿಸಿದ ಸರ್ಕಾರಿ ನೌಕರರ ಸಂಘದ ಕ್ರಿಯಾಶೀಲ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ರವರಿಗೂ ವಿಜಯನಗರ ಜಿಲ್ಲೆಯ ಸಮಸ್ತ ನೌಕರರು ಹಾಗೂ ಮಹಿಳಾ ನೌಕರರ ಪರವಾಗಿ ವಿಜಯನಗರ ಜಿಲ್ಲಾಧ್ಯಕ್ಷರಾದ ಜಿ.ಮಲ್ಲಿಕಾರ್ಜುನ ಗೌಡ, ರಾಜ್ಯ ಪರಿಷತ್ ಸದಸ್ಯ ರಾಘವೇಂದ್ರ ಹೆಗಡಿಯಾಳ್, ಖಜಾಂಚಿ ಕೆ.ಮಲ್ಲೇಶಪ್ಪ, ಕಾರ್ಯದರ್ಶಿ ಟಿ.ಪಂಪಣ್ಣ ಸೇರಿದಂತೆ ವಿಜಯನಗರ ಜಿಲ್ಲಾ ಪದಾಧಿಕಾರಿಗಳು ಹರ್ಷ ವ್ಯಕ್ತಪಡಿಸಿ ಹೃದಯಪೂರ್ವಕ ಧನ್ಯವಾದಗಳನ್ನು ಸಲ್ಲಿಸಿರುತ್ತಾರೆ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 