ಸಾವಯವ-ಸಿರಿಧಾನ್ಯ ನಡಿಗೆ : ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಚಾಲನೆ
ಬೆಳಗಾವಿ, ಜ 24, ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ರೈತರ ಕೊಡುಗೆ ದೊಡ್ಡದಾಗಿದ್ದು, ಸಿರಿ ಧಾನ್ಯಗಳನ್ನು ಹೆಚ್ಚಾಗಿ ಬೆಳೆಯುವ ಮೂಲಕ ಜನರ ಆರೋಗ್ಯ ರಕ್ಷಣೆಗೆ ಒತ್ತು ನೀಡಬೇಕು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ರೈತ ಸಮುದಾಯಕ್ಕೆ ಕರೆ ನೀಡಿದ್ದಾರೆ.. ಕುಂದಾ ನಗರಿಯಲ್ಲಿ ಶನಿವಾರದಿಂದ ಎರಡು ದಿನಗಳ ಕಾಲ ನಡೆಯಲಿರುವ ಸಾವಯವ-ಸಿರಿಧಾನ್ಯ ಮೇಳದ ಅಂಗವಾಗಿ ಇಂದು ಸಾವಯವ-ಸಿರಿಧಾನ್ಯ ನಡಿಗೆಗೆ ಚಾಲನೆ ನೀಡಿ ಮಾತನಾಡಿದ ಅವರು, ಉಪ ಮುಖ್ಯಮಂತ್ರಿ ಹಾಗೂ ಕೃಷಿ ಸಚಿವ ಲಕ್ಷ್ಮಣ ಸವದಿ ಅವರು ಬೆಳಗಾವಿ ನಗರದ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಸಾವಯವ-ಸಿರಿಧಾನ್ಯ ನಡಿಗೆಗೆ ಚಾಲನೆ ನೀಡಿದರು.
ನಂತರ ಮಾತನಾಡಿದ ಲಕ್ಷ್ಮಣ ಸವದಿ, ಸಾವಯವ - ಸಿರಿಧಾನ್ಯ ಕುರಿತು ಜಾಗೃತಿ ಸಮಾಜದಲ್ಲಿ ಆರೋಗ್ಯಕರ ವಾತಾವರಣ ನಿರ್ಮಾಣಮಾಡುವಲ್ಲಿ ರೈತರ ಕೊಡುಗೆ ಅಪಾರ. ಅವರ ಮನವೊಲಿಸಿ ಸಾವಯವ ಕೃಷಿಗೆ ಇನ್ನೂ ಹೆಚ್ಚಿನ ಪ್ರೋತ್ಸಾಹ ನೀಡುವ ಉದ್ದೇಶದಿಂದ ಮೇಳ ಆಯೋಜಿಸಲಾಗಿದೆ ಎಂದರು.
ಇತ್ತೀಚಿನ ದಿನಗಳಲ್ಲಿ ಕ್ರಿಮಿನಾಶಕ, ರಸಗೊಬ್ಬರಗಳ ಅತಿಯಾದ ಬಳಕೆಯಾಗುತ್ತಿದ್ದು, ಇದು ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ರಾಸಾಯನಿಕ ಬಳಕೆಯಿಂದ ನಮ್ಮ ಭೂಮಿಯ ಫಲವತ್ತತೆ ಹಾಳಾಗುತ್ತಿದ್ದು, ಭೂಮಿ ರಕ್ಷಣೆಗೆ ಗಮನಹರಿಸಬೇಕು. ಸಾವಯವ - ಸಿರಿಧಾನ್ಯ ಮೇಳದ ಜತೆಗೆ ಫಲಪುಷ್ಪ ಪ್ರದರ್ಶನ ಕೂಡ ಆಯೋಜಿಸಿದ್ದು, ಸಾರ್ವಜನಿಕರು, ರೈತರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿಕೊಂಡರು.
ಇದಕ್ಕೂ ಚೆನ್ನಮ್ಮ ವೃತ್ತದಿಂದ ಆರಂಭಗೊಂಡ ಸಾವಯವ-ಸಿರಿಧಾನ್ಯ ನಡಿಗೆಯು ನಗರದ ಪ್ರಮುಖ ರಸ್ತೆಗಳ ಮೂಲಕ ಎಸ್.ಜಿ.ಬಾಳೇಕುಂದ್ರಿ ಎಂಜಿನಿಯರಿಂಗ್ ಕಾಲೇಜು ಮೈದಾನವನ್ನು ತಲುಪಿತು.ನಡಿಗೆಯಲ್ಲಿ ಭಾಗವಹಿಸಿದ್ದ ವಿವಿಧ ಶಾಲಾ ಮಕ್ಕಳು "ದೇಹದ ದಣಿವಿಗೆ ಸಿರಿಧಾನ್ಯದ ಅಡಿಗೆ, ಸಿರಿಧಾನ್ಯ ಹಳೆ ಊಟ ಹೊಸ ನೋಟ" ಎಂಬ ಘೋಷಣೆಗಳನ್ನು ಕೂಗಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 