ದೇವಸ್ಥಾನಗಳಲ್ಲಿ ಶರಣರ ಅನುಭವ ಗೋಷ್ಠಿ ಆಯೋಜನೆ
Organization of Sharana experience-sharing sessions in temples
ಪಾಲಬಾವಿ 21: : ದೇವಸ್ಥಾನಗಳು ನಮ್ಮ ಸಾಂಸ್ಕೃತಿಕ ಪರಂಪರೆಯ ಪ್ರತೀಕಗಳಾಗಿದ್ದು, ಅವುಗಳಲ್ಲಿ ನಿತ್ಯ ಭಜನೆ, ಕೀರ್ತನೆ, ಸತ್ಸಂಗ ಸೇರಿದಂತೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ ಹೇಳಿದರು.
ಹಂದಿಗುಂದ ಗ್ರಾಮದ ಭದ್ರಶೆಟ್ಟಿಯವರ ತೋಟದಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ಬಸವೇಶ್ವರ ದೇವಸ್ಥಾನದ ಲೋಕಾಪರ್ಣೆ ಹಾಗೂ ನಂದಿ ಮೂರ್ತಿ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು, ದೇವಸ್ಥಾನಗಳನ್ನು ಸ್ವಚ್ಛ ಹಾಗೂ ಸುಂದರವಾಗಿಡಬೇಕು. ದೇವಸ್ಥಾನಗಳಲ್ಲಿ ಶರಣರ ಅನುಭವ ಗೋಷ್ಠಿಗಳು ನಡೆಯಬೇಕು. ಇದರಿಂದ ಭಕ್ತರಿಗೆ ಮನಸ್ಸಿನ ಶಾಂತಿ, ನೆಮ್ಮದಿ ಹಾಗೂ ಆತ್ಮಸಾಕ್ಷಾತ್ಕಾರಕ್ಕೆ ಸಹಕಾರಿಯಾಗುತ್ತದೆ ಎಂದರು.
ಹಂದಿಗುಂದ ಸಿದ್ದೇಶ್ವರ ಮಠದ ಪೀಠಾಧಿಪತಿ ಶಿವಾನಂದ ಸ್ವಾಮೀಜಿ, ಚಿಮ್ಮಡ ಪ್ರಭು ಮಹಾಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ಆಶೀರ್ವಚನ ನೀಡಿದರು.
ಕಾರ್ಯಕ್ರಮದಲ್ಲಿ ಗುರುಮಠದ ಗುರುಲಿಂಗಯ್ಯ ಸ್ವಾಮೀಜಿ, ಕ್ಯಾಸಪ್ಪನಹಟ್ಟಿ ನಿಂಗಪ್ಪ ಮಹಾರಾಜರು, ರೈತ ಮುಖಂಡ ಬನಪ್ಪ ತೇಲಿ, ಸತೀಶ ಬದ್ರಶೆಟ್ಟಿ ಸೇರಿದಂತೆ ಗಣ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಬಸವರಾಜ ಬದ್ರಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ನಂತರ ದಾಸೋಹದ ಮಹಾಮನೆಯಲ್ಲಿ ಅನ್ನಸಂತರೆ್ಣ ನಡೆಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 