ಸಂಘಟನಾ ಶಕ್ತಿಯೇ ಸಂಘದ ಜೀವಾಳ: ಈಶ್ವರ ಶೆಟ್ಟರ
Organizational strength is the lifeblood of the association: Eshwara Shettar
ಲೋಕದರ್ಶನ ವರದಿ
ಅರ್ಥಪೂರ್ಣವಾಗಿ ಪತ್ರಿಕಾ ದಿನಾಚರಣೆ; ಪತ್ರಕರ್ತರ ಹಿತಕ್ಕಾಗಿ ರೂ.50ಸಾವಿರ ದತ್ತಿನಿಧಿ ಘೋಷಣೆ
ಮಹಾಲಿಂಗಪುರ 20: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಶತಮಾನದ ಸಂಭ್ರಮದತ್ತ ಸಾಗುತ್ತಿರುವ ಹೆಮ್ಮೆಯ ಸಂಘವಾಗಿದ್ದು, ಸಂಘಟನಾ ಶಕ್ತಿಯೇ ಸಂಘದ ಜೀವಾಳವಾಗಿದೆ. ಸಂಘದ ಬಲ ಸದಸ್ಯರ ಒಗ್ಗಟ್ಟು, ಪರಸ್ಪರ ವಿಶ್ವಾಸ ಹಾಗೂ ಸಮಾಜಮುಖಿ ಚಿಂತನೆಯಲ್ಲಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಈಶ್ವರ ಶೆಟ್ಟರ ಹೇಳಿದರು. ನಗರದ ಪುರಸಭೆ ಸಭಾಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಲಿಂಗಪುರ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬಾಗಲಕೋಟೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಇತಿಹಾಸದಲ್ಲಿ ಇದುವರೆಗೆ ಒಂದೇ ಒಂದು ಚುನಾವಣೆಯೂ ನಡೆದಿಲ್ಲ. ಪ್ರತಿಬಾರಿಯೂ ಅವಿರೋಧ ಆಯ್ಕೆ ಮೂಲಕ ಪದಾಧಿಕಾರಿಗಳನ್ನು ಆಯ್ಕೆ ಮಾಡಿರುವುದು ರಾಜ್ಯದ ಎಲ್ಲ ಜಿಲ್ಲೆಗಳಿಗೂ ಮಾದರಿಯಾಗಿದೆ. ಸಂಘದಲ್ಲಿ ಭಿನ್ನಾಭಿಪ್ರಾಯಗಳು ಇರಬಹುದು, ಆದರೆ ಅವು ಆರೋಗ್ಯಕರ ಚರ್ಚೆ ಹಾಗೂ ಸುಧಾರಣೆಯ ಉದ್ದೇಶದಿಂದಿರಬೇಕು. ವೈಯಕ್ತಿಕ ದ್ವೇಷ, ಚಾರಿತ್ರ್ಯವಧೆ, ಗುಂಪುಗಾರಿಕೆ ಹಾಗೂ ಪರಸ್ಪರ ಕೆಸರೆರಚಾಟದಿಂದ ಸಂಘದ ಘನತೆಗೆ ಧಕ್ಕೆಯಾಗುತ್ತದೆ. ಸಮಾಜಕ್ಕೆ ಉತ್ತಮ ಸಂದೇಶ ನೀಡಬೇಕಾದ ಪತ್ರಕರ್ತರೇ ಅಂತಹ ಪ್ರವೃತ್ತಿಗಳಿಂದ ದೂರವಿದ್ದು, ಸಮಾಜಮುಖಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕರೆ ನೀಡಿದರು.
ಕಾನಿಪ ಸಂಘದ ಜಿಲ್ಲಾ ಅಧ್ಯಕ್ಷ ಮಹೇಶ ಅಂಗಡಿ ಮಾತನಾಡಿ, ಪತ್ರಕರ್ತರ ಸಂಘದ ಸದಸ್ಯತ್ವವನ್ನು ಯಾವುದೇ ರೀತಿಯ ಬ್ಲಾಕ್‌ಮೇಲ್ ಅಥವಾ ವೈಯಕ್ತಿಕ ಲಾಭಕ್ಕಾಗಿ ಬಳಸಬಾರದು. ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವುದು, ಜನಪರ ಹೋರಾಟಗಳಿಗೆ ಧ್ವನಿಯಾಗುವುದು ಹಾಗೂ ಪತ್ರಕರ್ತರ ಹಕ್ಕುಗಳ ರಕ್ಷಣೆಗೆ ಸಂಘವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಪತ್ರಿಕೋದ್ಯಮದ ಗೌರವವನ್ನು ಕಾಪಾಡುವುದು ಪ್ರತಿಯೊಬ್ಬ ಪತ್ರಕರ್ತನ ಜವಾಬ್ದಾರಿಯಾಗಿದೆ ಎಂದರು.
ಇಟಗಿ ಮಹೇಶ್ವರ ಪಪೂ ಕಾಲೇಜಿನ ಪ್ರಾಚಾರ್ಯ ಗಂಗಾಧರ ಅವಟೇರ ಮಾತನಾಡಿ, ಪತ್ರಕರ್ತರು ತಮ್ಮ ವೈಯಕ್ತಿಕ ಭ್ರಮೆ, ಅಭಿಪ್ರಾಯ ಹಾಗೂ ಪೂರ್ವಾಗ್ರಹಗಳನ್ನು ಸಾರ್ವಜನಿಕರ ಮೇಲೆ ಹೇರುವ ಕೆಲಸ ಮಾಡಬಾರದು. ಸತ್ಯವನ್ನು ನಿಷ್ಠೆಯಿಂದ ಸಮಾಜದ ಮುಂದೆ ಇಡುವ ಹೊಣೆಗಾರಿಕೆ ಪತ್ರಕರ್ತರ ಮೇಲಿದೆ. ಪತ್ರಕರ್ತನಿಗೆ ಸಮಾಜದಲ್ಲಿನ ಅನ್ಯಾಯದ ವಿರುದ್ಧ ಕೋಪವಿರಬೇಕು. ಆದರೆ ಈರ್ಷೆ, ದ್ವೇಷ, ಮತ್ಸರ ಮತ್ತು ಪ್ರತೀಕಾರದ ಮನೋಭಾವ ಇರಬಾರದು. ಲೋಕಾನುಭವದಿಂದ ವ್ಯಕ್ತಿತ್ವ ಗಟ್ಟಿಯಾಗುತ್ತದೆ. ವರ್ಷಪೂರ್ತಿ ಸಮಾಜಸೇವೆ ಮಾಡುವ ಪತ್ರಕರ್ತರ ಸೇವೆಯನ್ನು ಗುರುತಿಸಿ ಸಮಾಜವೇ ಪತ್ರಿಕಾ ದಿನಾಚರಣೆಯನ್ನು ಆಚರಿಸುವಂತಹ ವಾತಾವರಣ ನಿರ್ಮಾಣವಾಗಬೇಕು ಎಂದು ಅಭಿಪ್ರಾಯಪಟ್ಟರು.
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ 