ರೈತ ಹುತಾತ್ಮ ಸ್ಥಂಭಕ್ಕೆ ಸಂಘಟನೆಗಳ ವತಿಯಿಂದ ಮಾಲಾರ್ಪಣೆ
Organizations lay wreaths at the Farmer Martyr Monument
ಹಾವೇರಿ 11 : ರೈತರು ಬೆಳೆದ ಬೆಲೆಗಳಿಗೆ ವೈಜ್ಞಾನಿಕ ಬೆಲೆ ಒದಗಿಸುವುದು ಸೇರಿದಂತೆ ರೈತರ ಪ್ರಮುಖ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ವಿಫಲವಾಗಿದ್ದ ರೈತರ ಬದುಕು ಸಂಕಷ್ಟಕ್ಕೀಡಾಗಿದೆ. ರೈತರ ಆತ್ಮಹತ್ಯೆಯಲ್ಲಿ ಹಾವೇರಿ ಜಿಲ್ಲೆಯು ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿರುವುದು ಅತ್ಯಂತ ನೋವಿನ ಸಂಗತಿ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಅನ್ನದಾತರ ಸಮಸ್ಯೆ ಪರಿಹರಿಸಲು ಮುಂದಾಗಬೇಕು ಎಂದು ಡಿವೈಎಫ್‌ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಆಗ್ರಹಿಸಿದರು.
ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿರುವ ರೈತ ಹುತಾತ್ಮ ಸ್ಥಂಭಕ್ಕೆ ಎಸ್‌ಎಫ್‌ಐ-ಡಿವೈಎಫ್‌ಐ ಸಂಘಟನೆಗಳ ವತಿಯಿಂದ ಮಾಲಾರ್ಪಣೆ ಗೈದು ಗೌರವ ನಮನಗಳನ್ನು ಸಲ್ಲಿಸಿ ಮಾತನಾಡಿ, 2008 ರಲ್ಲಿ ರೈತರು ಬಿತ್ತನೆಗೆ ಅಗತ್ಯವಾದ ಗೊಬ್ಬರಕ್ಕಾಗಿ ಪ್ರತಿಭಟನೆ ನಡೆಸಿದ್ದರು. ರೈತರಿಗೆ ಗೊಬ್ಬರ ಒದಗಿಸಬೇಕಿದ್ದ ಅಂದಿನ ಬಿಜೆಪಿ ಸರಕಾರವು ಗೊಬ್ಬರ ಸಮಸ್ಯೆ ಪರಿಹರಿಸುವ ಬದಲಾಗಿ ರೈತರ ಧ್ವನಿ ಹತ್ತಿಕ್ಕಲು ಮೇಲೆ ಗೋಲಿಬಾರ್ ನಡೆಸಿತ್ತು. ಈ ಗೋಲಿಬಾರ್ ನಲ್ಲಿ ರೈತರಾದ ಹಾವೇರಿಯ ಸಿದ್ಲಿಂಗಪ್ಪ ಚೂರಿ ಹಾಗೂ ನೆಲೋಗಲ್ ಗ್ರಾಮದ ಪುಟ್ಟಪ್ಪ ಹೊನ್ನತ್ತಿ ಪೋಲಿಸರ ಗುಂಡಿಗೆ ಬಲಿಯಾದರು. ಹಲವರು ಗಂಭೀರವಾಗಿ ಗಾಯಗೊಂಡು ನರಳಾಡಿದ ನೆನಪು ಇನ್ನೂ ಹಸಿಯಾಗಿದೆ ಎಂದರು.
ಜಿಲ್ಲೆಯ ರೈತರ ಬಹು ವರ್ಷಗಳ ಬೇಡಿಕೆಯಾದ ವರದಾ-ಬೇಡ್ತಿ ನದಿ ಜೋಡಣೆಯನ್ನು ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಕೇಂದ್ರ, ರಾಜ್ಯ ಸರಕಾರಗಳ ರೈತ ವಿರೋಧಿ ಧೋರಣೆಗಳ ವಿರುದ್ಧ ರೈತರು ಐಕ್ಯ ಚಳುವಳಿಗೆ ಮುಂದಾಗಬೇಕಿದೆ ಎಂದರು.ಈ ಸಂದರ್ಭದಲ್ಲಿ ಹುತಾತ್ಮ ರೈತ ಸಿದ್ಲಿಂಗಪ್ಪ ಚೂರಿ, ಪುಟ್ಟಪ್ಪ ಹೊನ್ನತ್ತಿ ಅಮರ ರಹೇ! ಹಾಗೂ ರೈತ ವಿರೋಧಿ ನೀತಿಗಳನ್ನು ಜಾರಿ ಮಾಡುತ್ತಿರುವ ಸರಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.
ಎಸ್‌ಎಫ್‌ಐ ಜಿಲ್ಲಾಧ್ಯಕ್ಷರಾದ ಬಸವರಾಜ ಎಸ್, ಎಸ್‌ಎಫ್‌ಐ-ಡಿವೈಎಫ್‌ಐ ಮುಖಂಡರಾದ ಸುನೀಲ್ ಕುಮಾರ್ ಎಲ್,ಮಾಬುಲಿ ಮದರಂಗಿ, ಸುಭಾಸ್ ಮಡಿವಾಳರ, ರೈತ ಸಂಘಟನೆಯ ಜಿಲ್ಲಾ ಮುಖಂಡರಾದ ಶಿವಬಸಪ್ಪ ಗೋವಿ, ಸುರೇಶ ಚಲವಾದಿ ಸೇರಿದಂತೆ ಇನ್ನಿತರರು ಇದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 