ಕೊಪ್ಪಳ: ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ನವೆಂಬರ್ 05 ರಿಂದ 16 ರವರೆಗೆ ನಡೆಯಲಿರುವ ಭೂ ಸೇನಾ ನೇಮಕಾತಿ ರ್ಯಾಲಿಯನ್ನು ವ್ಯವಸ್ಥಿತವಾಗಿ ಆಯೋಜಿಸಿ. ಯಾವುದೇ ಗೊಂದಲಗಳಿಗೆ ಅವಕಾಶ ನೀಡದಂತೆ ಸಂಬಂಧಿಸಿದ ಅಧಿಕಾರಿಗಳು ಕರ್ತವ್ಯ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಭೂ ಸೇನಾ ನೇಮಕಾತಿ ರ್ಯಾಲಿ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈ ರ್ಯಾಲಿಯಲ್ಲಿ ಬೆಳಗಾವಿ, ಬೀದರ, ಕಲಬುರ್ಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಯ ಅಭ್ಯಥರ್ಿಗಳು ಭಾಗವಹಿಸುತ್ತಿದ್ದು, ಇದುವರೆಗೂ ಸುಮಾರು 41 ಸಾವಿರ ಅಭ್ಯಥರ್ಿಗಳು ಆನ್ಲೈನ್ ನೋಂದಣಿ ಮಾಡಿಕೊಂಡಿದ್ದಾರೆ. ನೋಂದಣಿಗೆ ಇನ್ನೂ ಎರಡು ದಿನಗಳ ಕಾಲಾವಕಾಶವಿರುವುದರಿಂದ ಅಭ್ಯಥರ್ಿಗಳ ಸಂಖ್ಯೆ 45 ಸಾವಿರ ತಲುಪುವ ನಿರೀಕ್ಷೆ ಇದೆ. ಆದ್ದರಿಂದ ಬೃಹತ್ ಪ್ರಮಾಣದಲ್ಲಿ ಅಭ್ಯಥರ್ಿಗಳು ಭಾಗವಹಿಸುತ್ತಿರುವ ಕಾರಣ ವಸತಿ, ಸಾರಿಗೆ ಸೇರಿದಂತೆ ಎಲ್ಲ ವ್ಯವಸ್ಥೆಗಳೂ ಅಚ್ಚುಕಟ್ಟಾಗಿರಬೇಕು. ಅಭ್ಯಥರ್ಿಗಳಿಗಾಗಲೀ, ಸೇನಾ ಸಿಬ್ಬಂದಿಗಳಿಗಾಗಲೀ ಯಾವುದೇ ಗೊಂದಲ, ಅನಾನುಕೂಲ ಉಂಟಾಗದಂತೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು ಎಂದು ಅವರು ಹೇಳಿದರು.
ಜಿಲ್ಲಾ ಕ್ರೀಡಾಂಗಣ ಹಾಗೂ ಅಭ್ಯಥರ್ಿಗಳು ತಂಗುವ ಸ್ಥಳಗಳಲ್ಲಿ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆಯನ್ನು ನಗರಸಭೆ ಪೌರಾಯುಕ್ತರು ನಿರ್ವಹಿಸಬೇಕು. ಕ್ರೀಡಾಂಗಣದಲ್ಲಿ ಅಗತ್ಯವಿರುವ ಶಾಮಿಯಾನ, ಕುಚರ್ಿಗಳು, ಬ್ಯಾರಿಕೇಡ್ಗಳ ವ್ಯವಸ್ಥೆಯನ್ನು ಸಕರ್ಾರದ ದರದನ್ವಯ ಒದಗಿಸಬೇಕು. ವಸತಿ ಸ್ಥಳದ ಲಭ್ಯತೆ ಆಧಾರದಲ್ಲಿ ವಸತಿ ಸ್ಥಳಗಳನ್ನು ನಿರ್ಧರಿಸಲಾಗುತ್ತದೆ. ನಗರದ ಕೇಂದ್ರ ಬಸ್ ನಿಲ್ದಾಣದಿಂದ ಕ್ರೀಡಾಂಗಣದವರೆಗೆ ಅಭ್ಯಥರ್ಿಗಳನ್ನು ಕರೆದೊಯ್ಯಲು ಸಾರಿಗೆ ವ್ಯವಸ್ಥೆಯನ್ನು ಮಾಡಬೇಕು. ಹನ್ನೆರಡು ದಿನಗಳ ಕಾಲ ಸೇನಾ ಅಧಿಕಾರಿಗಳು ಹಾಗೂ ಸಿಬ್ಬಂದಿ ನಗರದಲ್ಲಿರುವ ಕಾರಣ ಅವರಿಗೆ ಸೂಕ್ತ ವಸತಿ ವ್ಯವಸ್ಥೆಯನ್ನು ಕಲ್ಪಿಸಬೇಕು. ಉಳಿದಂತೆ ಪೊಲೀಸ್ ಬಂದೋಬಸ್ತ್, ತುತರ್ು ಆರೋಗ್ಯ ಸೇವೆಗಳನ್ನು ಒದಗಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಕ್ರಮ ತೆಗೆದುಕೊಳ್ಳುವಂತೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಉಪ ವಿಭಾಗಾಧಿಕಾರಿ ಸಿ.ಡಿ. ಗೀತಾ, ತಹಶೀಲ್ದಾರ ಜೆ.ಬಿ. ಮಜ್ಗಿ, ನಿಮರ್ಿತಿ ಕೇಂದ್ರದ ಅಧಿಕಾರಿ ಶಶಿಧರ ಪಾಟೀಲ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಕ್ಷಯ ನಾಡಗೀರ, ಡಿವೈಎಸ್ಪಿ ವೆಂಕಟಪ್ಪ ನಾಯಕ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ದಾನರೆಡ್ಡಿ ಸೇರಿದಂತೆ ಸೇನಾ ಅಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.