ಪ್ರಾಚ್ಯ ಪ್ರಜ್ಞೆ ಅರಿವು ಅಗತ್ಯ ಮಹೇಶ್ ವಿ ಪೂಜಾರ
Oriental consciousness is essential Mahesh V. Pujara
ಪ್ರಾಚ್ಯ ಪ್ರಜ್ಞೆ ಅರಿವು ಅಗತ್ಯ ಮಹೇಶ್ ವಿ ಪೂಜಾರ
ಲೋಕದರ್ಶನ ವರದಿ
ಹೂವಿನ ಹಡಗಲಿ 02: ಕರ್ನಾಟಕ ಐತಿಹಾಸಿಕ ಸ್ಮಾರಕಗಳ ಕಣಜ.ಪ್ರಾಚ್ಯ ಪ್ರಜ್ಞೆ ಅರಿವು ಅಗತ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ವಿ ಪೂಜಾರ ಹೇಳಿದರು.ಪಟ್ಟಣದ ಜಿ ಪಿ ಜಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ 2026-26 ನೇ ಸಾಲಿನ ತಾಲೂಕು ಮಟ್ಟದ ಪ್ರಾಚ್ಯ ಪ್ರಜ್ಞೆ ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಕರುನಾಡು ಶಿಲ್ಪಕಲೆಗೆ ವಿಶ್ವ ಮನ್ನಣೆ ಪಡೆದಿದೆ. ಬೇಲೂರು ಹಳೇಬೀಡು ಬಾದಾಮಿ ಐಹೊಳೆ ಪಟ್ಟದಕಲ್ಲು ಹಂಪಿ ಲಕ್ಕುಂಡಿ ವಿಜಯಪುರ ಮೊದಲಾದ ಐತಿಹಾಸಿಕ ಸ್ಥಳಗಳಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಸಂಗ್ರಹಿಸಿರಿ ಎಂದು ಹೇಳಿದರು.ಪ್ರೌಢಶಾಲಾ ಹಂತದಲ್ಲಿ ಪ್ರಾಚೀನ ದೇವಾಲಯಗಳು ಐತಿಹಾಸಿಕ ಸ್ಥಳಗಳು ಸ್ಮಾರಕಗಳ ಕುರಿತು ಅರಿವು ಮೂಡಿಸುವ ಸಲುವಾಗಿ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.ಕ್ಷೇತ್ರ ಸಮನ್ವಯಾಧಿಕಾರಿ ಎ ಕೋಟೆಪ್ಪ ಇತಿಹಾಸ ಪ್ರಸಿದ್ಧ ಸ್ಥಳಗಳಿಗೆ ಹೋಗಿ ಸ್ಮಾರಕಗಳ ಬಗ್ಗೆ ಅಧ್ಯಯನ ನಡೆಸಲು ಸಲಹೆ ನೀಡಿದರು.ಶಿಕ್ಷಣ ಸಂಯೋಜಕ ಎಚ್ ಮಲ್ಲಿಕಾರ್ಜುನ, ಹಣ್ಣಿ ನರೇಶ್ ಉಪಸ್ಥಿತರಿದ್ದರು.ತಾಲೂಕಿನ ಸರ್ಕಾರಿ ಅನುದಾನಿತ ಪ್ರೌಢಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 