ವಾಕರಸಾ ಸಂಸ್ಥೆಯಿಂದ ನಮ್ಮ ಬಸ್ ನಿಲ್ದಾಣ, ಸ್ವಚ್ಛ ನಿಲ್ದಾಣ ಸಾರ್ವಜನಿಕರ ಅಭಿಪ್ರಾಯ ಕಾರ್ಯಕ್ರಮ
Our Bus Station, Clean Station Public Opinion Program by WAKRASA
ಗದಗ 17: ಗದಗ ವಿಭಾಗದ ಎಲ್ಲ ತಾಲೂಕಾ ಕೇಂದ್ರ ಬಸ್ ನಿಲ್ದಾಣಗಳಲ್ಲಿ ನಮ್ಮ ಬಸ್ ನಿಲ್ದಾಣ, ಸ್ವಚ್ಛ ನಿಲ್ದಾಣ ಶೀರ್ಷಿಕೆಯಡಿಯಲ್ಲಿ ಬಸ್ ನಿಲ್ದಾಣದ ನಿರ್ವಹಣೆಯ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಪಡೆಯಲು ಕಿಖ ( ಕ್ಯೂಆರ್) ಕೋಡ ಮುದ್ರಿತ ಭಿತ್ತಿ ಪತ್ರವನ್ನು ಬುಧವಾರ ( ದಿ 14 ರಂದು) ಗದಗ ಹೊಸ ಬಸ್ ನಿಲ್ದಾಣದಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಡಿ.ಎಂ. ದೇವರಾಜ ರವರು ಬಿಡುಗಡೆಗೊಳಿಸಿದರು.
ಕಾರ್ಯಕ್ರಮದಲ್ಲಿ ಬಸ್ ನಿಲ್ದಾಣಗಳ ಸ್ವಚ್ಛತೆ, ಶೌಚಾಲಯಗಳ ನಿರ್ವಹಣೆ, ತ್ಯಾಜ್ಯ ವಿಲೇವಾರಿ, ಶೌಚಾಲಯದ ದರ ಪಟ್ಟಿ ಅಳವಡಿಕೆ, ಶುದ್ದ ನೀರಿನ ವ್ಯವಸ್ಥೆ ಸಂಚಾರ ನಿಯಂತ್ರಕರು ಸೌಜನ್ಯದ ನಡವಳಿಕೆ ಇತ್ಯಾದಿ ಅಂಶಗಳ ಕುರಿತಾದ ಮೌಲ್ಯಮಾಪನ ಮಾಡಿ ಶ್ರೇಣಿವಾರು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುವ ಕುರಿತಾಗಿ ಕ್ರಮ ಕೈಗೊಳ್ಳಲು ಸಂಸ್ಥೆಯ ಮಾನ್ಯ ವ್ಯವಸ್ಥಾಪಕ ನಿರ್ದೇಶಕರು ಸೂಚನೆಯಂತೆ ಎಲ್ಲ ಬಸ್ ನಿಲ್ದಾಣಗಳಲ್ಲಿ ಭಿತ್ತಿ ಪತ್ರವನ್ನು ಪ್ರದರ್ಶಿಸಲಾಗುವದು. ಸಾರ್ವಜನಿಕರು ಮೊಬೈಲ್ನಿಂದ ( ಕ್ಯೂಆರ್) ಕೋಡ್ ಸ್ಕ್ಯಾನ್ ಮಾಡಿ ಹೆಚ್ಚು ಹೆಚ್ಚು ಅಭಿಪ್ರಾಯ ದಾಖಲಿಸಲು ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದರು.
ಈ ಸಂದರ್ಭದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿ ಪಿ.ವಿ. ಮೇತ್ರಿ, ಸಿ.ವಿ. ಇಟಗಿ ವಿತಾಂಶಿ, ಶ್ರೀಮತಿ ವಿದ್ಯಾ ಕಾಂಬಳೆ ಸ.ಆಡಳಿತಾಧಿಕಾರಿ, ಬಿ.ಎಲ್.ಗೆಣ್ಣೂರ, ನಿಲ್ದಾಣಾಧಿಕಾರಿ ಹಾಗೂ ಸಾರಿಗೆ ನಿಯಂತ್ರಕರು ಹಾಗೂ ಸಾರ್ವಜನಿಕ ಪ್ರಯಾಣಿಕರು ಹಾಜರಿದ್ದರು.
ಸಾರ್ವಜನಿಕ ಪ್ರಯಾಣಿಕರು ಬಸ್ ನಿಲ್ದಾಣದ ಮೌಲ್ಯ ಮಾಪನ ದಾಖಲಿಸುವ ಬಗೆ: ಮೊಬೈಲ್ನಿಂದ ( ಕ್ಯೂ ಆರ್) ಕೋಡ್ ನ್ನು ಸ್ಕ್ಯಾನ್ ಮಾಡುವದು. (ಕ್ಯೂಆರ್ ) ಕೋಡ್ ಲಿಂಕ್‌ನಲ್ಲಿ ತಮ್ಮ ಅಭಿಪ್ರಾಯ ಈ ಕೆಳಗಿನಂತೆ ದಾಖಲಿಸುವದು. ನೊಂದಾಯಿತ ಇ-ಮೇಲ್ ಐಡಿ ರಜಿಸ್ಟರ್ ಮಾಡುವದು. ಶೌಚಾಲಯದ ಸ್ವಚ್ಛತೆ, ಬಸ್ ನಿಲ್ದಾಣದ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ ಬಗ್ಗೆ, ಶೌಚಾಲಯ/ಮೂತ್ರಾಲಯದ ಬಳಕೆಯ ಶುಲ್ಕದ ಕುರಿತು ರೇಟಿಂಗ್ಸ್ ನೀಡುವದು. ಇತರೆ ಅನಿಸಿಕೆ ಅಥವಾ ಅಭಿಪ್ರಾಯವನ್ನು ದಾಖಲಿಸುವದು.ಒಟ್ಟಾರೆ ಶ್ರೇಣಿಯನ್ನು ನೀಡುವದು. ಇದರಿಂದಾಗಿ ಬಸ್ ನಿಲ್ದಾಣದ ಸ್ವಚ್ಛತೆ ನಿರ್ವಹಿಸಲು ಹಾಗೂ ಸಂಸ್ಥೆಯ ಸಿಬ್ಬಂದಿಗಳು ಸಾರ್ವಜನಿಕರೊಂದಿಗೆ ಉತ್ತಮ ರೀತಿಯಿಂದ ವರ್ತಿಸಲು ಸಹಕಾರಿಯಾಗುತ್ತದೆ,
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 