ರೈತರನ್ನು ಪ್ರೋತ್ಸಾಹಿಸುವುದು ಮತ್ತು ಅವರನ್ನು ಗೌರವಿಸುವುದು ನಮ್ಮ ಕರ್ತವ್ಯ: ಸೋಮನಕಟ್ಟಿ
ಬ್ಯಾಡಗಿ 23: ನಮ್ಮ ರೈತರನ್ನು ಮತ್ತು ಅವರ ಕಠಿಣ ಪರಿಶ್ರಮಕ್ಕೆ ಉತ್ತೇಜಿಸುವುದು ಪ್ರೋತ್ಸಾಹಿಸುವುದು,ಸಹಾಯ ಮಾಡುವುದು ಮತ್ತು ಅವರನ್ನು ಗೌರವಿಸುವುದು ನಮ್ಮ ಕರ್ತವ್ಯವಾಗಬೇಕಿದೆ ಎಂದು ತಹಶೀಲ್ದಾರ ಫಿರೋಜಾಷಾ ಸೋಮನಕಟ್ಟಿ ಹೇಳಿದರು.
ಸೋಮವಾರ ತಾ.ಪಂ.ಸಭಾಭವನದಲ್ಲಿ ರೈತ ದಿನಾಚರಣೆ ಕಾಯ್ರಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ದೇಶದ ಐದನೇ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಜನ್ಮದಿನವಾದ ಡಿಸೆಂಬರ್ 23 ರಂದು ಪ್ರತಿ ವರ್ಷ ರಾಷ್ಟ್ರೀಯ ರೈತ ದಿನವನ್ನು ಆಚರಿಸಲಾಗುತ್ತಿದೆ ಎಂದರು.
ತಾ.ಪಂ.ಕಾರ್ಯನಿರ್ವಾಕ ಅಧಿಕಾರಿ ಕೆ.ಎಂ ಮಲ್ಲಿಕಾರ್ಜುನ ಮಾತನಾಡಿಚರಣ್ ಸಿಂಗ್ ಅವರು ತಮ್ಮ ಅವಧಿಯಲ್ಲಿ ದೇಶದ ಅನ್ನದಾತರ ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಹತ್ತಾರು ನೀತಿಗಳನ್ನು ಜಾರಿಗೆ ತಂದಿದ್ದರು. ಆಧುನಿಕ ಕೃಷಿ ಪದ್ಧತಿ ಅಳವಡಿಕೆಗೆ ಪ್ರೋತ್ಸಾಹ ನೀಡಿದ್ದರು. ಹೀಗಾಗಿ ಅವರ ಜನ್ಮದಿನವನ್ನು ರೈತ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು.ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೈತರು ದೇಶದ ಬೆನ್ನೆಲುಬು. ದೇಶದ ಜನಸಂಖ್ಯೆಯಲ್ಲಿ ರೈತರು ಶೇ 68ರಷ್ಟಿದ್ದಾರೆ. ರೈತರ ಆರ್ಥಿಕ ಪರಿಸ್ಥಿತಿ ಸುಧಾರಿಸಿದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯವೆಂದರು. ತಾಲೂಕಾ ರೈತ ಸಂಘದ ಗಂಗಣ್ಣ ಯಲಿ, ರೈತ ಧುರೀಣ ಶಂಕ್ರಗೌಡ ಪಾಟೀಲ ರೈತರ ಆಗು ಹೋಗುಗಳ ಬಗ್ಗೆ ವಿವರಿಸಿದರು. ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಅಶೋಕ ಕುರುಬರ ಸೇರಿದಂತೆ ಇತರರಿದ್ದರು.