ಕಬ್ಬು ಬೆಳಗಾರರ ಹಿತ ಕಾಪಾಡಲು ನಮ್ಮ ಸರ್ಕಾರ ಬದ್ಧ: ಸಚಿವ ಡಾ. ಎಂ.ಬಿ ಪಾಟೀಲ
Our government is committed to protecting the interests of sugarcane growers: Minister Dr. M.B. Pati
ವಿಜಯಪುರ 05: ನಮ್ಮ ಸರ್ಕಾರ ಕಬ್ಬು ಬೆಳೆಗಾರರ ಹಿತ ಕಾಪಾಡಲು ಬದ್ಧವಾಗಿದ್ದು ಸದಾ ರೈತ ಪರ, ಬಡವರ ಪರವಾಗಿದ್ದು ಕಬ್ಬು ಬೆಳೆಗಾರರ ವಿಚಾರದಲ್ಲಿ ಅತ್ಯಂತ ಪ್ರಾಮಾಣಿಕವಾಗಿ ಪ್ರಯತ್ನ ಮಾಡಲಾಗುವುದು ಎಂದು ಬೃಹತ್ ಮತ್ತು ಮದ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ ಪಾಟೀಲ ಅವರು ಹೇಳಿದರು.
ವಿಜಯಪುರ ಗಗನ ಮಹಲ್ ಉದ್ಯಾವನದ ಎದುರು ರೈತರು ಹಾಗೂ ಕಬ್ಬು ಬೆಳೆಗಾರರು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಬಲ್ಧವಾರ ಭೇಟಿ ನೀಡಿ ರೈತರ ಕುಂದು-ಕೊರತೆ ಮತ್ತು ಅಹವಾಲು ಆಲಿಸಿದ ಅವರು, ಈ ಹಿಂದೆ ನಮ್ಮ ಸರ್ಕಾರದಲ್ಲಿ ಸಕ್ಕರೆ ಸಚಿವರಾಗಿದ್ದ ಪ್ರಕಾಶ ಹುಕ್ಕೇರಿ ಅವರು ಕಬ್ಬಿಗೆ 350 ರೂ ಬೆಂಬಲ ಬೆಲೆ ನೀಡಿದ್ದರು. ಹಾಗಾಗಿ ನಮ್ಮ ಸರ್ಕಾರವು ರೈತಪರ ಕಬ್ಬು ಬೆಳೆಗಾರರ ಪರವಾಗಿದೆ ಎಂದು ಹೇಳಿದರು.ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಈ ಬಗ್ಗೆ ಚರ್ಚಿಸಲಾಗುವುದು. ಕಬ್ಬು ಬೆಳೆಗಾರರ ಸಮಸ್ಯೆ ಇತ್ಯರ್ಥಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಸಚಿವರು ರೈತರಿಗೆ ಭರವಸೆ ನೀಡಿದರು. ಕಬ್ಬು ಬೆಳೆಗಾರರ ಸಮಗ್ರ ಬೇಡಿಕೆ ಅಹವಾಲು, ಕುಂದುಕೊರತೆ ಆಲಿಸಿದ ಸಚಿವರು ಕಬ್ಬು ಬೆಳೆಗಾರರ ಸಮಗ್ರ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದು ರೈತರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಾಗೂ ಸಕ್ಕರೆ ಸಚಿವರೂ ಸೇರಿದಂತೆ ವಿವಿಧ ಸಚಿವರೊಂದಿಗೆ ಕಬ್ಬು ಬೆಳೆಗಾರರ ಸಮಸ್ಯೆ ವಿಷಯವಾಗಿ ಸಭೆ ನಡೆಸಲಾಗುವುದು ಎಂದು ಹೇಳಿದರು.
ವಿಜಯಪುರ, ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚಾಗಿ ರೈತರು ಕಬ್ಬು ಬೆಳೆಯುತ್ತಿದ್ದಾರೆ ಮುಖ್ಯಮಂತ್ರಿ ಅವರು ರೈತರು ಮತ್ತು ಕಬ್ಬು ಬೆಳೆಗಾರರ ಪರವಾಗಿೆದ್ದು, ರೈತರ ಎಲ್ಲ ಬೇಡಿಕೆಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ನ್ಯಾಯ ಒದಗಿಸಿ ಕೊಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಅವರು ಹೇಳಿದರು. ಕೆಲವು ಕಾರ್ಖಾನೆಗಳು ಎಥಿನಾಲ್ ಹಾಗೂ ವಿದ್ಯುತ್ ಉಪ ಉತ್ಪನ್ನಗಳನ್ನು ಉತ್ಪಾದಿಸುತ್ತವೆ ಈ ಕಾರ್ಖಾನೆಗಳು ಉತ್ಪಾದಿಸುವ ಎಥಿನಾಲ್‌ನಲ್ಲಿ ಕೇಂದ್ರ ಸರ್ಕಾರ ಶೇ 40 ರಷ್ಟು ಮಾತ್ರ ಖರೀದಿಸುತ್ತಿದೆ. ಕಳೆದ 9 ವರ್ಷಗಳಿಂದ ಕೇಂದ್ರ ಸರ್ಕಾರ ಕಬ್ಬಿನ ಪರಿಷ್ಕರಣೆ ಮಾಡಿರುವುದಿಲ್ಲ ಎಂದು ಹೇಳಿದರು. ರಾಜ್ಯ ಸರ್ಕಾರ ತನ್ನ ಜವಾಬ್ದಾರಿ ನಿರ್ವಹಿಸಲಿದೆ. ಕೇಂದ್ರ ಸರ್ಕಾರದ ಹಂತದಲ್ಲಿ ಆಗಬೇಕಿರುವ ಕೆಲಸಗಳ ಬಗ್ಗೆ ಮುಖ್ಯಮಂತ್ರಿಗಳ ನೇತ್ರತ್ವದಲ್ಲಿ ದೆಹಲಿಗೆ ನಿಯೋಗ ತೆಗೆದುಕೊಂಡು ಹೋಗಲು ಪ್ರಧಾನಿ ಮತ್ತು ಕೇಂದ್ರದ ಸಕ್ಕರೆ ಸಚಿವರನ್ನು ಭೇಟಿ ಮಾಡಲು ಸಮಯ ನಿಗದಿಗಾಗಿ ಕೋರಲಾಗುವುದು.
ಕಾರ್ಖಾನೆಗಳು ಎಫ್.ಆರ್.ಪಿ ಪ್ರಕಾರ ನಿಗದಿತ ಅವಧಿಯೊಳಗೆ ಕಬ್ಬು ಪೂರೈಸಿರುವ ರೈತರಿಗೆ ಬಿಲ್ ಪಾವತಿಸಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳು ನಿಗಾ ವಹಿಸಲಿದ್ದಾರೆ. ಹನಿ ನೀರಾವರಿ ಮೂಲಕ ಕಬ್ಬು ಬೆಳೆಯಲು ರೈತರಿಗೆ ಪ್ರೋತ್ಸಾಹ ನೀಡಲು ಯೋಜನೆ ರೂಪಿಸಲಾಗುವುದು. ಹನಿ ನೀರಾವರಿ ಅಳವಡಿಕೆಗೆ ತಗಲುವ ವೆಚ್ಚ ಕೇವಲ ಎರಡು ವರ್ಷಗಳಲ್ಲಿ ರಿಕವರಿ ಆಗಲಿದೆ ಎಂದು ಸಚಿವರು ತಿಳಿಸಿದರು.
ಮನಗೂಳಿ ವಿರಕ್ತಮಠದ ಸಂಗನಬಸವ ಶಿವಾಚಾರ್ಯರು, ರೈತ ಮುಖಂಡರಾದ ಪಂಚ್ಚಪ್ಪ ಕಲಬುರ್ಗಿ, ಸಂಗಮೇಶ ಸಗರ, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಜಿಲ್ಲಾಧಿಕಾರಿ ಡಾ. ಆನಂದ ಕೆ, ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 