ಸಾಮಾಜಿಕ ಪರಿವರ್ತನೆಗೆ ಬುನಾದಿ ಹಾಕಿದ ಪವಿತ್ರ ಭೂಮಿ ನಮ್ಮದು: ಪಟೇಲ್
Ours is the sacred land that laid the foundation for social transformation: Patel
ಕೊಪ್ಪಳ 18 : ಕನ್ನಡ ಭಾಷೆ ಸಾಹಿತ್ಯ ಕಲೆ ಧರ್ಮ ಮೊದಲಾದ ಕ್ಷೇತ್ರಗಳಿಗೆ ಗಮನಾರ್ಹ ಕೊಡುಗೆ ನೀಡಿ ಸಾಮಾಜಿಕ ಪರಿವರ್ತನೆಗೆ ಬು ನಾದಿ ಹಾಕಿದ ಕಲ್ಯಾಣ ಕರ್ನಾಟಕದ ಪವಿತ್ರ ಭೂಮಿ ನಮ್ಮದು ಎಂದು ಕೊಪ್ಪಳ ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ಹೇಳಿದರು.
ಅವರು ಇತ್ತೀಚಿಗೆ ಕೊಪ್ಪಳ ನಗರಸಭೆ ಆವರಣದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಪ್ರಯುಕ್ತ ನಗರಸಭೆ ಏರಿ್ಡಸಿದ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು, ಇತಿಹಾಸ ಬಲ್ಲವರು ಇತಿಹಾಸ ನಿರ್ಮಿಸಬಲ್ಲರು ಎಂಬಂತೆ ಈ ಪ್ರದೇಶದಲ್ಲಿ ಮಹಾನ್ ಮಾನವತವಾದಿ ಬಸವಣ್ಣ ನವರು ಅಪಾರ ಕೊಡುಗೆ ನೀಡಿದ್ದಾರೆ ಈ ಭೂಮಿ ಪುಣ್ಯದ ನಾಡು, ಇಲ್ಲಿ ವಾಸಿಸುವ ನಾವೇ ಪುಣ್ಯವಂತರು, 1947 ಆಗಸ್ಟ್ 15 ರಂದು ಇಡೀ ನಮ್ಮ ಭಾರತ ದೇಶ ಸ್ವಾತಂತ್ರಗೊಂಡರು ನಿಜಾಮನ ಕಪಿಮುಷ್ಠಿಯಲ್ಲಿದ್ದ ಹೈದರಾಬಾದ್ ಕರ್ನಾಟಕ ಪ್ರದೇಶ ಸೆಪ್ಟೆಂಬರ್ 17ರಂದು ವಿಮೋಚನೆ ಗೊಂಡಿತು ಅಂದಿನ ಗ್ರಹ ಮಂತ್ರಿ ಸರ್ದಾರ್ ವಲ್ಲಭಾಯಿ ಪಟೇಲ್ ರವರ ಧಿಟ್ಟ ಕ್ರಮದಿಂದ ಹಾಗೂ ಈ ಭಾಗದ ಸ್ವತಂತ್ರ ಹೋರಾಟಗಾರರ ಸತತ ಪ್ರಯತ್ನ ಹೋರಾಟ ಮತ್ತು ಬಲಿದಾನದಿಂದ ನಮಗೆ ಸ್ವತಂತ್ರ ಸಿಕ್ಕಿದೆ ಅವರೆಲ್ಲರ ಸ್ಮರಣೆ ನಮ್ಮೆಲ್ಲರ ಜವಾಬ್ದಾರಿ, ಅವರು ಹಾಕಿಕೊಟ್ಟ ಮಾರ್ಗದಲ್ಲಿ ಪರಸ್ಪರ ರಾಷ್ಟ್ರೀಯ ಭಾವೈಕ್ಯತೆ ಬೆಳೆಸಿಕೊಂಡು ಜೀವನ ಸಾಗಿಸಬೇಕು ಎಂದರು . ಮುಂದುವರಿದು ಮಾತನಾಡಿದ ಅವರು ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಪ್ರತ್ಯೇಕ ಅಭಿವೃದ್ ಅಭಿವೃದ್ಧಿ ಮಂಡಳಿ ರಚಿಸಿ ಹಿಂದುಳಿದ ಈ ಭಾಗಕ್ಕೆ ಹೆಚ್ಚಿನ ಒತ್ತು ನೀಡಿ ಅಭಿವೃದ್ಧಿಗೆ ಸಹಕಾರ ನೀಡಿದ ಸಾವಿರಾರು ಕೋಟಿ ಅನುದಾನ ನೀಡುವದರ ಮುಖಾಂತರ ಈ ಭಾಗ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಕ್ರಮ ವಹಿಸಿದ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದ ಅವರು ಮುಂದುವರೆದು ಮಾತನಾಡಿ ಈ ಭಾಗಕ್ಕೆ 371 ಜೆ ಕೊಡುವ ದರ ಮುಖಾಂತರ ಈ ಭಾಗಕ್ಕೆ ಹೆಚ್ಚಿನ ಉದ್ಯೋಗ ಮತ್ತು ಶೈಕ್ಷಣಿಕವಾಗಿ ಬೆಳೆಯಲು ಕಾರಣಕರ್ತರಾದ ಕಲ್ಯಾಣ ಕರ್ನಾಟಕ ಭಾಗದ ಧೀಮಂತ ನಾಯಕರಾದ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ್ ಖರ್ಗೆ ಸಾಹೇಬರಿಗೆ ಇವತ್ತು ನೆನೆಸಿಕೊಳ್ಳುವ ದಿನ ಎಂದು ಹೇಳಿದರು.
ಈ ಸಂದರ್ಭದಲ್ಲಿ ನಗರಸಭೆಯ ಉಪಾಧ್ಯಕ್ಷರಾದ ಅಶ್ವಿನಿ ಭಗತ್ ಗದಗಿನಮಟ್ರವರು ನಗರಸಭೆಯ ಸದಸ್ಯರುಗಳಾದ ಮುತ್ತುರಾಜ್ ಕುಷ್ಟಗಿ ಅಜೀಮ್ ಅತ್ತಾರ್ ಗುರುರಾಜ್ ಹಲಗೇರಿ ಸ್ಥಾಯಿ ಸಮಿತಿ ಅಧ್ಯಕ್ಷ ಬಸಯ್ಯ ಹಿರೇಮಠ ಪೌರಾಯುಕ್ತರು ಅಧಿಕಾರಿ ವರ್ಗದವರು ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು,
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 