ಮುಂಡಗೋಡ 09: ರಾಜ್ಯ ಕಾಂಗ್ರೆಸ್ ಸರ್ಕಾರ ಬಸ್ ಪ್ರಯಾಣ ದರ ಹೆಚ್ಚಿಸಿರುವುದು ಹಾಗೂ ಗುತ್ತಿಗೆದಾರರ ಆತ್ಮಹತ್ಯೆ ಮತ್ತು ಬಾಣಂತಿಯರ ಸಾವಿನ ಪ್ರಕರಣಗಳು ಹೆಚ್ಚುತ್ತಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳ ಮೂಲಕ ಸಂಚರಿಸಿ ಬಳಿಕ ಶಿರಸಿ-ಹುಬ್ಬಳ್ಳಿ ಹೆದ್ದಾರಿಯ ಶಿವಾಜಿ ಸರ್ಕಲ್‌ನಲ್ಲಿ ಮಾನವ ಸರಪಳಿ ನಿರ್ಮಿಸಿ ಕಾಂಗ್ರೆಸ್ ಸರ್ಕಾರಕ್ಕೆ ದಿಕ್ಕಾರ ಕೂಗಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಮಂಜುನಾಥ್ ಪಾಟೀಲ್ ಜಿ.ಪಂ ಉಪಾಧ್ಯಕ್ಷ ಎಲ್.ಟಿ ಪಾಟೀಲ, ಪಿ.ಜಿ ತಂಗಚ್ಚನ್, ಮಂಜುನಾಥ ಹರ್ಮಲಕರ, ಭರತರಾಜ ಹದಳಗಿ, ಮಂಜುನಾಥ ನಡಗೇರ ದೇವೇಂದ್ರ ಕೆಂಚಗೊಣ್ಣವರ, ಮಹೇಶ ಹೊಸಕೊಪ್ಪ, ಪ್ರಕಾಶ ಬಡಿಗೇರ, ಬಸವರಾಜ ಠಣಕೆದಾರ, ರಾಜೇಂದ್ರ ನಾಯ್ಕ, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು