ಗುಂಡಿಗೊಂಡಿ ರಸ್ತೆಗೆ ಆಕ್ರೋಶ: ರಸ್ತೆ ತಡೆ ನಡೆಸಿ ಪ್ರತಿಭಟನೆ
Outrage over Gundigondi road: Protest held by blocking the road
ಲೋಕದರ್ಶನ ವರದಿ
ಜಮಖಂಡಿ 10 : ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಚಟುಷ್ಪಥ ವೃತ್ತದವರೆಗೆ ರಸ್ತೆ ಸಂಪೂರ್ಣ ತಗ್ಗು-ಗುಂಡಿಗಳಿಂದ ಹದಗೆಟ್ಟಿದ್ದು, ಧೂಳಿನಿಂದ ಕೂಡಿದೆ. ರಸ್ತೆ ದುರಸ್ತಿಗೆ ಆಗ್ರಹಿಸಿ ಸ್ಥಳೀಯರು ಕೆಲಕಾಲ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಹದಗೆಟ್ಟ ರಸ್ತೆಯಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಮಕ್ಕಳು ಮತ್ತು ವಯೋವೃದ್ಧರು ಸಂಚರಿಸಲು ಪರದಾಡುವಂತಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಹಲವು ವರ್ಷಗಳಿಂದ ರಸ್ತೆ ಅಭಿವೃದ್ಧಿ ಯಾಗದಿದ್ದರೂ, ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಸ್ತೆ ದುರಸ್ತಿ ಕಾಮಗಾರಿಯನ್ನು ಕೂಡಲೇ ಕೈಗೊಂಡು ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು. ರಸ್ತೆ ತಡೆ ಹಿನ್ನೆಲೆಯಲ್ಲಿ ಬಸ್ ಸೇರಿದಂತೆ ಇತರೆ ವಾಹನಗಳ ಸಂಚಾರಕ್ಕೆ ಅಡ್ಡಿಯುಂಟಾಗಿ ವಾಹನ ಸವಾರರು ಪರದಾಡು ವಂತಾಯಿತು. ರಸ್ತೆ ದುರಸ್ತಿ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಹೋರಾಟ ನಡೆಸುವುದಾಗಿ ವಿವಿಧ ದಲಿತಪರ ಹಾಗೂ ಮುಸ್ಲಿಂ ಸಂಘಟನೆಗಳು ಎಚ್ಚರಿಕೆ ನೀಡಿವೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 