ಸಿ.ಎಸ್‌. ನಾಡಗೌಡರಿಗೆ ಸಚಿವ ಸ್ಥಾನ ನೀಡದಿರುವುದಕ್ಕೆ ಆಕ್ರೋಶ: ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಸಿ.ಎಸ್‌. ನಾಡಗೌಡರಿಗೆ ಸಚಿವ ಸ್ಥಾನ ನೀಡದಿರುವುದಕ್ಕೆ ಆಕ್ರೋಶ: ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ   Outrage over denying ministerial post to C.S. Nadagouda: Congress workers protest

ಮುದ್ದೇಬಿಹಾಳ 04 : ಶಾಸಕ ಸಿ.ಎಸ್‌. ನಾಡಗೌಡ   ಅವರಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ಮುದ್ದೇಬಿಹಾಳ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಅಸಮಾಧಾನ ವ್ಯಕ್ತಪಡಿಸಿದರು.  ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಪುರಸಭೆ ಅಧ್ಯಕ್ಷ ಮೆಹಬೂಬ ಗೋಳಸಂಗಿ, ಮುದ್ದೇಬಿಹಾಳ ಕ್ಷೇತ್ರದ ಜನರ ನೀರೀಕ್ಷೆಗೆ ವಿರುದ್ಧವಾಗಿ ಸಚಿವ ಸ್ಥಾನ ನೀಡದೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿದರು.   ಕಾಂಗ್ರೆಸ್ ಜಿಲ್ಲಾ ಯುವ ಘಟಕದ ಮುಖಂಡ ರಫೀಕ್ ಶಿರೋಳ ಮಾತನಾಡಿ, ಸರಳ ಹಾಗೂ ಸಜ್ಜನಿಕೆಯ ನಾಯಕ ಸಿ.ಎಸ್‌. ನಾಡಗೌಡ ಅವರಿಗೆ ಸಚಿವ ಸ್ಥಾನ ನೀಡದಿರುವುದು ಕ್ಷೇತ್ರದ ಜನತೆಗೆ ಬೇಸರ ತಂದಿದೆ ಎಂದು ಹೇಳಿದರು.   ಶಾಸಕ ನಾಡಗೌಡ ಅವರಿಗೆ ಸಚಿವ ಸ್ಥಾನ ನೀಡದಿರುವುದನ್ನು ವಿರೋಧಿಸಿ, ಮುದ್ದೇಬಿಹಾಳ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದ್ದಾರೆ.