ಕ್ರೀಡಾಕೂಟದಲ್ಲಿ ಮುರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿಗಳ ಅಮೋಘ ಸಾಧನೆ
Outstanding achievement by Murarji Desai Residential School students at the sports meet
ಯಲಬುರ್ಗಾ, ಸೆ. 11: ತಾಲೂಕಿನ ಕಲ್ಲೂರು ಗ್ರಾಮದಲ್ಲಿ ನಿನ್ನೆ ನಡೆದ ಪ್ರಾಥಮಿಕ ಶಾಲೆಗಳ ಯಲಬುರ್ಗಾ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಯಲಬುರ್ಗಾದ ಮುರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡಿ ಗಮನ ಸೆಳೆದರು.
ವೈಯಕ್ತಿಕ ವಿಭಾಗದಲ್ಲಿ ದೀಪ್ ಅವರು 600 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ, ಕಾರ್ತಿಕ್ 200 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ, ಜಯರಾಮ್ ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ ಹಾಗೂ ಪ್ರಸಾದ್ 400 ಮೀಟರ್ ಮತ್ತು 100 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡರು.
ಕಾರ್ತಿಕ್ 400 ಮೀಟರ್ ಓಟದಲ್ಲಿ ದ್ವಿತೀಯ, ಅಮೃತ್ 400 ಮೀಟರ್ ಓಟದಲ್ಲಿ ದ್ವಿತೀಯ, ಶಂಕರಗೌಡ ಗುಂಡು ಎಸೆತದಲ್ಲಿ ದ್ವಿತೀಯ ಹಾಗೂ ಮನೋಜ್ 100 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಗಳಿಸಿದರು.
ಇದೇ ವೇಳೆ ಪೃಥ್ವಿರಾಜ್ 600 ಮೀಟರ್ ಓಟ ಹಾಗೂ ಗುಂಡು ಎಸೆತದಲ್ಲಿ ತೃತೀಯ ಸ್ಥಾನ ಪಡೆದರೆ, ಅಮೃತ್ 100 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದರು. ತಂಡ ವಿಭಾಗದ ಸ್ಪರ್ಧೆಗಳಲ್ಲಿಯೂ ವಸತಿ ಶಾಲೆಯ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿದರು.
4ಥ100 ಮೀಟರ್ ರಿಲೇಯಲ್ಲಿ ಪ್ರಥಮ ಸ್ಥಾನ, ವಾಲಿಬಾಲ್ನಲ್ಲಿ ದ್ವಿತೀಯ ಸ್ಥಾನ, ಬಾಲಕಿಯರ ಖೋ-ಖೋದಲ್ಲಿ ದ್ವಿತೀಯ ಸ್ಥಾನ ಹಾಗೂ ಬಾಲಕರ ಖೋ-ಖೋದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡರು.
ವಿದ್ಯಾರ್ಥಿಗಳ ಈ ಕ್ರೀಡಾ ಸಾಧನೆಗೆ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿ, ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಕ್ರೀಡೆಯಲ್ಲಿ ವಿದ್ಯಾರ್ಥಿಗಳು ತೋರಿದ ಆಸಕ್ತಿ, ಪರಿಶ್ರಮ ಹಾಗೂ ಶಿಸ್ತು ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಿದೆ ಎಂದು ಶಿಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 