ಪಲ್ಟಿಯಾದ ಡಿಕೆಶಿ ಬೆಂಗಾವಲು ವಾಹನ
Overturned DK Shivakumar convoy vehicle
ಮಂಡ್ಯ 19: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಬೆಂಗಾವಲು ವಾಹನ ಪಲ್ಟಿಯಾಗಿ ಅದರಲ್ಲಿದ್ದ ಇಬ್ಬರು ಗಾಯಗೊಂಡ ಘಟನೆ ಶನಿವಾರ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ವ್ಯಾಪ್ತಿಯ ಗೌಡಹಳ್ಳಿ ಟಿಎಂ ಹೊಸೂರು ಬಳಿಯ ಹೈವೇಯಲ್ಲಿ ಘಟನೆ ನಡೆದಿದೆ. ಮೈಸೂರಿನ ಸಾಧನಾ ಸಮಾವೇಶದಲ್ಲಿ ಪಾಲ್ಗೊಂಡು ಡಿಸಿಎಂ ಡಿಕೆ ಶಿವಕುಮಾರ್ ಅವರು ಬೆಂಗಳೂರಿಗೆ ತೆರಳುತ್ತಿದ್ದರು. ಡಿಕೆ ಶಿವಕುಮಾರ್ ಬೆಂಗಾವಲು ವಾಹನದಲ್ಲಿ ಎಸ್ಕಾರ್ಟ್ ಸಿಬ್ಬಂದಿ ತೆರಳುತ್ತಿದ್ದರು. ಈ ವೇಳೆ ಡಿವೈಡರ್ ಡಿಕ್ಕಿಯಾದ ವಾಹನ ಪಲ್ಟಿಯಾಗಿದೆ.
ಕಾರಿನಲ್ಲಿದ್ದ ಇಬ್ಬರು ಎಸ್ಕಾರ್ಟ್ ಸಿಬ್ಬಂದಿಗೆ ಸಣ್ಣಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡವರನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಡಿಕೆಶಿ ಕುಳಿತಿದ್ದ ಕಾರು ಎಸ್ಕಾರ್ಟ್ ವಾಹನವನ್ನು ಹಿಂಬಾಲಿಸುತ್ತಿತ್ತು. ಕಾರುಗಳ ನಡುವೆ ಅಂತರವಿದ್ದ ಕಾರಣ ಅದೃಷ್ಟವಶಾತ್ ಡಿ ಕೆ ಶಿವಕುಮಾರ್ ಅಪಘಾತದಿಂದ ತಪ್ಪಿಸಿಕೊಂಡಿದ್ದಾರೆ. ಘಟನೆ ಬಳಿಕ ಡಿಕೆ ಶಿವಕುಮಾರ್ ಬೆಂಗಳೂರಿಗೆ ಪ್ರಯಾಣ ಮುಂದುವರಿಸಿದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 