ಗ್ರಾಮಗಳ ಅಭಿವೃದ್ಧಿಗೆ ಪಿಡಿಓ ಪಾತ್ರ ಮುಖ್ಯ: ಪ್ರಕಾಶ ವಡ್ಡರ
PDO's role is important for the development of villages: Prakash Vaddara
ಇಂಡಿ 20: ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮನ್ವಯದಿಂದ ಒಂದು ತಂಡವಾಗಿ ಕೆಲಸ ಮಾಡಿದರೆ ಪಂಚಾಯತಿಗಳು ಪ್ರಗತಿ ಹೊಂದಲಿವೆ. ಎಲ್ಲರು ಹೊಂದಾಣಿಕೆ ಹಾಗೂ ಕಾರ್ಯಬದ್ಧರಾಗಿ ಕೆಲಸ ಮಾಡಿ ಗ್ರಾ.ಪಂ. ದಿನಚರಿ ಕಾರ್ಯವನ್ನ ಮೊದಲೆ ಹಾಕಿಕೊಂಡು ಕೆಲಸ ನಿರ್ವಹಿಸಬೇಕು. ಸಕಾಲದಲ್ಲಿ ಯೋಜನೆ ಪೂರಕವಾಗಿ ಕೆಲಸ ಮಾಡಿದರೆ ಯಾವುದೇ ಸಮಸ್ಯೆಗಳು ಬರುವುದಿಲ್ಲ ಎಂದು ವಿಜಯಪೂರ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಪ್ರಕಾಶ ವಡ್ಡರ ಸಲಹೆ ನೀಡಿದರು. ತಾಲೂಕ ಪಂಚಾಯತ ಇಂಡಿ ಸಭಾ ಭವನದಲ್ಲಿ ಜರುಗಿದ ಪಂಚಾಯತ್ ರಾಜ್ಯ ವಿಷಯಗಳು ಮತ್ತು ಮನರೇಗಾ ಯೋಜನೆಗಳ ಕುರಿತು ಪ್ರಗತಿ ಪರೀಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇಂಡಿ ಹಾಗೂ ಚಡಚಣ ತಾಲೂಕಿನ ಯಾವ ಅಂಗನವಾಡಿ ಕೇಂದ್ರಗಳಲ್ಲಿ ಶೌಚಾಲಯ ಇಲ್ಲವೇ ಆ ಬಗ್ಗೆ ಮಾಹಿತಿ ನೀಡಿ ಎಂದು ಸಿಡಿಪಿಒ ಅಧಿಕಾರಿಗಳಿಗೆ ಸೂಚಿಸಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಶಾಲೆಗಳಿಗೆ ಭೇಟಿ ನೀಡಿ ಶಾಲೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ಇರುವ ಹಾಗೂ ಇಲ್ಲದೆ ಇರುವ ಕುರಿತು ಮಾಹಿತಿ ಪಡೆದು ನರೇಗಾ ಯೋಜನೆಯಲ್ಲಿ 2026-27 ನೆ ವಾರ್ಷಿಕ ಕ್ರಿಯಾ ಯೋಜನೆಯಲ್ಲಿ ಅಳವಡಿಸಿಕೊಳ್ಳಬೇಕು ಎಂದು ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ಎಸ್‌ಎಸ್‌ಎಲ್‌ಸಿ ಫಲಿತಾಂಶ ಶೇ 100 ರಷ್ಟು ಫಲಿತಾಂಶ ಬರಬೇಕು ಹಾಗೂ ಶಾಲೆಯಿಂದ ಹೊರಗುಳಿದ 200 ಮಕ್ಕಳು ಮರಳಿ ಶಾಲೆಗೆ ಬರುವ ಆಯಾ ಶಾಲಾ ಮುಖ್ಯ ಶಿಕ್ಷಕರಿಗೆ ನಿರ್ದೇಶನ ನೀಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದರು. ಅಂಗನವಾಡಿ ಕಟ್ಟಡಗಳು: ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕೆಲಸ ಮಾಡಬೇಕು. ನೀರು, ಸ್ವಚ್ಛತೆ, ವಿದ್ಯುತ್, ಶಾಲೆಗಳು ಹಾಗೂ ಅಂಗನವಾಡಿಗಳ ಅಭಿವೃದ್ಧಿ ಇದರ ನಿಟ್ಟಿನಲ್ಲಿ ಅಂಗನವಾಡಿ ಕಟ್ಟಡಗಳನ್ನು ಕಟ್ಟಲು ಸ್ಥಳ ಹುಡುಕಿ ಮಂಜೂರಾತಿ ಮಾಡಿ ಹಾಗೂ ಕ್ರಿಯಾ ಯೋಜನೆಯಲ್ಲಿ ಇಟ್ಟುಕೊಂಡು ಶೌಚಾಲಯಗಳನ್ನು ಕಟ್ಟಿಸಬೇಕು ಎಂದು ಕಟ್ಟು ನಿಟ್ಟಿನ ಆದೇಶ ನೀಡಿದರು.
ಇ- ಹಾಜರಾತಿ : ಇ- ಹಾಜರಾತಿ ಹಾಕದೆ ನಿರ್ಲಕ್ಷಿಸಿದರೆ ಆ ದಿನದ ವೇತನ ಕಡಿತಗೊಳ್ಳತ್ತದೆ. ಇ- ಹಾಜರಾತಿ ಪರಿಗಣಿಸಿ ವೇತನ ಮಾಡಲು ಕ್ರಮ ಕೈಗೊಳ್ಳಲಾಗುವುದು. ಆದ್ದರಿಂದ ಪಿಡಿಒ, ಕಾರ್ಯದರ್ಶಿ, ದ್ವಿತೀಯ ದರ್ಜೆ ಲೆಕ್ಕಸಹಾಯಕರು ಹಾಗೂ ಗ್ರಾಪಂ ಸಿಬ್ಬಂದಿ ಪ್ರತಿದಿನ ಇ-ಹಾಜರಾತಿ ಕಡ್ಡಾಯವಾಗಿ ಹಾಕಬೇಕು ಎಂದು ಸೂಚಿಸಿದರು. ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಹಾಗೂ ಗ್ರಂಥಾಲಯ ಮೇಲ್ವಿಚಾರಕರಗಳಿಗೆ ಬಾಕಿ ವೇತನ ಪಾವತಿಸಬೇಕು. ಸಿಬ್ಬಂದಿಗಳಿಗೆ ವೇತನ ಸಮಯಕ್ಕೆ ಸರಿಯಾಗಿ ಕೊಡಬೇಕು.
ಸ್ವಚ್ಛ ಭಾರತ್ ಮಿಷನ್: ಇಂಡಿ ಮತ್ತು ಚಡಚಣ ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಶೌಚಾಲಯ ನಿರ್ಮಿಸಿಕೊಳ್ಳುವ ಫಲಾನುಭವಿಗಳಿಗೆ ಕಾಮಗಾರಿ ಆದೇಶ ಪತ್ರವನ್ನು ನೀಡಿ ಕೆಲಸ ಪ್ರಾರಂಭಿಸಬೇಕು. ಈಗಾಗಲೇ ನಿರ್ಮಿಸಿಕೊಂಡು ಫಲಾನುಭವಿಗಳಿಗೆ ತಮ್ಮಗೆ ನೀಡಿದ ಅನುದಾನದಲ್ಲಿ ಅನುದಾನವನ್ನು ಪಾವತಿಸಬೇಕು. ಬಾಕಿ ಉಳಿದ ಎಲ್ಲಾ ಹಂತವಾರು ಜಿಯೋ ಟ್ಯಾಗ್ ಗಳನ್ನು ನಿರ್ದಿಷ್ಟ ಅವಧಿಯಲ್ಲಿ ಮುಕ್ತಾಯಗೊಳಿಸಿ ಗುರಿ ಸಾಧಿಸಬೇಕು ಎಂದು ಸೂಚಿಸಿದರು.ಇಂಡಿ ಮತ್ತು ಚಡಚಣ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಯವರು ಉದ್ಯೋಗ ಖಾತರಿ ಕೂಲಿಕಾರರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು.
ಗ್ರಾಮೀಣ ಭಾಗದ ಪ್ರತಿ ಕುಟುಂಬಕ್ಕೆ ಕಡ್ಡಾಯವಾಗಿ 100 ಮಾನವ ದಿನಗಳ ಕೆಲಸ ನೀಡಬೇಕು. ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿನ ಗ್ರಾಮಗಳಲ್ಲಿ ಐಇಸಿ ಚಟುವಟಿಕೆ, ರೋಜ್ಗಾರ್ ದಿವಸ್ ಹಾಗೂ ಮನೆ ಮನೆಗೆ ಭೇಟಿ ನೀಡಿ ಮಹಿಳೆಯರಿಗೆ ಯೋಜನೆ ಬಗ್ಗೆ ಮಾಹಿತಿ ನೀಡಬೇಕು.ಆದ್ಯತೆ (ಪ್ರೇಯರಿಟಿ) ಕಾಮಗಾರಿಗಳನ್ನು ಆರಂಭಿಸಿ ಪೂರ್ಣಗೊಳಿಸಬೇಕು. ತಮ್ಮ ಗ್ರಾಮ ಪಂಚಾಯತಿಗಳ ವಾರು ನಿಗಪಡಿಸಿದ ಮಾನವ ದಿನಗಳನ್ನು ಕಾಲಮಿತಿಯೊಳಗೆ ಮುಗಿಸಬೇಕು. ಬಾಕಿ ಉಳಿದಿರುವ ಎಲ್ಲಾ ಕಾಮಗಾರಿಗಳನ್ನು ಮುಕ್ತಾಯಗೊಳಿಸಬೇಕು. ಘನತಾಜ್ಯ ವಿಲೇವಾರಿ ಘಟಕ ಹಾಗೂ ಓಖಐಒ ಶೆಡ್ ಗಳ ಕಾಮಗಾರಿ ಪ್ರಾರಂಭಿಸಬೇಕು ಎಂದರು.
ಜನವರಿ 26ರಂದು ಗ್ರಾಮ ಸಭೆ ಮಾಡಬೇಕು. ಕ್ರಿಯಾಯೋಜನೆಯಲ್ಲಿ ಶಾಲಾ ಶೌಚಾಲಯಗಳು, ಅಂಗನವಾಡಿ ಶೌಚಾಲಯಗಳು, ಕಂಪೌಂಡಗಳು, ಉಘಒ, ಸ್ಮಶಾನ ಕಾಮಗಾರಿಗಳು, ಕೃಷಿ, ತೋಟಗಾರಿಕೆ ಇಲಾಖೆ ಬೆಳೆಗಳ ಕಾಮಗಾರಿಗಳನ್ನು ಯುಕ್ತದಾರದಲ್ಲಿ ಅಳವಡಿಸಿಕೊಳ್ಳಬೇಕು. ಇಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ಬೀಮಾಶಂಕರ ಕನ್ನೂರ, ಯೋಜನಾಧಿಕಾರಿ ನಂದೀಪ ರಾಠೋಡ, ಚಡಚಣ ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕ ಶಿವದಂತ ಕೊಟ್ಟಲಗಿ ಹಾಗೂ ಇಂಡಿ ಮತ್ತು ಚಡಚಣ ತಾಲೂಕಿನ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಮನರೇಗಾ ಸಿಬ್ಬಂದಿಗಳು, ತಾಲೂಕ ಪಂಚಾಯತ ಎಲ್ಲ ಯೋಜನೆಯ ವಿಷಯ ನಿರ್ವಾಹಕರು, ಐಈಸಿ ಸಂಯೋಜಕರು, ಹಾಗೂ ತಾಲೂಕ ಪಂಚಾಯತಿ ಸಿಬ್ಬಂದಿಗಳು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 