ಕಾರವಾರ 13: ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ನೀಡುವ ಪಿಡಿಒ ಆಫ್ ದಿ ಮಂತ್ ಪ್ರಶಸ್ತಿಗೆ ನವೆಂಬರ್ ತಿಂಗಳಿಗಲ್ಲಿ ಕುಂದರಗಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ಪಟಗಾರ ಆಯ್ಕೆಯಾಗಿದ್ದಾರೆ.
ಜಿ.ಪಂ. ವತಿಯಿಂದ ಗ್ರಾಮೀಣ ಪ್ರದೇಶದ ಜನರ ಸಂಕಷ್ಟಗಳಿಗೆ ಸ್ಪಂದಿಸಿ, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಅತ್ಯುತ್ತಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯೊಬ್ಬರನ್ನು ಗುರುತಿಸಿ, ನೀಡಲಾಗುವ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಇದಾಗಿದೆ. ನವ್ಹೆಂಬರ್ ತಿಂಗಳಲ್ಲಿ ಆಯ್ಕೆಯಾದ ನವೆಂಬರ್ ತಿಂಗಳಿಗಲ್ಲಿ ಯಲ್ಲಾಪುರ ತಾಲೂಕಿನ ಕುಂದರಗಿ ಪಿಡಿಒ ರವಿ ಪಟಗಾರಗೆಸೋಮವಾರ ಕುಮಟಾ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಪ್ರಮಾಣ ಪತ್ರ ನೀಡಿ, ಅಭಿನಂದಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್‌ನ ಆಡಳಿತ ಶಾಖೆಯ ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ್, ಯೋಜನಾ ನಿರ್ದೇಶಕ ಕರೀಂ ಅಸಾದಿ, ಅಭಿವೃದ್ಧಿ ಶಾಖೆಯ ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ, ಮುಖ್ಯ ಯೋಜನಾಧಿಕಾರಿ ವಿನೋದ ಅಣ್ವೇಕರ್, ಮುಖ್ಯ ಲೆಕ್ಕಾಧಿಕಾರಿ ಆನಂದ ಹಬೀಬ, ಕುಮಟಾ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರಾಜೇಂದ್ರ ಭಟ್ ಸೇರಿದಂತೆ ಇತರರು ಉಪಸ್ಥಿತರಿದ್ದರು.