ನವದೆಹಲಿ, ಫೆ 14, ಪುಲ್ವಾಮಾ ಭಯೋತ್ಪಾದನಾ ದಾಳಿಯಲ್ಲಿ ಹುತಾತ್ಮರಾದ ಯೋಧರನ್ನು ಸ್ಮರಿಸಿ, ಶ್ರದ್ಧಾಂಜಲಿ ಸಲ್ಲಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಈ ದಾಳಿಯಿಂದ ಯಾರು ಲಾಭ ಪಡೆದಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ, ಈ ದಾಳಿಯಿಂದ ಯಾರು ಲಾಭ ಪಡೆದಿದ್ದಾರೆ ಮತ್ತು ವಿಚಾರಣೆಯ ಫಲಿತಾಂಶ ಏನು ಎಂದಿದ್ದಾರೆ. “ಇಂದು ನಾವು ಪುಲ್ವಾಮಾ ದಾಳಿಯಲ್ಲಿ ನಮ್ಮ 40 ಸಿಆರ್ಪಿಎಫ್ ಹುತಾತ್ಮರನ್ನು ನೆನಪಿಸಿಕೊಳ್ಳುತ್ತ, ದಾಳಿಯಿಂದ ಹೆಚ್ಚು ಲಾಭ ಪಡೆದವರು ಯಾರು? ದಾಳಿಯ ವಿಚಾರಣೆಯ ಫಲಿತಾಂಶ ಏನು? ದಾಳಿಗೆ ಅವಕಾಶ ನೀಡಿದ ಭದ್ರತಾ ಕೊರತೆಗಳಿಗೆ ಬಿಜೆಪಿ ಸರ್ಕಾರದಲ್ಲಿ ಯಾರು ಹೊಣೆಗಾರರಾಗಿದ್ದಾರೆ? ”ಎಂದು ರಾಹುಲ್ಳ ಗಾಂಧಿ ಟ್ವಿಟ್ಟರ್ ನಲ್ಲಿ ಪ್ರಶ್ನಿಸಿದ್ದಾರೆ. 2019 ರಂದು, ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಪಾಕಿಸ್ತಾನ ಬೆಂಬಲಿತ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 40 ಕ್ಕೂ ಹೆಚ್ಚು ಕೇಂದ್ರ ಮೀಸಲು ಪೊಲೀಸ್ ಪಡೆ ಸಿಬ್ಬಂದಿಗಳು ಸಾವನ್ನಪ್ಪಿದರು, ಇದು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾರಣವಾಯಿತು. ತರುವಾಯ, ಫೆಬ್ರವರಿ 26 ರಂದು, ಭಾರತೀಯ ವಾಯುಪಡೆ (ಐಎಎಫ್) ಪಾಕಿಸ್ತಾನದ ಬಾಲಕೋಟ್ನಲ್ಲಿರುವ ಭಯೋತ್ಪಾದಕ ಶಿಬಿರಗಳ ವಿರುದ್ಧ ಭಯೋತ್ಪಾದನಾ ನಿಗ್ರಹ ದಾಳಿಯನ್ನು ಪ್ರಾರಂಭಿಸಿತು.
ಭೀಕರ ಭಯೋತ್ಪಾದಕ ದಾಳಿಯ ಆಧಾರದ ಮೇಲೆ 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿತು ಎಂಬ ಅಂಶವನ್ನು ರಾಹುಲ್ ಗಾಂಧಿ ಪರೋಕ್ಷವಾಗಿ ಈ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸಹ ಪುಲ್ವಾಮಾ ಹುತಾತ್ಮರಿಗೆ ಗೌರವ ಸಲ್ಲಿಸಿ, “ಒಂದು ವರ್ಷದ ಹಿಂದೆ ನಾವು ಪುಲ್ವಾಮಾದಲ್ಲಿ 40 ಕ್ಕೂ ಹೆಚ್ಚು ಕೆಚ್ಚೆದೆಯ ಯೋಧರನ್ನು ಭಯಾನಕ ಹಿಂಸೆ ಮತ್ತು ದ್ವೇಷಕ್ಕೆ ಕಳೆದುಕೊಂಡಿದ್ದೇವೆ. ಇಂದು ನಾವು ನಮ್ಮ ಹುತಾತ್ಮರನ್ನು ಗೌರವಿಸುತ್ತೇವೆ ಮತ್ತು ಅವರ ಅಪಾರ ಶೌರ್ಯ ಮತ್ತು ಸಮರ್ಪಣೆಗೆ ಗೌರವ ಸಲ್ಲಿಸುತ್ತೇವೆ. ಜೈ ಹಿಂದ್ ” ಎಂದು ಟ್ವಿಟರ್ ನಲ್ಲಿ ಹೇಳಿಕೊಂಡಿದೆ. ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಪುಲ್ವಾಮಾ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಹುತಾತ್ಮರಿಗೆ ಗೌರವ ಸಲ್ಲಿಸಿ, “ಅವರು ನಮ್ಮ ರಾಷ್ಟ್ರದ ಸೇವೆ ಮತ್ತು ರಕ್ಷಣೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಅಸಾಧಾರಣ ವ್ಯಕ್ತಿಗಳು. ಭಾರತವು ಅವರ ಹುತಾತ್ಮತೆಯನ್ನು ಎಂದಿಗೂ ಮರೆಯುವುದಿಲ್ಲ ”. ಎಂದಿದ್ದಾರೆ.