ಸೌಹಾರ್ದಯುತ ಬಕ್ರೀದ್ ಆಚರಣೆಗೆ ಪಿಐ ಸುರೇಶ ಬೆಂಡೆಗುಂಬಳ ಕರೆ
PI Suresh Bendegumba's call for amicable Bakrid celebrations
ಸವದತ್ತಿ 25: ಪವಿತ್ರ ಬಕ್ರೀದ್ ಹಬ್ಬವನ್ನು ಸಾರ್ವಜನಿಕರು ಕಾನೂನು ಚೌಕಟ್ಟಿನಲ್ಲಿ, ಪರಸ್ಪರ ಸೌಹಾರ್ದತೆ ಮತ್ತು ಶಾಂತಿಯಿಂದ ಆಚರಿಸಬೇಕು ಎಂದು ಸವದತ್ತಿ ಪಿಐ ಸುರೇಶ ಬೆಂಡೆಗುಂಬಳ ಅವರು ಕರೆ ನೀಡಿದರು. ನಗರದ ಪೊಲೀಸ್ ಠಾಣೆಯ ಸಂದರ್ಶನ ಕೊಠಡಿಯಲ್ಲಿ ಆಯೋಜಿಸಲಾಗಿದ್ದ ಬಕ್ರೀದ್ ಹಬ್ಬದ ಪೂರ್ವಭಾವಿ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಹಬ್ಬದ ಸಂದರ್ಭದಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡಬಾರದು. ಸರ್ಕಾರದ ನಿಯಮಾವಳಿಗಳ ಪ್ರಕಾರವೇ ಹಬ್ಬವನ್ನು ಆಚರಿಸಬೇಕು ಎಂದು ಹೇಳಿದರು.
ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುಳ್ಳು ವದಂತಿಗಳನ್ನು ಸಾರ್ವಜನಿಕರು ನಂಬಬಾರದು. ಸಮಾಜದಲ್ಲಿ ಶಾಂತಿ ಕದಡುವ ಯಾವುದೇ ಪ್ರಯತ್ನಗಳು ಕಂಡುಬಂದಲ್ಲಿ ತಕ್ಷಣ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಸವದತ್ತಿ ನಗರವು ಸೌಹಾರ್ದತೆಗೆ ಹೆಸರಾಗಿದ್ದು, ಮುಸ್ಲಿಂ ಬಾಂಧವರು ಹಿಂದೂ ಬಾಂಧವರೊಂದಿಗೆ ಸೇರಿ ಹಬ್ಬವನ್ನು ಶಾಂತಿಯುತವಾಗಿ ಆಚರಿಸುವ ಮೂಲಕ ಭಾವೈಕ್ಯತೆಯನ್ನು ಎತ್ತಿಹಿಡಿಯಬೇಕು ಎಂದು ಅವರು ವಿನಂತಿಸಿದರು. ಹಬ್ಬಗಳು ಸಮಾಜವನ್ನು ಒಂದುಗೂಡಿಸಲು ಇರುವುದೇ ಹೊರತು ಭಿನ್ನಾಭಿಪ್ರಾಯ ಮೂಡಿಸುವುದಕ್ಕಲ್ಲ. ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಿ ಶಾಂತಿ-ಸುವ್ಯವಸ್ಥೆ ಕಾಪಾಡಬೇಕು ಎಂದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಪಿಎಸ್‌ಐ ಕೆ.ಎಮ್. ಬನ್ನೂರ ಮಾತನಾಡಿದ ಅವರು, ಬಕ್ರೀದ್ ಒಂದು ಪವಿತ್ರ ಧಾರ್ಮಿಕ ಹಬ್ಬವಾಗಿದ್ದು, ಮುಸ್ಲಿಂ ಬಾಂಧವರ ಪ್ರಾರ್ಥನೆ ಹಾಗೂ ಆಚರಣೆಗಳು ಸಮಾಜಕ್ಕೆ ಒಳ್ಳೆಯ ಸಂದೇಶವನ್ನು ನೀಡುತ್ತವೆ ಎಂದರು.ಈ ವೇಳೆ ಅಮೀರ ಗೋರಿನಾಯಕ, ಲತೀಫ ಸವದತ್ತಿ, ಅಮನ ಮುಮ್ಮಿಗಟ್ಟಿ, ರಿಯಾಜ ಪಟಾದ, ದಿಲಾವರ ಮುಲ್ಲಾ, ಅಬುಬ್ಕರ್,ಪೆಂಡಾರಿ, ಹಾಗೂ ಪ್ರಮುಖ ಮುಖಂಡರು, ಮುಸ್ಲಿಂ ಸಮಾಜದ ಧರ್ಮಗುರುಗಳು, ಪದಾಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್ 