ಹರ್ ಘರ್ ತಿರಂಗಾಗೆ ಪ್ರಧಾನಿ ಮೋದಿ ಕರೆ: ಬೃಹತ್ ಬೈಕ್ ರಾ್ಯಲಿ
PM Modi calls for Har Ghar Tiranga: Big bike rally: Sindagi news
ಸಿಂದಗಿ: 79ನೇ ಸ್ವಾತಂತ್ಯೋತ್ಸವ ದಿನಾಚರಣೆ ಅಂಗವಾಗಿ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಹರ್ ಘರ್ ತಿರಂಗಾಗೆ ಕರೆ ನೀಡಿರುವ ಹಿನ್ನೆಲೆ ಯುವ ಮೋರ್ಚಾ ಸಿಂದಗಿ ಮಂಡಲ ವತಿಯಿಂದ ನಡೆದಿರುವ ಬೈಕ್ ರಾ್ಯಲಿಗೆ ನಗರದಲ್ಲಿ ಬಿಜೆಪಿ ಮುಖಂಡರು ಕಾರ್ಯಕರ್ತರಿಂದ ಹರ್ ಘರ್ ತಿರಂಗಾ ಯಾತ್ರೆಯಲ್ಲಿ ಬಿಜೆಪಿಯ ನೂರಾರು ಕಾರ್ಯಕರ್ತರು ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದು ಭಾರತ ಮಾತಾ ಕೀ ಜೈ, ವಂದೇ ಮಾತರಂ ಘೋಷಣೆಗಳನ್ನು ಮೊಳಗಿಸಿದರು.
ಬೈಕ್ ರಾ್ಯಲಿಯು ನಗರದ ಬಸವೇಶ್ವರ ವೃತ್ತದಿಂದ ಪ್ರಾರಂಭವಾಗಿ ಸ್ವಾಮಿ ವಿವೇಕಾನಂದ ವೃತ್ತ, ಡಾ ತೊಂಟದ ಸಿದ್ದಲಿಂಗ ಮಹಾಸ್ವಾಮಿಗಳ ರಸ್ತೆಯ ಮಾರ್ಗವಾಗಿ ಡಾ. ಅಂಬೇಡ್ಕರ ವೃತ್ತದಿಂದ ಬಸವೇಶ್ವರ ವೃತ್ತ್‌ಕ್ಕೆ ತಲುಪಿ ಮುಕ್ತಾಯಗೊಂಡಿತು.
ಮಾಜಿ ಶಾಸಕ ರಮೇಶ ಭೂಸನೂರ, ಬಿಜೆಪಿ ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ ಮಾತನಾಡಿ, ಸ್ವಾತಂತ್ರ್ಯ ಸುಲಭವಾಗಿ ಸಿಕ್ಕಿದ್ದಲ್ಲ, ಸ್ವಾತಂತ್ರ ಪೂರ್ವದಲ್ಲಿ ಅಪ್ರತಿಮೆ ದೇಶಭಕ್ತರ ನಿರಂತರ ಹೋರಾಟ, ತ್ಯಾಗ, ಬಲಿದಾನದ ಫಲವಾಗಿ ನಮಗೆ ಸ್ವಾತಂತ್ರ್ಯ ಲಭಿಸಿದೆ. ನಾವಿಂದು ಸ್ವಾತಂತ್ರ್ಯದ ಸವಿಯನ್ನು ಅನುಭವಿಸಲು ಲಕ್ಷಾನುಗಟ್ಟ ಜನರ ಮಾರಣ ಹೋಮ, ಬಲಿದಾನ ನಡೆದಿದೆ. ದೇಶದ ವಿರುದ್ಧ ಮಾತನಾಡುವವರು ಮೊದಲು ಇಂತಹ ಸಂಗತಿಗಳನ್ನು ಅರಿತುಕೊಳ್ಳಬೇಕೆಂದು ಸಲಹೆ ನೀಡಿದರು. ದೇಶದ ಸ್ವಾತಂತ್ರ್ಯಕ್ಕಾಗಿ ವೀರ ಸಾವರಕರ ಸೇರಿದಂತೆ ಅನೇಕ ಮಹನೀಯರು ತಮ್ಮ ಜೀವನವನ್ನೇ ಮುಡುಪಾಗಿರಿಸಿದ್ದರು. ಕಠಿಣ ಜೈಲು ಶಿಕ್ಷೆ ಅನುಭವಿಸಿದರು. ಅವರೆಲ್ಲರ ತ್ಯಾಗದ ಫಲವಾಗಿ ಇಂದು ನಾವು ಸ್ವಾತಂತ್ರ್ಯ ಅನುಭವಿಸುತ್ತಿದ್ದೇವೆ, ದೇಶಭಕ್ತಿ ಎನ್ನುವುದು ನಮ್ಮ ಉಸಿರಾಗಬೇಕು ಈ ದೇಶದಲ್ಲಿ ಪ್ರತಿ ಒಬ್ಬರು ತಿರಂಗ ಧ್ವಜಾ ವನ್ನು ತಮ್ಮ ತಮ್ಮ ಮನೆಯ ಮೇಲೆ ಹಾರಿಸಬೇಕು ಎಂದು ವಿನಂತಿ ಮಾಡಿದರು.
ಶ್ರೀಶೈಲಗೌಡ ಬಿರಾದಾರ, ಸಿದ್ದು ಬುಳ್ಳಾ, ಅಶೋಕ ನಾರಾಯಣಪೂರ ಪ್ರಶಾಂತ ಕದ್ದರಕಿ, ಪೀರು ಕೆರೂರ, ವಿಠ್ಠಲ ನಾಯ್ಕೋಡಿ, ಬಿ ಎಚ್ ಬಿರಾದಾರ ಚಂದ್ರಶೇಖರ ಅಮಲಿಹಾಳ ಮಡಿವಾಳಪ್ಪಗೌಡ ಬಿರಾದಾರ, ಶ್ರೀಶೈಲ ಚಳ್ಳಗಿ, ಸಾಯಬಣ್ಣ ದೇವರಮನಿ, ರಾಜಕುಮಾರ ಬಾಸಗಿ, ಸಮೀ ಬಿಜಾಪುರ ಸೇರಿದಂತೆ ನೂರಾರು ದೇಶ ಭಕ್ತರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 