``ಆಪರೇಶನ್ ಸಿಂದೂರ`` ದೇಶದ ಮಹಿಳೆಯರಿಗೆ ಅರ್ಪಿಸಿದ ಪ್ರಧಾನಿ ಮೋದಿ
PM Modi dedicates ``Operation Sindoor`` to the women of the country
ನವದೆಹಲಿ 12: ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಯನ್ನುದ್ದೇಶಿಸಿ ``ಆಪರೇಶನ್ ಸಿಂದೂರ`` ಕುರಿತು ಮಾತನಾಡಿದ್ದಾರೆ. ``ಆಪರೇಶನ್ ಸಿಂದೂರ`` ಕಾರ್ಯಾಚರಣೆ ಯಶಸ್ವಿಯಾಗಿದ್ದು ನಾನು ಸಶಸ್ತ್ರ ಪಡೆಗಳು, ಮಿಲಿಟರಿ, ಗುಪ್ತಚರ ಸಂಸ್ಥೆ ಮತ್ತು ವಿಜ್ಞಾನಿಗಳಿಗೆ ವಂದಿಸುತ್ತೇನೆ ಎಂದು ಮೋದಿ ಹೇಳಿದರು. ಪ್ರಧಾನಿ ಇಂದು ಸಶಸ್ತ್ರ ಪಡೆಗಳ ಶೌರ್ಯ ಮತ್ತು ಧೈರ್ಯಕ್ಕೆ ನಮನ ಸಲ್ಲಿಸಿದ್ದು ಆಪರೇಷನ್ ಸಿಂಧೂರ್ ಅನ್ನು ದೇಶದ ಮಹಿಳೆಯರಿಗೆ ಅರ್ಪಿಸಿದರು.
ಆಪರೇಷನ್ ಸಿಂಧೂರ್ ನಂತರ ಮೊದಲ ಬಾರಿಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಳೆದ ಕೆಲವು ದಿನಗಳಲ್ಲಿ ನಾವೆಲ್ಲರೂ ದೇಶದ ಸಾಮಥ್ರ್ಯ ಮತ್ತು ತಾಳ್ಮೆಯನ್ನು ನೋಡಿದ್ದೇವೆ ಇಂದು, ನಾನು ಈ ಶೌರ್ಯ, ಧೈರ್ಯವನ್ನು ನಮ್ಮ ದೇಶದ ಪ್ರತಿಯೊಬ್ಬ ತಾಯಿಗೆ, ದೇಶದ ಪ್ರತಿಯೊಬ್ಬ ಸಹೋದರಿಗೆ ಮತ್ತು ದೇಶದ ಪ್ರತಿಯೊಬ್ಬ ಮಗಳಿಗೆ ಅಪರ್ಿಸುತ್ತೇನೆ ಎಂದರು.
ಆಪರೇಷನ್ ಸಿಂಧೂರ್ ಕೇವಲ ಹೆಸರಲ್ಲ. ಇದು ದೇಶದ ಕೋಟ್ಯಾಂತರ ಜನರ ಭಾವನೆಯ ಪ್ರತಿಬಿಂಬವಾಗಿದೆ. ಆಪರೇಷನ್ ಸಿಂಧೂರ್ ನ್ಯಾಯದ ಅವಿಚ್ಛಿನ್ನ ಪ್ರತಿಜ್ಞೆಯಾಗಿದೆ. ಮೇ 6ರ ತಡರಾತ್ರಿ ಮತ್ತು ಮೇ 7ರ ಬೆಳಿಗ್ಗೆ, ಇಡೀ ಜಗತ್ತು ಈ ಪ್ರತಿಜ್ಞೆಯು ಫಲಿತಾಂಶವಾಗಿ ಬದಲಾಗುವುದನ್ನು ಕಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಭಾರತೀಯ ಪಡೆಗಳು ಭಯೋತ್ಪಾದಕರ ಕಟ್ಟಡಗಳ ಮೇಲೆ ದಾಳಿ ಮಾಡಿದ್ದಲ್ಲದೆ, ಅವರ ಧೈರ್ಯವನ್ನೂ ಪುಡಿಪುಡಿ ಮಾಡಿವೆ ಎಂದು ಹೇಳಿದರು. ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನದ ಭಯೋತ್ಪಾದಕ ತಾಣಗಳ ಮೇಲೆ ದಾಳಿ ಮಾಡಿವೆ. ಭಾರತ ಇಷ್ಟೊಂದು ದೊಡ್ಡ ಹೆಜ್ಜೆಗಳನ್ನು ಇಡುತ್ತದೆ ಎಂದು ಭಯೋತ್ಪಾದಕರು ಕನಸು ಕಂಡಿರಲಿಲ್ಲ... ಭಾರತೀಯ ಕ್ಷಿಪಣಿಗಳು ಮತ್ತು ಡ್ರೋನ್ಗಳು ಪಾಕಿಸ್ತಾನದ ಉಗ್ರ ತಾಣಗಳ ಮೇಲೆ ದಾಳಿ ಮಾಡಿದಾಗ, ಅದು ಭಯೋತ್ಪಾದಕರ ಕಟ್ಟಡಗಳ ಮೇಲೆ ಮಾತ್ರವಲ್ಲ, ಅವರ ಧೈರ್ಯವನ್ನು ಮಣ್ಣಾಗಿಸಿದೆ ಎಂದರು.
ಭವಾಲ್ಪುರ್ ಮತ್ತು ಮುರಿಡ್ಕೆಯಂತಹ ಭಯೋತ್ಪಾದಕ ತಾಣಗಳು ಜಾಗತಿಕ ಭಯೋತ್ಪಾದನೆಯ ವಿಶ್ವವಿದ್ಯಾಲಯಗಳಾಗಿದ್ದವು. 9/11 ಅಥವಾ ಭಾರತದಲ್ಲಿ ನಡೆದ ದೊಡ್ಡ ಭಯೋತ್ಪಾದಕ ದಾಳಿಗಳು ಸೇರಿದಂತೆ ಜಗತ್ತಿನ ಎಲ್ಲಾ ದೊಡ್ಡ ಭಯೋತ್ಪಾದಕ ದಾಳಿಗಳಿಗೂ ಈ ಭಯೋತ್ಪಾದಕ ತಾಣಗಳಿಗೂ ಸಂಬಂಧಿಸಿವೆ ಎಂದು ಮೋದಿ ಹೇಳಿದರು.
ಹತ್ಯೆಗೀಡಾದ ಭಯೋತ್ಪಾದಕರ ಅಂತ್ಯಕ್ರಿಯೆಯಲ್ಲಿ ಉನ್ನತ ಅಧಿಕಾರಿಗಳು ಭಾಗವಹಿಸಿರುವುದು ಪಾಕಿಸ್ತಾನ ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವುದು ಸ್ಪಷ್ಟವಾಗಿದೆ. ಉಗ್ರರ ಅಂತ್ಯಕ್ರಿಯೆಯಲ್ಲಿ ಸೇನೆಯ ಉನ್ನತ ಅಧಿಕಾರಿಗಳು ಭಾಗಿಯಾಗಿರುವ ಪಾಕಿಸ್ತಾನದ ಆ ಕೊಳಕು ಸತ್ಯವನ್ನು ಜಗತ್ತು ನೋಡಿದೆ. ಪಾಕ್ ಪ್ರಾಯೋಜಿತ ಭಯೋತ್ಪಾದನೆಗೆ ಇದಕ್ಕಿಂತ ದೊಡ್ಡ ಪುರಾವೆ ಇನ್ನೊಂದಿಲ್ಲ ಎಂದು ಮೋದಿ ಹೇಳಿದರು.
ಸದ್ಯಕ್ಕೆ ಪಾಕಿಸ್ತಾನದ ಭಯೋತ್ಪಾದಕ ಮತ್ತು ಮಿಲಿಟರಿ ತಾಣಗಳ ಮೇಲಿನ ದಾಳಿಯನ್ನು ನಾವು ನಿಲ್ಲಿಸಿದ್ದೇವೆ ಅಷ್ಟೇ. ಪಾಕಿಸ್ತಾನ ಅಪ್ರಚೋದಿತ ದಾಳಿಗಳು ನಡೆದರೆ ಅದಕ್ಕೆ ತಕ್ಕ ಉತ್ತರವನ್ನು ನಮ್ಮ ಸೇನಾ ಪಡೆಗಳು ನೀಡಲಿವೆ ಎಂದರು. ಯಾವುದೇ ಪರಮಾಣು ಬೆದರಿಕೆಗಳು ಅಥವಾ ಬ್ಲ್ಯಾಕ್‌ಮೇಲಿಂಗ್ ಗಳು ನಮ್ಮ ಮುಂದೆ ನಡೆಯುವುದಿಲ್ಲ ಎಂದು ಒತ್ತಿ ಹೇಳಿದ ಮೋದಿ, ಭಾರತದಲ್ಲಿ ಭಯೋತ್ಪಾದಕ ದಾಳಿಗಳಿಗೆ ಸೂಕ್ತ ಪ್ರತಿಕ್ರಿಯೆಯನ್ನು ಎದುರಿಸಬೇಕಾಗುತ್ತದೆ ಎಂದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 