ಔರಂಗಾಬಾದ್, ಸೆಪ್ಟೆಂಬರ್ 6: ಪ್ರಧಾನಮಂತ್ರಿ ಮೋದಿ ಶನಿವಾರ ಔರಂಗಾಬಾದ್ ಇಂಡಸ್ಟ್ರಿಯಲ್ ಸಿಟಿ ಉದ್ಘಾಟನೆಗಾಗಿ ಭೇಟಿ ನೀಡಲಿದ್ದು, ಜೊತೆಗೆ ಗ್ರಾಮೀಣ ಮಹಿಳಾ ಸ್ವಸಹಾಯ ಗುಂಪಿನ ಸದಸ್ಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅವರ ಭೇಟಿಯ ಹಿನ್ನಲೆಯಲ್ಲಿ ನಗರದಲ್ಲಿ ಭಾರಿ ಭದ್ರತೆ ಏರ್ಪಡಿಲಾಗಿದ್ದು, 2,500 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಸಮಾರಂಭಕ್ಕೆ ಪಿಎಂ ಮೋದಿ ಮತ್ತು ಇತರ ಕೇಂದ್ರ ಸಚಿವರು, ರಾಜ್ಯ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹಾಗೂ ವಿವಿಐಪಿಗಳು ಬರುತ್ತಿರುವುದರಿಂದ, ಹೆಚ್ಚಿನ ಭದ್ರತೆಯನ್ನು ಕೈಗೊಳ್ಳಲಾಗಿದೆ. ಎಂದು ಹಿರಿಯ ಪೊಲಿಸ್ ಅಧಿಕಾರಿ ತಿಳಿಸಿದ್ದಾರೆ. ರಾಜ್ಯದಾದ್ಯಂತದ ಒಂದು ಲಕ್ಷಕ್ಕೂ ಹೆಚ್ಚು ಸ್ವಸಹಾಯ ಸಂಘದ ಮಹಿಳೆಯರು ಕಾರ್ಯಕ್ರಮಕ್ಕೆ ಹಾಜರಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಜನಸಂದಣಿಯನ್ನು ನಿಯಂತ್ರಿಸಲು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ವಿಶೇಷ ಭದ್ರತಾ ಸಿಬ್ಬಂದಿ ಮತ್ತು ಕ್ಷಿಪ್ರ ಕ್ರಿಯಾ ಪಡೆ ಪಡೆಗಳನ್ನು ನೇಮಿಸಲಾಗಿದೆ.