ನವದೆಹಲಿ, ಫೆ .28 : ರಾಷ್ಟ್ರೀಯ ವಿಜ್ಞಾನ ದಿನಕ್ಕೆ ಶುಕ್ರವಾರ ಭಾರತೀಯ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಷಯ ಕೋರಿದ್ದಾರೆ.
ಭಾರತದಲ್ಲಿ ಸಂಶೋಧನೆ ಮತ್ತು ನಾವೀನ್ಯತೆಗಾಗಿ ಇನ್ನೂ ಉತ್ತಮವಾದ ವಾತಾವರಣವನ್ನು ಸೃಷ್ಟಿಸಲು ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸುತ್ತಿದೆ ಎಂದು ಪ್ರಧಾನಿ ಹೇಳಿದ್ದಾರೆ.
ರಾಷ್ಟ್ರೀಯ ವಿಜ್ಞಾನ ದಿನ ನಮ್ಮ ವಿಜ್ಞಾನಿಗಳ ಪ್ರತಿಭೆ ಮತ್ತು ಸ್ಥಿರತೆಗೆ ನಮಸ್ಕರಿಸುವ ಸಂದರ್ಭವಾಗಿದ್ದು, ಅವರ ನವೀನ ಉತ್ಸಾಹ ಮತ್ತು ಪ್ರವರ್ತಕ ಸಂಶೋಧನೆಯು ಭಾರತ ಮತ್ತು ಜಗತ್ತಿಗೆ ಸಹಾಯ ಮಾಡಿದೆ. ಭಾರತೀಯ ವಿಜ್ಞಾನವು ಪ್ರವರ್ಧಮಾನಕ್ಕೆ ಬರಲಿ ಮತ್ತು ನಮ್ಮ ಯುವ ಜನತೆ ವಿಜ್ಞಾನದ ಬಗ್ಗೆ ಇನ್ನೂ ಹೆಚ್ಚಿನ ಕುತೂಹಲವನ್ನು ಬೆಳೆಸಿಕೊಳ್ಳಲಿ ಎಂದು ಹಾರೈಸಿದ್ದಾರೆ.
ನಮ್ಮ ಕಡೆಯಿಂದ, ಭಾರತದಲ್ಲಿ ಸಂಶೋಧನೆ ಮತ್ತು ನಾವೀನ್ಯತೆಗಾಗಿ ಇನ್ನೂ ಉತ್ತಮ ವಾತಾವರಣವನ್ನು ಸೃಷ್ಟಿಸಲು ಭಾರತ ಸರ್ಕಾರ ಹಲವಾರು ಪ್ರಯತ್ನಗಳನ್ನು ಮಾಡುತ್ತಿದೆ. ಈ ವರ್ಷದ ಆರಂಭದಲ್ಲಿ ಭಾರತೀಯ ವಿಜ್ಞಾನ ಕಾಂಗ್ರೆಸ್ ಅವಧಿಯಲ್ಲಿ ವಿಜ್ಞಾನಕ್ಕೆ ಸಂಬಂಧಿಸಿದ ಅಂಶಗಳ ಬಗ್ಗೆ ಮಾತನಾಡಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ