ನವದೆಹಲಿ, ಡಿ 23 -ಜಾರ್ಖಂಡ್ ನಲ್ಲಿ ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಂಡು ಜಯಸಾಧಿಸಿ ಸರ್ಕಾರ ರಚಿಸುವತ್ತ ಮುನ್ನಡೆ ಸಾಧಿಸಿರುವ ಜಾರ್ಖಂಡ್ ಮುಕ್ತಿ ಮೋರ್ಚಾ ಅಧ್ಯಕ್ಷ ಹೇಮಂತ್ ಸೊರೆನ್ ಅವರನ್ನು .ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅಭಿನಂದಿಸಿದ್ದಾರೆ.
‘ಜಾರ್ಖಂಡ್ ನಲ್ಲಿ ವಿಜಯ ಸಾಧಿಸಿದ್ದಕ್ಕಾಗಿ ಜೆಎಂಎಂ ನೇತೃತ್ವದ ಮೈತ್ರಿಕೂಟ ಮತ್ತು ಹೇಮಂತ್ ಸೊರೆನ್ ಅವರಿಗೆ ಅಭಿನಂದನೆಗಳು. ಅನೇಕ ವರ್ಷಗಳ ಕಾಲ. ರಾಜ್ಯಕ್ಕೆ ಸೇವೆ ಸಲ್ಲಿಸಲು ಬಿಜೆಪಿಗೆ ಅವಕಾಶ ಮಾಡಿಕೊಟ್ಟ ರಾಜ್ಯದ ಜನತೆಗೆ ಧನ್ಯವಾದಗಳು. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರ ಪರಿಶ್ರಮ ಪ್ರಶಂಸನೀಯ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ಮುಂದಿನ ದಿನಗಳಲ್ಲೂ ಬಿಜೆಪಿ ರಾಜ್ಯದ ಅಭಿವೃದ್ಧಿಗೆ ಸೇವೆ ಸಲ್ಲಿಸಲಿದೆ. ಮತ್ತು ಜನ ಕೇಂದ್ರಿತ ಸಮಸ್ಯೆಗಳನ್ನು ಪ್ರಸ್ತಾಪಿಸಲಿದೆ’ ಎಂದು ನರೇಂದ್ರ ಮೋದಿ ಹೇಳಿದ್ದಾರೆ.