ಹಣ್ಣು-ತರಕಾರಿ ಸರಬರಾಜಿಗೆ ವಿನಾಯಿತಿ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ
ಬೆಂಗಳೂರು, ಮಾ. 31, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ರೈತರು ಬೆಳೆದಿರುವ ತೋಟಗಾರಿಕೆ ಉತ್ಪನ್ನಗಳಾದ ಹಣ್ಣು ಮತ್ತು ತರಕಾರಿಗಳನ್ನು ಸರಬರಾಜು ಮಾಡಲು ಲಾಕ್ ಡೌನ್ ಆದೇಶದಿಂದ ವಿನಾಯಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.ತೋಟಗಾರಿಕೆ ಬೆಳೆಗಳನ್ನು ದಾಸ್ತಾನು ಮಾಡಿಕೊಂಡಿರುವ ರೈತರು, ಹಣ್ಣು ಮತ್ತು ತರಕಾರಿಗಳನ್ನು ಆಯಾ ಮಾರುಕಟ್ಟೆ, ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಗೆ ಸಾಗಿಸಲು ಅನುಮತಿ ನೀಡಲಾಗಿದೆ. ಜಿಲ್ಲೆಯ ತೋಟಗಾರಿಕೆ ಬೆಳೆಗಾರರು ತಮ್ಮ ಉತ್ಪನ್ನಗಳನ್ನು ಸಗಟು ವ್ಯಾಪಾರಿಗಳು ಖರೀದಿಸಿ ಮಾರಾಟ ಮಾಡಲು ಅನುಮತಿ ನೀಡಲಾಗಿದೆ. ಸಗಟು ವ್ಯಾಪಾರಿಗಳು ತೋಟಗಾರಿಕೆಗೆ ಸಂಬಂಧಿಸಿದ ಕೂಲಿಕಾರರಿಗೆ ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಸರ್ ಗಳನ್ನು ಒದಗಿಸಬೇಕು ಮತ್ತು ಕಡ್ಡಾಯವಾಗಿ ಉಪಯೋಗಿಸುವ ಮೂಲಕ ಕೋವಿಡ್-19 ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಮಾರಾಟ ವ್ಯವಹಾರ ನಡೆಸಬೇಕು ಎಂದು ಸೂಚಿಸಿದ್ದಾರೆ.ಪಾಸ್ ಗಳಿಗೆ ಆಯಾ ತಾಲ್ಲೂಕು ತಹಶೀಲ್ದಾರ್ ಹಾಗೂ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದು. ಅಲ್ಲದೇ ಸಾಗಾಣಿಕೆ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಕೃಷಿ ಉತ್ಪನ್ನಗಳ ಮಾರುಕಟ್ಟೆ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 