ಬೆಂಗಳೂರು, ಏಪ್ರಿಲ್ 8,ಕೋವಿಡ್-19/ ಸೋಂಕು ಹರಡದಂತೆ ಲಾಕ್ ಡೌನ್ ಆದೇಶ ಜಾರಿಯಲ್ಲಿರುವ ಹಿನ್ನೆಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲ್ಲೂಕಿನ ಇಂದಿರಾ ಕ್ಯಾಂಟೀನ್ ಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಇಂದು ಬೆಳಿಗ್ಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸಾರ್ವಜನಿಕರಿಗೆ ಬೆಳಗಿನ ಉಪಹಾರ ವಿತರಿಸಿದರು.ದೊಡ್ಡಬಳ್ಳಾಪುರ ತಾಲ್ಲೂಕು ತಹಶೀಲ್ದಾರ್ ಶಿವರಾಜು, ದೊಡ್ಡಬಳ್ಳಾಪುರ ನಗರಸಭೆ ಮುಖ್ಯಾಧಿಕಾರಿ ಮಂಜುನಾಥ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.