ಪಿ.ಒ.ಪಿ ಗಣೇಶ ಮೂರ್ತಿ, ಡಿ.ಜೆ. ಬಳಕೆಗೆ ಅವಕಾಶವಿಲ್ಲ: ಪರಿಸರ ಅಧಿಕಾರಿ ಸಂತೋಷ್‌

ಪಿ.ಒ.ಪಿ ಗಣೇಶ ಮೂರ್ತಿ, ಡಿ.ಜೆ. ಬಳಕೆಗೆ ಅವಕಾಶವಿಲ್ಲ: ಪರಿಸರ ಅಧಿಕಾರಿ ಸಂತೋಷ್‌ POP Ganesh idols, DJs not allowed to be used: Environment Officer Santosh

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ನಿಟ್ಟಿನಲ್ಲಿ ಸಾರ್ವಜನಿಕರು, ಗಣೇಶನ ಮಣ್ಣಿನ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಹಾಗೂ ಅಬ್ಬರದ ಡಿ. ಜೆ. ಸೌಂಡ್ ಸಿಸ್ಟಮ್‌ ಯನ್ನು ಬಳಸದಂತೆ ಜಿಲ್ಲಾ ಪರಿಸರ ಅಧಿಕಾರಿ ಬಿ.ಕೆ.ಸಂತೋಷ ಸಾರ್ವಜನಿಕರಿಗೆ ತಿಳಿಸಿದ್ದಾರೆ. 

ನಗರದಲ್ಲಿ ಗಣೇಶ ವಿಗ್ರಹ ರೂಪಿಸುವ ಸ್ಥಳಗಳಿಗೆ ಭೇಟಿ ನೀಡಿದ ನಂತರ ಅವರು ಮಾಧ್ಯಮಗಳಿಗೆ ಪರಿಸರ ಇಲಾಖೆಯ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ.ಉಚ್ಛ ನ್ಯಾಯಾಲಯ ಆದೇಶ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಸೂಚನೆ ತಿಳಿಸಿರುವಂತೆ ಗಣೇಶ ಹಬ್ಬದ ಆಚರಣೆಯಿಂದ ನೈಸರ್ಗಿಕ ಜಲ ಮೂಲಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ಮೂರ್ತಿಗಳನ್ನು ಇನ್ನೂ ಮುಂದೆ ರಾಜ್ಯದ ಯಾವುದೇ ಕೆರೆ ಮತ್ತು ಇತರೇ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ ಎಂದು ಸಂತೋಷ ತಿಳಿಸಿದ್ದಾರೆ. 

ಜಿಲ್ಲೆಯಲ್ಲಿ ಆಚರಿಸಲಾಗುತ್ತಿರುವ ಗಣೇಶ ಚತುರ್ಥಿ ಹಬ್ಬದ ಸಮಯದಲ್ಲಿ ಗಣೇಶ ವಿಗ್ರಹಗಳನ್ನು ತಯಾರು ಮಾಡಲಾಗುತ್ತಿದ್ದು, ವಿಗ್ರಹಗಳ ತಯಾರಿಕೆಗೆ ಪರಿಸರಕ್ಕೆ ಹಾನಿಯಾಗುವಂತಹ ವಸ್ತುಗಳು ಮತ್ತು ಬಣ್ಣಗಳನ್ನು ಉಪಯೋಗಿಸುವುದರಿಂದ, ನೀರಿನ ಮೂಲಗಳಾದ ಕೆರೆ, ಬಾವಿ, ನದಿ ಇತ್ಯಾದಿಗಳಲ್ಲಿ ನೀರು ಕಲುಷಿತಗೊಂಡು ಪರಿಸರ ಹಾಗೂ ನೀರು ಹಾಳಾಗುವ ಸಂದರ್ಭಗಳು ಹೆಚ್ಚು ಎಂದು ಅವರು ಎಚ್ಚರಿಸಿದರು. 

ಗೌರಿಗಣೇಶ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಬಣ್ಣರಹಿತ ಮಣ್ಣಿನ ಗಣೇಶ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ ತದನಂತರ ಸ್ಥಳೀಯ ಸಂಸ್ಥೆಗಳು ನಿಗಧಿಪಡಿಸಿದ ಸ್ಥಳಗಳಲ್ಲಿಯೇ ಮೂರ್ತಿಗಳನ್ನು ವಿಸರ್ಜಿಸಬೇಕು ಎಂದು ವಿನಂತಿಸಿದ್ದಾರೆ. ಮಣ್ಣಿನ ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಮೊಬೈಲ್ ಟ್ಯಾಂಕ್‌ಗಳಲ್ಲಿ, ಕಲ್ಯಾಣಿಗಳ ಪಕ್ಕದಲ್ಲಿ ಹಸಿ ಕಸ (ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ, ಇತ್ಯಾದಿ) ಪ್ರತ್ಯೇಕಿಸಿ ಮೂರ್ತಿಯೊಂದಿಗೆ ನೀರಿಗೆ ವಿಸರ್ಜಿಸದೆ ಪ್ರತ್ಯೇಕವಾಗಿ ವಿಂಗಡಿಸಿ ಸ್ಥಳೀಯ ಸಂಸ್ಥೆಗಳ ಕಸದ ವಾಹನಗಳಿಗೆ ನೀಡಬೇಕು. 

ಗಣೇಶ ಹಬ್ಬದ ಸಂದರ್ಭದಲ್ಲಿ ಬಳಸುವ ಧ್ವನಿವರ್ಧಕಗಳಿಂದ ಹೊರಸೂಸುವ ಶಬ್ಧಮಾಲಿನ್ಯದಿಂದ ಚಿಕ್ಕ ಮಕ್ಕಳಿಗೆ, ಹಿರಿಯ ನಾಗರಿಕರಿಗೆ, ಪ್ರಾಣಿ ಪಕ್ಷಿಗಳಿಗೆ ತೊಂದರೆಯಾಗದಠೆ ಶಬ್ಧಮಾಲಿನ್ಯವನ್ನು ತಡೆಗಟ್ಟಲು ಓಠಜ ಕಠಟಣಣಠ (ಖಜರಣಟಚಿಣಠ ಚಿಟಿಜ ಅಠಣಡಿಠ) ಖಣಟ, 2000 ರಲ್ಲಿನ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ವಿನಂತಿಸಿದ್ದಾರೆ. 

ಧ್ವನಿವರ್ಧಕಗಳನ್ನು ರಾತ್ರಿ 10ರಿಂದ ಬೆಳಗ್ಗೆ 6 ಗಂಟೆಯ ತನಕ ಯಾವುದೇ ತರಹದ ಧ್ವನಿವರ್ಧಕಗಳ ಬಳಕೆ ನಿಷೇಧಿಸಿದೆ.ಸಾರ್ವಜನಿಕ ಗಣಪತಿ ಸ್ಥಳದಲ್ಲಿ ಪರಿಸರ ಸ್ನೇಹಿ ಅಡಿಕೆ ತಟ್ಟೆ, ದೊನ್ನೆಗಳನ್ನು ಬಳಸಿ ಎಂದು ಪರಿಸರ ಅಧಿಕಾರಿ ಸೂಚಿಸಿದ್ದಾರೆ.