ಪಾಕಿಸ್ತಾನ ಪರ ಘೋಷಣೆ ಕೂಗಿದ ಕೆಎಲ್ಇ ವಿದ್ಯಾರ್ಥಿಗಳು ಕಾಲೇಜಿನಿಂದ ಅಮಾನತು
ಹುಬ್ಬಳ್ಳಿ,ಫೆ.16 : ನಗರದ ಕೆಎಲ್ಇ ಇಂಜಿನಿಯರಿಂಗ್ ಕಾಲೇಜಿನ ಕಾಶ್ಮಿರ ಮೂಲದ ಮೂವರು ವಿದ್ಯಾರ್ಥಿಗಳು 'ಪಾಕಿಸ್ತಾನ ಜಿಂದಾಬಾದ್' ಎಂದು ಘೋಷಣೆ ಕೂಗಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಕಾಲೇಜಿನ ಆಡಳಿತ ಮಂಡಳಿ ವಿದ್ಯಾರ್ಥಿಗಳನ್ನು ಅಮಾನತು ಮಾಡಿದೆ.ಕೆಎಲ್ ಇ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದಲ್ಲಿ ಓದುತ್ತಿರುವ ಅಮೀರ್, ಬಾಸೀತ್ ಮತ್ತು ತಾಲೀಬ್ ಎಂಬ ವಿದ್ಯಾರ್ಥಿಗಳು ಪುಲ್ವಾಮಾ ದಾಳಿ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಶುಕ್ರವಾರ ವಿದ್ಯಾರ್ಥಿಗಳು ವಿಡಿಯೋ ಮಾಡಿ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಈ ಕುರಿತು ಪ್ರತಿಕ್ರಿಯಿಸಿದ ಪ್ರಾಚಾರ್ಯ ಡಾ. ಬಸವರಾಜ ಆನಾಮಿ, 'ಸರ್ಕಾರಿ ಕೋಡಾದ ಅಡಿ ಮೂವರು ಕಾಶ್ಮಿರಿ ವಿದ್ಯಾರ್ಥಿಗಳು ಸೀಟು ಪಡೆದಿದ್ದರು. ವಿದ್ಯಾರ್ಥಿಗಳ ವೀಡಿಯೊ ಗಮನಿಸಿ ಪೊಲೀಸರಿಗೆ ನಾವೇ ಮಾಹಿತಿ ನೀಡಿದ್ದೇವೆ. ಅವರ ಮೇಲೆ ಕಾನೂನು ಕ್ರಮ ಕೈಗೊಂಡು ಅಮಾನತು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಗೋಕುಲ ಠಾಣೆ ಪೊಲೀಸರು ಆಗಮಿಸಿ, ವಿದ್ಯಾರ್ಥಿಗಳಿಂದ ಹಾಗೂ ಪ್ರಾಚಾರ್ಯರಿಂದ ಮಾಹಿತಿ ಪಡೆಯುತ್ತಿದ್ದಾರೆ. ಬಜರಂಗ ದಳದ ಕಾರ್ಯಕರ್ತರು ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ 