ನಾಗರಮುನ್ನೋಳಿ ಗ್ರಾಮಕ್ಕೆ ಪಿಯು ಕಾಲೇಜು ಮಂಜೂರು: ಎಂಎಲ್ಸಿ ಪ್ರಕಾಶ
PU college sanctioned for Nagaramunnoli village: MLC Prakash
ಹುಕ್ಕೇರಿ: ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಅನುಕೂಲ ಹಿ ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಸರ್ಕಾರಚಿಕ್ಕೋಡಿ 14 : ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿ ಗ್ರಾಮಕ್ಕೆ ಸರ್ಕಾರಿ ಪದವಿ ಪೂರ್ವ (ಪಿಯು) ಕಾಲೇಜು ಮಂಜೂರಾಗಿದ್ದು, ಇದು ಗ್ರಾಮೀಣ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ನೆರವಾಗಲಿದೆ ಎಂದು ಕರ್ನಾಟಕ ಸರ್ಕಾರದ ದೆಹಲಿ ಪ್ರತಿನಿಧಿ ಹಾಗೂ ಎಂಎಲ್ಸಿ ಪ್ರಕಾಶ ಹುಕ್ಕೇರಿ ಹೇಳಿದರು.ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಮಂಜೂರಾದ ಆದೇಶ ಪತ್ರವನ್ನು ವಿತರಿಸಿ ಮಾತನಾಡಿದ ಅವರು, ನಾಗರಮುನ್ನೋಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯನ್ನು ಉನ್ನತೀಕರಿಸಿ ಸರ್ಕಾರಿ ಪದವಿ ಪೂರ್ವ ಕಾಲೇಜನ್ನಾಗಿ ಮಾಡಲು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಶಾಲೆಯ ಮುಖ್ಯೋಪಾಧ್ಯಾಯರು, ಎಸ್.ಡಿ.ಎಂ.ಸಿ ಅಧ್ಯಕ್ಷರು ಹಾಗೂ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದರು.
ಗ್ರಾಮದಲ್ಲಿ ಪಿಯು ಕಾಲೇಜು ಇಲ್ಲದ ಕಾರಣ ವಿದ್ಯಾರ್ಥಿಗಳು ಮಜಲಟ್ಟಿ ಅಥವಾ ಚಿಕ್ಕೋಡಿಗೆ ತೆರಳಿ ಶಿಕ್ಷಣ ಪಡೆಯಬೇಕಾಗುತ್ತಿತ್ತು. ಇದರಿಂದ ಅನೇಕ ಬಡ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ನಂತರವೇ ಶಿಕ್ಷಣವನ್ನು ನಿಲ್ಲಿಸುವ ಪರಿಸ್ಥಿತಿ ಉಂಟಾಗಿತ್ತು ಎಂದು ಹೇಳಿದರು.ಬಡ ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಸಿಗುವಂತೆ ಮಾಡಲು ನಾಗರಮುನ್ನೋಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯನ್ನು ಪಿಯು ಕಾಲೇಜಾಗಿ ಉನ್ನತೀಕರಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಅಗತ್ಯ ಪತ್ರ ವ್ಯವಹಾರ ನಡೆಸಿ ಮನವಿ ಮಾಡಲಾಗಿತ್ತು.
ಅದರಂತೆ 2025ಹಿ26್ಫೂ ಸಾಲಿನ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯವ್ಯಯ ಘೋಷಣೆಯ ಕಂಡಿಕೆ 110ರಂತೆ ರಾಜ್ಯದ ಅರ್ಹ 50 ಸರ್ಕಾರಿ ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳಾಗಿ ಉನ್ನತೀಕರಿಸಲಾಗಿದ್ದು, ಅದರಲ್ಲಿ ಕ್ರ.ಸಂ. 8ರಲ್ಲಿ ನಾಗರಮುನ್ನೋಳಿ ಸರ್ಕಾರಿ ಪ್ರೌಢಶಾಲೆಯನ್ನು ಸರ್ಕಾರಿ ಪದವಿ ಪೂರ್ವ ಕಾಲೇಜಾಗಿ ಉನ್ನತೀಕರಿಸಿ ಸರ್ಕಾರ ಆದೇಶ ಹೊರಡಿಸಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ನಾಗರಮುನ್ನೋಳಿ ಗ್ರಾಮದ ಹಿರಿಯರಾದ ಸಿದ್ದಪ್ಪ ಮರ್ಯಾಯಿ ಮಾತನಾಡಿ, ಗ್ರಾಮದಲ್ಲಿ ಪಿಯು ಕಾಲೇಜು ಇಲ್ಲದ ಕಾರಣ ವಿದ್ಯಾರ್ಥಿಗಳು ಮಜಲಟ್ಟಿ ಮತ್ತು ಚಿಕ್ಕೋಡಿಗೆ ಹೋಗಬೇಕಾಗುತ್ತಿತ್ತು. ಇದರಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆ ಉಂಟಾಗುತ್ತಿತ್ತು.
ನಮ್ಮ ಮನವಿಗೆ ಸ್ಪಂದಿಸಿ ಎಂಎಲ್ಸಿ ಪ್ರಕಾಶ ಹುಕ್ಕೇರಿಯವರು ಪಿಯು ಕಾಲೇಜು ಮಂಜೂರು ಮಾಡಿಕೊಟ್ಟಿರುವುದಕ್ಕೆ ನಾವು ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಹೇಳಿದರು.ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪಿ.ಐ. ಭಂಡಾರಿ ಮಾತನಾಡಿ, ನಾಗರಮುನ್ನೋಳಿ ಗ್ರಾಮದಲ್ಲಿ ಎಸ್‌ಎಸ್‌ಎಲ್ಸಿ ನಂತರ ಪಿಯು ಶಿಕ್ಷಣ ಪಡೆಯಲು ವಿದ್ಯಾರ್ಥಿಗಳಿಗೆ ಬಹಳಷ್ಟು ತೊಂದರೆ ಆಗುತ್ತಿತ್ತು. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಎಂಎಲ್ಸಿ ಪ್ರಕಾಶ ಹುಕ್ಕೇರಿಯವರು ಪಿಯು ಕಾಲೇಜು ಮಂಜೂರು ಮಾಡಿಕೊಟ್ಟಿದ್ದು ಶ್ಲಾಘನೀಯವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ನಾಗರಮುನ್ನೋಳಿ ಗ್ರಾಮದ ಮುಖಂಡರಾದ ಸಿದ್ದಪ್ಪ ರ್ಯಾಯಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪಾಂಡುರಂಗ ಭಂಡಾರೆ, ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರು, ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಶಾಲೆಯ ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು.ಬಾಕ್ಸ್ಚಿಕ್ಕೋಡಿ ಪಟ್ಟಣದ ಅಂಕಲಿಕೂಟ- ದುರ್ಗಾಭವನ ವರೆಗೆ ರಸ್ತೆ ಅಗಲಿಕರಣಕ್ಕೆ 34 ವ್ಯಾಪಾರಸ್ಥರಿಗೆ ಪರಿಹಾರವಾಗಿ 1.9 ಕೋಟಿ ರೂ ಮಂಜೂರು ಮಾಡಲಾಗಿದೆ. ಉಪವಿಭಾಗಾಧಿಕಾರಿ.ಮುಖ್ಯಾಧಿಕಾರಿ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿ ರಸ್ತೆ ಅಗಲಿಕರಣ ಮಾಡಲು ಕ್ರಮ ತೆಗೆದುಕೊಳ್ಳಲಾಗುತ್ತದೆ. ಪ್ರಕಾಶ ಹುಕ್ಕೇರಿ ವಿಧಾನ ಪರಿಷತ್ ಸದಸ್ಯರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 