ಫೆ. 28ರಿಂದ ಪಿಯು ಪರೀಕ್ಷೆ, ವೆಬ್‌ಕಾಸ್ಟಿಂಗ್ ಕಣ್ಗಾವಲು
PU exams, webcasting to be monitored from Feb. 28
ಫೆ. 28ರಿಂದ ಪಿಯು ಪರೀಕ್ಷೆ, ವೆಬ್‌ಕಾಸ್ಟಿಂಗ್ ಕಣ್ಗಾವಲು
ಬೆಂಗಳೂರು 18: ದ್ವಿತೀಯ ಪಿಯು ಪರೀಕ್ಷೆ ಫೆ.28ರಿಂದ ಆರಂಭವಾಗಲಿದ್ದು, 1,217 ಕೇಂದ್ರಗಳಲ್ಲಿ 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಈ ಕುರಿತು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಶಾಲಾ ಶಿಕ್ಷಣ ಸಚಿವ ಮಧು ಬಂಗಾರ್ಪ, ‘ಪ್ರತಿ ಪರೀಕ್ಷಾ ಕೇಂದ್ರವೂ ಸಿಸಿಟಿವಿ ಕ್ಯಾಮೆರಾ ಒಳಗೊಂಡಿದೆ. ವಿವಿಧ ಹಂತದ ಅಧಿಕಾರಿಗಳು ವೆಬ್‌ಕಾಸ್ಟಿಂಗ್ ಮೂಲಕ ಪರೀಕ್ಷಾ ಚಟುವಟಿಕೆಗಳ ಮೇಲೆ ನಿರಂತರ ನಿಗಾವಹಿಸಲಿದ್ದಾರೆ. ಪರೀಕ್ಷಾ ಕೇಂದ್ರದ ಹೊರಗೂ ಕಟ್ಟುನಿಟ್ಟಿನ ಕಣ್ಗಾವಲಿಗೆ ವ್ಯವಸ್ಥೆ ಮಾಡಲಾಗುತ್ತಿದೆ’ ಎಂದರು.
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ನಡೆದರೆ ಅಂತಹ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆಪತ್ರಿಕೆ ಹರಿಬಿಡುವುದು, ಆರ್ಥಿಕ ಲಾಭಕ್ಕಾಗಿ ವಹಿವಾಟು ನಡೆಸುವ ವ್ಯಕ್ತಿಗಳ ಖಾತೆಗಳನ್ನು ನಿರ್ಬಂಧಿಸಲಾಗುವುದು. ಕಾನೂನು ಕ್ರಮ ಜರುಗಿಸಲಾಗುವುದು. ಹಿಂದೆ ಇಂತಹ ಕೃತ್ಯ ಎಸಗಿದ ಅಪರಾಧಿಗಳ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ನಿಷೇಧಿತ ಪ್ರದೇಶವಾಗಿರುತ್ತದೆ. ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಅಗತ್ಯ ಮುಂಜಾಗ್ರತಾ ಕ್ರಮ, ಬಂದೋಬಸ್ತ್ ಕೈಗೊಳ್ಳುವ ಹೊಣೆ ನೀಡಲಾಗಿದೆ ಎಂದರು.
ಪರೀಕ್ಷಾ ಕೇಂದ್ರದ ಒಳಗೆ ಮೊಬೈಲ್ ಫೋನ್, ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ನಿಷೇಧಿಸಲಾಗಿದೆ. ಹಿಂದಿನ ವರ್ಷದಂತೆ ಈ ಬಾರಿಯೂ ವಸ್ತ್ರಸಂಹಿತೆ ಇರುತ್ತದೆ ಎಂದು ಮಾಹಿತಿ ನೀಡಿದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 