ಪಡಗಾನೂರ ಶಾಲೆ ಮುಖ್ಯ ಶಿಕ್ಷಕ ಡಿ.ಎಚ್‌. ರಾಠೋಡಗೆ ಶಿಕ್ಷಕರತ್ನ ಪ್ರಶಸ್ತಿ

Padaganoor School Head Teacher D.H. Teacher's Award for Rathod

ಪಡಗಾನೂರ ಶಾಲೆ ಮುಖ್ಯ ಶಿಕ್ಷಕ ಡಿ.ಎಚ್‌. ರಾಠೋಡಗೆ ಶಿಕ್ಷಕರತ್ನ ಪ್ರಶಸ್ತಿ 

 ದೇವರ ಹಿಪ್ಪರಗಿ, 11;  ತಾಲೂಕಿನ ಪಡಗಾನೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ.ಡಿ. ಎಚ್‌. ರಾಠೋಡ ಇವರಿಗೆ ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ) ರಾಜ್ಯ ಘಟಕ ಹುಬ್ಬಳ್ಳಿ ಇವರು ಪ್ರತಿವರ್ಷ ನೀಡುವ ರಾಜ್ಯಮಟ್ಟದ ಗ್ರಾಮೀಣ ಶಿಕ್ಷಕರತ್ನ ಪ್ರಶಸ್ತಿಯನ್ನು ಪ್ರಸಕ್ತ 2025 ನೆ ಸಾಲಿನ ಶೈಕ್ಷಣಿಕ ಕ್ಷೇತ್ರದಲ್ಲಿ ಇವರು ಸಲ್ಲಿಸಿದ ಅತ್ಯುತ್ತಮ ಸೇವೆಯನ್ನು  ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. 

    ಶನಿವಾರ ದಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕ ಮತ್ತು ನೆಲಮಂಗಲ ತಾಲೂಕು ಘಟಕದ ಸಂಯುಕ್ತ ಆಶ್ರಯದಲ್ಲಿ ಜರುಗಿದ ಅದ್ದೂರಿ ಸಮಾರಂಭದಲ್ಲಿ ರಾಜಕೀಯ ಗಣ್ಯರು. ಶೈಕ್ಷಣಿಕ ಕ್ಷೇತ್ರದ ಪ್ರಮುಖರು. ಅಧಿಕಾರಿಗಳು. ಸಮಾಜದ ವಿವಿಧ ಮುಖಂಡರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಗ್ರಾಮೀಣ ಶಿಕ್ಷಕರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಸದರಿ ಪ್ರಶಸ್ತಿಗೆ ಪಾತ್ರರಾದ ಶಿಕ್ಷಕ ಡಿ. ಎಚ್‌.ರಾಠೋಡ ಅವರಿಗೆ. ಪಡಗಾನೂರ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಮಲ್ಲು ಬನಗೊಂಡ ಸೇರಿದಂತೆ ಎಸ್ ಡಿ ಎಮ್ ಸಿ ಪದಾಧಿಕಾರಿಗಳು. ಊರಿನ ಗಣ್ಯರು, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ