ಬಳ್ಳಾರಿ,ಏ.14 : ರೈತರಿಂದ ಭತ್ತವನ್ನು ಖರೀದಿ ಪ್ರಕ್ರಿಯೆ ಮೇ 15ರವರೆಗೆ ನಡೆಯಲಿದೆ. ಈ ಕಾಯರ್ಾಚರಣೆಯು 2019-20ನೇ ಸಾಲಿನ ಮುಂಗಾರು ಋತುವಿಗೆ ಮಾತ್ರ ಅನ್ವಯಿಸುತ್ತದೆ. ಹಿಂಗಾರು ಋತುವಿಗಲ್ಲ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ತಿಳಿಸಿದ್ದಾರೆ.
2019-20ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಬಳ್ಳಾರಿ ಜಿಲ್ಲೆಯ ರೈತರಿಂದ ಭತ್ತವನ್ನು ಖರೀದಿ ಮಾಡಲು ಬಳ್ಳಾರಿ/ಕುರುಗೋಡು ಎಪಿಎಂಸಿ ಯಾಡರ್್, ಸಿರಗುಪ್ಪ, ಸಂಡೂರು,ಕೂಡ್ಲಿಗಿ/ಕೊಟ್ಟೂರು, ಹೊಸಪೇಟೆ, ಕಂಪ್ಲಿ,ಹಗರಿಬೊಮ್ಮನಹಳ್ಳಿ, ಹಡಗಲಿ ಮತ್ತು ಹರಪನಳ್ಳಿ ಎಪಿಎಂಸಿ ಯಾಡರ್್ನಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.
ಸಾಮಾನ್ಯ ಭತ್ತಕ್ಕೆ ಕ್ವಿಂಟಾಲ್ಗೆ ರೂ.1815, ಗ್ರೇಡ್ ಎ ಭತ್ತಕ್ಕೆ ಕ್ವಿಂಟಾಲ್ಗೆ ರೂ.1835 ಬೆಂಬಲ ಬೆಲೆ ನಿಗದಿಪಡಿಸಲಾಗಿದೆ.ಮುಂಗಾರು ಋತುವಿನ ಬೆಂಬಲಬೆಲೆ ಯೋಜನೆಯಡಿಯಲ್ಲಿ ಖರೀದಿ ಕೇಂದ್ರಗಳಲ್ಲಿ ಏ.13ರಿಂದ ಮೇ 1ರವರೆಗೆ ನೋಂದಾಯಿಸಿಕೊಳ್ಳಬಹುದಾಗಿದ್ದು, ಅಷ್ಟರೊಳಗೆ ಖರೀದಿ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳಲು ರೈತ ಬಾಂಧವರಲ್ಲಿ ಅವರು ಮನವಿ ಮಾಡಿದ್ದಾರೆ. ಮೇ 15ರವರೆಗೆ ರೈತರಿಂದ ಭತ್ತವನ್ನು ಖರೀದಿ ಪ್ರಕ್ರಿಯೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ. ತಮ್ಮ ಆರ್.ಟಿ.ಸಿ ಮತ್ತು ಫಸಲು ದಾಖಲಾತಿಗಳಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿದ್ದಲ್ಲಿ ಸಂಬಂಧಿಸಿದ ರೈತ ಸಂಪರ್ಕ ಕೇಂದ್ರ ಆರ್.ಎಸ್.ಕೆ ಮತ್ತು ಗ್ರಾಮಲೆಕ್ಕಾಧಿಕಾರಿಗಳನ್ನು ಸಂಪಕರ್ಿಸಬೇಕು ಎಂದು ಅವರು ತಿಳಿಸಿದ್ದಾರೆ.ಕೇಂದ್ರ ಸಕರ್ಾರವು ರೈತರಿಂದ ಭತ್ತ ಖರೀದಿ ಅವಧಿಯನ್ನು ಮೇ 15ರವರೆಗೆ ಹಾಗೂ ಭತ್ತದ ಹಲ್ಲಿಂಗ್ ಅವಧಿಯನ್ನು ಆ.31ರವರೆಗೆ ವಿಸ್ತರಿಸಿ ಅನುಮೋದನೆ ನೀಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ