ಕೆಎಲ್‌ಇ ಕಾಹೇರ್ನಲ್ಲಿ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಗೌರವದ ಅಭಿನಂದನಾ ಸಮಾರಂಭ
Padma Shri felicitation ceremony for Dr. Prabhakar Kore at KLE Cairo
ಬೆಳಗಾವಿ ಜುಲೈ 01: ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ (ಕಾಹೇರ್) ಡೀಮ್ಡ್-ಟು-ಬಿ ವಿಶ್ವವಿದ್ಯಾಲಯವು ತನ್ನ ಗೌರವಾನ್ವಿತ ಕುಲಾಧಿಪತಿ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಪ್ರಭಾಕರ ಕೋರೆ ಅವರಿಗೆ ಭಾರತ ಸರ್ಕಾರವು ಶಿಕ್ಷಣ, ಆರೋಗ್ಯ ಸೇವೆ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಅಸಾಧಾರಣ ಸೇವೆಯನ್ನು ಗುರುತಿಸಿ ದೇಶದ ಪ್ರತಿಷ್ಠಿತ ನಾಗರಿಕ ಗೌರವಗಳಲ್ಲಿ ಒಂದಾದ ಪದ್ಮಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡಿದ ಹಿನ್ನೆಲೆಯಲ್ಲಿ ಭವ್ಯ ಅಭಿನಂದನಾ ಸಮಾರಂಭವನ್ನು ಆಯೋಜಿಸಿತು.
ಸಮಾರಂಭದಲ್ಲಿ ಕೆಎಲ್‌ಇ ಸೊಸೈಟಿಯ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀ ಮಹಾಂತೇಶ್ ಎಸ್. ಕೌಜಲಗಿ, ಉಪಾಧ್ಯಕ್ಷ ಶ್ರೀ ಬಸವರಾಜ ಎಸ್. ತಾತವಟಿ, ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಎಂ. ಕೆ. ಕವಟಗಿಮಠ, ಶ್ರೀ ಜಯಾನಂದ ಎಸ್. ಮುನವಳ್ಳಿ, ಡಾ. ವಿ. ಐ. ಪಾಟೀಲ, ಶ್ರೀ ವೈ. ಎಸ್. ಪಾಟೀಲ, ಶ್ರೀ ಪ್ರವೀಣ ಬಾಗೇವಾಡಿ, ಡಾ. ಪ್ರೀತಿ ದೊಡ್ಡವಾಡ, ಶ್ರೀ ಎಂ. ಸಿ. ಕೊಳ್ಳಿ ಹಾಗೂ ಕಾರ್ಯದರ್ಶಿ ಡಾ. ಎಸ್. ಎಸ್. ಜಲಾಲಪುರೆ ಸೇರಿದಂತೆ ಕೆಎಲ್‌ಇ ಸೊಸೈಟಿಯ ಜೀವಮಾನ ಸದಸ್ಯರು, ವಿಶ್ವವಿದ್ಯಾಲಯದ ಅಧಿಕಾರಿಗಳು, ಅಧ್ಯಾಪಕರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದು, ಈ ಹೆಮ್ಮೆಯ ಕ್ಷಣವನ್ನು ಸಂಭ್ರಮದಿಂದ ಆಚರಿಸಿದರು.
ಕಾರ್ಯಕ್ರಮವನ್ನು ಸ್ವಾಗತಿಸಿ ಮಾತನಾಡಿದ ಕಾಹೇರ್ನ ಕುಲಸಚಿವ ಡಾ. ವಿ. ಎಂ. ಪಟ್ಟಣಶೆಟ್ಟಿ ಅವರು ವಿಶ್ವವಿದ್ಯಾಲಯದ ಪರವಾಗಿ ಅಭಿನಂದನಾ ಪತ್ರವನ್ನು ವಾಚಿಸಿದರು. ಪತ್ರದಲ್ಲಿ ಡಾ. ಪ್ರಭಾಕರ ಕೋರೆ ಅವರ ದೂರದರ್ಶಿತ್ವದ ನಾಯಕತ್ವ, ಶಿಕ್ಷಣ, ಆರೋಗ್ಯ ಸೇವೆ, ಸಂಶೋಧನೆ ಮತ್ತು ಸಾಹಿತ್ಯ ಕ್ಷೇತ್ರಗಳ ಅಭಿವೃದ್ಧಿಗೆ ನೀಡಿದ ಅಪಾರ ಕೊಡುಗೆಗಳನ್ನು ಪ್ರಶಂಸಿಸಲಾಯಿತು. ರಾಷ್ಟ್ರ ನಿರ್ಮಾಣದ ದೃಷ್ಟಿಯಿಂದ ಗುಣಮಟ್ಟದ ಶಿಕ್ಷಣ, ಎಲ್ಲರಿಗೂ ಲಭ್ಯವಾಗುವ ಆರೋಗ್ಯ ಸೇವೆ ಹಾಗೂ ಸಂಸ್ಥೆಗಳ ಶ್ರೇಷ್ಠತೆಯನ್ನು ಬೆಳೆಸುವಲ್ಲಿ ಅವರು ತೋರಿದ ಅಚಲ ಬದ್ಧತೆಯನ್ನು ವಿಶೇಷವಾಗಿ ಶ್ಲಾಘಿಸಲಾಯಿತು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 