ನೀಲಕಂಠ ಶಾಸ್ತ್ರಿಗಳಿಗೆ ಪದ್ಮಭೂಷಣ ಪಂ. ಪುಟ್ಟರಾಜ ಪ್ರಶಸ್ತಿ ಪ್ರದಾನ

ನೀಲಕಂಠ ಶಾಸ್ತ್ರಿಗಳಿಗೆ ಪದ್ಮಭೂಷಣ ಪಂ. ಪುಟ್ಟರಾಜ ಪ್ರಶಸ್ತಿ ಪ್ರದಾನ  Padmabhushana Pt. Puttaraja Award conferred upon Neelakantha Sastry

ಲೋಕದರ್ಶನ ವರದಿ 

ಗದಗ, ಜು. 5: ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ನಡೆದ ಪಂಚಾಕ್ಷರಿ ಗವಾಯಿಗಳ 82ನೇ ಹಾಗೂ ಪಂ. ಪುಟ್ಟರಾಜ ಗವಾಯಿಗಳ 16ನೇ ಪುಣ್ಯಸ್ಮರಣೋತ್ಸವ ಮತ್ತು ಉಭಯ ಗುರುಗಳ ಜಾತ್ರಾ ಮಹೋತ್ಸವದ ಅಂಗವಾಗಿ 2026ನೇ ಸಾಲಿನ ಪದ್ಮಭೂಷಣ ಪಂ. ಪುಟ್ಟರಾಜ ಪ್ರಶಸ್ತಿ’ಯನ್ನು ಕೀರ್ತನ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗೈದ ನೀಲಕಂಠ ಶಾಸ್ತ್ರಿಗಳು (ಕೂಸಗೂರು) ಅವರಿಗೆ ಪ್ರದಾನ ಮಾಡಲಾಯಿತು.  ಕಾರ್ಯಕ್ರಮದಲ್ಲಿ ಗದುಗಿನ ತೋಂಟದಾರ್ಯ ಮಠದ ಡಾ. ಸಿದ್ದರಾಮ ಮಹಾಸ್ವಾಮಿಗಳು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.