ಚಿತ್ರಕಲಾ ಸ್ಪರ್ಧೆ : ರಾಜ್ಯಮಟ್ಟಕ್ಕೆ ತನುಜಾ ಕಾಂತಿ ಆಯ್ಕೆ
Painting competition: Tanuja Kanti selected for state level
ರಬಕವಿ-ಬನಹಟ್ಟಿ 31 :ಕನ್ನಡಪ್ರಭ ಚಿತ್ರಕಲಾ ಸ್ಪರ್ಧೆಯಲ್ಲಿ ತಾಲೂಕು ಮಟ್ಟದಲ್ಲಿ ದ್ವಿತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದ ಬನಹಟ್ಟಿಯ ಅಕ್ಕಮಹಾದೇವಿ ಬಳಗದ ಕನ್ನಡ ಮಾಧ್ಯಮ ಪ್ರೌಢಶಾಲೆಯ 10ನೇ ವರ್ಗದ ವಿದ್ಯಾರ್ಥಿನಿ ತನುಜಾ ಮ.ಕಾಂತಿ ಧಾರವಾಡದಲ್ಲಿ ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದ್ದ ವಿಭಾಗ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿಜೇತ ವಿದ್ಯಾರ್ಥಿನಿ ತನುಜಾಳನ್ನು ಸಂಸ್ಥೆಯ ಅಧ್ಯಕ್ಷೆ ಪ್ರತಿಭಾ ಶಿವಕುಮಾರ ಭದ್ರನ್ನವರ ಹಾಗೂ ಆಡಳಿತ ಮಂಡಳಿ ಸದಸ್ಯರು ಸಿಬ್ಬಂದಿ ಜೊತೆಗೆ ಶಾಲಾ ಆವರಣದಲ್ಲಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ರಾಮಣ್ಣಾ ಭದ್ರನ್ನವರ, ಶಿವಕುಮಾರ ಭದ್ರನ್ನವರ, ಮಾರ್ಗದರ್ಶಕ ಶಿಕ್ಷಕ ಅನೀಲ ಬಾಗಲಕೋಟ, ಎನ್.ಎನ್.ಉಪ್ಪಲದಿನ್ನಿ, ಡಿ.ಕೆ.ದೇವನಾಳ, ಪ್ರಾಥಮಿಕ, ಪ್ರೌಢಶಾಲಾ ಸಿಬ್ಬಂದಿವರ್ಗ, ವಿದ್ಯಾರ್ಥಿಗಳು ಇದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 