ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ: ದಾಳಿಯಲ್ಲಿ 46 ಜನರ ಸಾವು

Pakistan airstrikes on Afghanistan: 46 people killed in the attack

ಕಾಬೂಲ್ 25: ಪೂರ್ವ ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ ನಡೆಸಿದ್ದು, ದಾಳಿಯಲ್ಲಿ 46 ಜನರು ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ ಹೆಚ್ಚಾಗಿ ಮಹಿಳೆಯರು ಮತ್ತು ಮಕ್ಕಳು ಇದ್ದಾರೆ ಎಂದು ತಾಲಿಬಾನ್ ಸರ್ಕಾರಿ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಏತನ್ಮಧ್ಯೆ, ಪಾಕಿಸ್ತಾನಿ ತಾಲಿಬಾನ್ ಅಥವಾ ತೆಹ್ರೀಕ್-ಎ-ತಾಲಿಬಾನ್ ನ ಪಾಕಿಸ್ತಾನದ ವಕ್ತಾರ ಮೊಹಮ್ಮದ್ ಖುರಾಸಾನಿ ಅವರು, ದಾಳಿಯಲ್ಲಿ 27 ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 50 ಜನ ಸಾವನ್ನಪ್ಪಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ದಾಳಿಯ ಬಗ್ಗೆ ಪಾಕಿಸ್ತಾನ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.