ಶಂಕಿತ ಉಗ್ರರಿಂದ ಹತ್ಯೆಯಾದ ಸಬ್ ಇನ್ಸ್‍ಪೆಕ್ಟರ್ ಕುಟುಂಬಕ್ಕೆ ಪಳನಿಸ್ವಾಮಿ ಒಂದು ಕೋಟಿ ರೂ ಹಸ್ತಾಂತರ
ಚೆನ್ನೈ, ಜ 13 : ಕನ್ಯಾಕುಮಾರಿ ಜಿಲ್ಲೆಯಲ್ಲಿ ಕಳೆದ ವಾರ ಶಂಕಿತ ಇಬ್ಬರು ಉಗ್ರರ ಗುಂಡೇಟಿಗೆ ಬಲಿಯಾದ ವಿಶೇಷ ಸಬ್ ಇನ್ಸ್‍ಪೆಕ್ಟರ್ ವಿಲ್ಸನ್ ಕುಟುಂಬಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಸೋಮವಾರ ಒಂದು ಕೋಟಿ ರೂ ಹಣಕಾಸು ನೆರವನ್ನು ಹಸ್ತಾಂತರಿಸಿದ್ದಾರೆ.
ಕಳೆದ ಶುಕ್ರವಾರ ಪ್ರಕಟಿಸಿದಂತೆ ಮುಖ್ಯಮಂತ್ರಿಯವರು ಸಚಿವಾಲಯದ ಕಟ್ಟಡದಲ್ಲಿ ಸಬ್ ಇನ್ಸ್‍ಪೆಕ್ಟರ್ ಕುಟುಂಬಕ್ಕೆ ಒಂದು ಕೋಟಿ ರೂ. ಮೊತ್ತದ ಪರಿಹಾರ ಚೆಕ್ ಅನ್ನು ಹಸ್ತಾಂತರಿಸಿ, ಕುಟುಂಬದವರನ್ನು ಸಂತೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪಳನಿಸ್ವಾಮಿ ಅವರು, ವಿಶೇಷ ಸಬ್ ಇನ್ಸ್‍ಪೆಕ್ಟರ್ ಅವರ ಮಹಾತ್ಯಾಗವನ್ನು ಪರಿಗಣಿಸಿ ಒಂದು ಕೋಟಿ ರೂ. ಪರಿಹಾರ ಪ್ರಕಟಿಸಲಾಗಿತ್ತು. ಅದರಂತೆ ಪರಿಹಾರವನ್ನು ಅವರ ಕುಟುಂಬಕ್ಕೆ ನೀಡಲಾಗಿದೆ. ಅನುಕಂಪದ ಆಧಾರದ ಮೇಲೆ ವಿದ್ಯಾರ್ಹತೆಯನ್ನು ಪರಿಗಣಿಸಿ ಅವರ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದು ಅವರು ಹೇಳಿದ್ದಾರೆ. ಹುತಾತ್ಮರಾದ ಸಬ್ ಇನ್ಸ್ ಪೆಕ್ಟರ್ ಅವರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 