ಶಿವಯೋಗಿಗಳ ಪಲ್ಲಕ್ಕಿ ಉತ್ಸವ
Palanki festival of Shivayogis
ಉಗರಗೋಳ 17: ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದ ಗುರು ಶಿವಪ್ಪಯ್ಯ ಶಿವಯೋಗಿಗಳ ಮಠದಲ್ಲಿ ಕಾರ್ತೀಕ ಮಾಸದ ಸೋಮವಾರದ ಪ್ರಯುಕ್ತ, ವಾರ್ಷಿಕ ಜಾತ್ರಾ ಮಹೋತ್ಸವ ಜರುಗಿತು. ಗುರು ಶಿವಪ್ಪಯ್ಯ ಶಿವಯೋಗಿಗಳ ಗದ್ದುಗೆಗೆ ಮಹಾರುದ್ರಾಭಿಷೇಕ, ನೂರೊಂದು ಬಿಲ್ವಾರ್ಚನೆ, ಅಲಂಕಾರ, ಪೂಜೆ, ಮಹಾಮಂಗಳಾರತಿ ನೆರವೇರಿತು. ಮಠದಿಂದ ಹೂರಟ ಶ್ರೀ ಗುರು ಶಿವಪ್ಪಯ್ಯ ಶಿವಯೋಗಿಗಳ ಭಾವಚಿತ್ರದ ಮೆರವಣಿಗೆ, ಪಲ್ಲಕ್ಕಿ ಉತ್ಸವ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿ ಮಠ ತಲುಪಿತು. ಕರಡಿ ಮಜಲು ವೀರಭದ್ರ ವೀರಗಾಸೆ ಡೊಳ್ಳು ಕುಣಿತ, ಭಜನೆ, ಸುಮಂಗಲೆಯರ ಕುಂಭ ಮೇಳ ಗಮನ ಸೇಳೆದವು.
ಬೆಂಗಳೂರಿನ ನಿವೃತ್ತ ವಿಶೇಷ ಜಿಲ್ಲಾಧಿಕಾರಿ ಮಹೇಶ ಹಿರೇಮಠ ಅಧ್ಯಕ್ಷತೆಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಿದವು. ಬಸನಗೌಡ ಪಾಟೀಲ, ಶಿದ್ದನಗೌಡ ಗೂಡರಾಶಿ, ಗೀರೀಶ ಸತ್ತಿಗೇರಿ, ಸುನೀಲ ಬೆಳವಡಿ, ಜಗದನಗೌಡ ಗಂದಿಗವಾಡ, ವಿಜಯ ನರಗುಂದ, ಪರ್ಪ ಸರಾಫ, ಗೌಡಪ್ಪ ಗುಡೆನ್ನವರ, ಮಾದೇವ ಹಿರೇಹೊಳಿ, ಬಸುರಾಜ ಸಕಪ್ಪನವರ, ಮಾದೇವಪ್ಪ ಶಿದ್ದಾಪೂರ, ಶಿದ್ದಯ್ಯ ಶಿವಪ್ಪಯ್ಯನಮಠ ಹಾಗೂ ಗ್ರಾಮಸ್ಥರು ಮತ್ತು ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡಿದ್ದರು. ಭಕ್ತರಿಗೆ ಮಧ್ಯಾಹ್ನ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 