ಸೆ. 20ರಂದು ಪಂಚಮಸಾಲಿ ಸಂಘದ ರಾಜ್ಯಮಟ್ಟದ ಸಾಮಾನ್ಯ ಸಭೆ
Panchamasali Association's state-level general body meeting on September 20
ಕೊಪ್ಪಳ, ಆ. 7: ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ರಾಜ್ಯ ಘಟಕದ ವತಿಯಿಂದ ರಾಜ್ಯಮಟ್ಟದ ಸಾಮಾನ್ಯ ಸಭೆಯನ್ನು ಸೆಪ್ಟೆಂಬರ್ 20ರಂದು (ಭಾನುವಾರ) ಬೆಳಿಗ್ಗೆ 10 ಗಂಟೆಗೆ ಹರಿಹರ ನಗರದ ಶಿವಮೊಗ್ಗ ರಸ್ತೆಯ ಎಚ್.ಕೆ. ವೀರ್ಪ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಸೋಮನಗೌಡ ಎಂ. ಮಾಲಿಪಾಟೀಲ ತಿಳಿಸಿದ್ದಾರೆ.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಗಸ್ಟ್ 9ರಂದು ಸಂಘದ ಉಚ್ಛಾಟಿತ ಪ್ರಧಾನ ಕಾರ್ಯದರ್ಶಿ ಕರೆದಿರುವ ಸಭೆ ಸಂಘದ ನಿಯಮಾವಳಿಗೆ ವಿರುದ್ಧವಾಗಿದ್ದು, ಅದು ಕಾನೂನುಬದ್ಧ ಸಭೆಯಲ್ಲ ಎಂದು ಸ್ಪಷ್ಟಪಡಿಸಿದರು.
ಸಂಘದ ಕಾರ್ಯಕಾರಿ ಸಮಿತಿ ಸಭೆ ಕರೆಯಲು ರಾಜ್ಯಾಧ್ಯಕ್ಷರ ಪೂರ್ವಾನುಮತಿ ಕಡ್ಡಾಯವಾಗಿದ್ದು, ಅನುಮತಿ ಇಲ್ಲದೆ ಕರೆಯುವ ಯಾವುದೇ ಸಭೆಗೆ ಅಧಿಕೃತ ಮಾನ್ಯತೆ ಇರುವುದಿಲ್ಲ ಎಂದು ಅವರು ಹೇಳಿದರು.
ಆದ್ದರಿಂದ ಸಮಾಜದ ಸದಸ್ಯರು ಹಾಗೂ ಪದಾಧಿಕಾರಿಗಳು ಅನಧಿಕೃತ ಸಭೆಯಲ್ಲಿ ಭಾಗವಹಿಸಬಾರದು ಎಂದು ಮನವಿ ಮಾಡಿದರು.
ಸಂಘದಲ್ಲಿ ಸುಮಾರು 48 ಕೋಟಿ ಮೊತ್ತದ ವ್ಯವಹಾರ ನಡೆದಿದ್ದು, ಅದರ ಲೆಕ್ಕಪತ್ರಗಳನ್ನು ಸಾಮಾನ್ಯ ಸಭೆಯಲ್ಲಿ ಸದಸ್ಯರ ಮುಂದಿಡಲಾಗುವುದು ಎಂದು ತಿಳಿಸಿದರು. ಸಂಘದಲ್ಲಿ ಅಥವಾ ಸಮಾಜದಲ್ಲಿ ಗೊಂದಲ ಸೃಷ್ಟಿಸಲು ಯತ್ನಿಸುವವರಿಗೆ ಸಂಘದಲ್ಲಿ ಮುಂದುವರಿಯಲು ಅವಕಾಶ ನೀಡುವುದಿಲ್ಲ ಎಂದೂ ಎಚ್ಚರಿಕೆ ನೀಡಿದರು.
ರಾಜ್ಯದಲ್ಲಿ ಸುಮಾರು 80 ಲಕ್ಷ ಪಂಚಮಸಾಲಿ ಸಮಾಜದ ಜನರಿದ್ದು, ಅವರನ್ನು ಸಂಘಟಿಸಿ ಸಮಾಜವನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಸೆಪ್ಟೆಂಬರ್ 20ರಂದು ಸಾಮಾನ್ಯ ಸಭೆ ಕರೆಯಲಾಗಿದೆ. ಸಭೆಯಲ್ಲಿ ಸಂಘದ ಸದಸ್ಯತ್ವ ಅಭಿಯಾನ, ಸಂಘದ ಚಟುವಟಿಕೆಗಳು ಹಾಗೂ ಬೈಲಾದಲ್ಲಿ ಅಗತ್ಯ ತಿದ್ದುಪಡಿಗಳ ಕುರಿತು ಸದಸ್ಯರಿಂದ ಸಲಹೆ-ಸೂಚನೆಗಳನ್ನು ಆಹ್ವಾನಿಸಲಾಗುವುದು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರಗೌಡ ಪಾಟೀಲ, ಜಿಲ್ಲಾ ಅಧ್ಯಕ್ಷ ಬಸವನಗೌಡ ತೊಂಡಿಹಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವರಾಜ ಹಾಲಸಮುದ್ರ ಸೇರಿದಂತೆ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬಡೆಕೊಳ್ಳಮಠದ ಬಳಿ ಅಪಘಾತ ತಡೆಗೆ ತಾತ್ಕಾಲಿಕ ಕ್ರಮ: ಮಳೆಗಾಲ ಬಳಿಕ ಶಾಶ್ವತ ಕಾಮಗಾರಿ
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ 